ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಪರಿಹಾರ

ಪರೀಕ್ಷಾ ಕೇಂದ್ರದಲ್ಲಿ ಕುಳಿತಿದ್ದ ಅನುಶ್ರೀಯನ್ನು 15 ನಿಮಿಷ ಬಳಿಕ ಬೇರೆ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆಘಾತದಿಂದ ಕುಸಿದು ಬಿದ್ದಿದ್ದಳು. ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು.

ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಪರಿಹಾರ
ಮೃತ ವಿದ್ಯಾರ್ಥಿನಿ ಅನುಶ್ರೀ
Updated By: sandhya thejappa

Updated on: Mar 31, 2022 | 8:56 AM

ಮೈಸೂರು: ಮಾರ್ಚ್ 28ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಎಸ್ಎಸ್ಎಲ್​ಸಿ (SSLC) ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆ (Education Department) ಒಂದು ಲಕ್ಷ ಪರಿಹಾರ ನೀಡಿದೆ. ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಚೆಕ್ ವಿತರಣೆ ಮಾಡಿದ್ದಾರೆ. ಟಿ ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ವಿದ್ಯಾರ್ಥಿನಿ ಅನುಶ್ರೀ, ಮೊದಲ ದಿನ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುವ ವೇಳೆ ಗೊಂದಲಗೊಂಡು ಆತಂಕದಲ್ಲಿ ಕುಸಿದು ಬಿದ್ದಿದ್ದಳು.

ಪರೀಕ್ಷಾ ಕೇಂದ್ರದಲ್ಲಿ ಕುಳಿತಿದ್ದ ಅನುಶ್ರೀಯನ್ನು 15 ನಿಮಿಷ ಬಳಿಕ ಬೇರೆ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆಘಾತದಿಂದ ಕುಸಿದು ಬಿದ್ದಿದ್ದಳು. ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಈಕೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಮಾರ್ಚ್​ 28ಕ್ಕೆ ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಭೇಟಿ ನೀಡಿದ್ದರು. ಆರೋಗ್ಯಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದ್ದು ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗ್ರತ ಕ್ರಮವನ್ನು ಕೈಗೊಳ್ಳಲಾಗಿತ್ತು. ಕೊವಿಡ್ ಪರೀಕ್ಷೆ ಹಾಗೂ ವಿದ್ಯಾರ್ಥಿಗಳಿಗೆ ತಾಪಮಾನ ಪರೀಕ್ಷೆ ಎಲ್ಲವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸಿದ್ದರು. ಘಟನೆ ಬಗ್ಗೆ ತಿಳಿದು ಶಿಕ್ಷಣ ಸಚಿವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿಕೆ ನೀಡಿದ್ದರು.ಘಟನೆ ಬಗ್ಗೆ ತಿಳಿದು ಶಿಕ್ಷಣ ಸಚಿವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ

‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?

ಕಂಟೇನರ್ ಹಾಗೂ ಲಾರಿ ನಡುವೆ ಡಿಕ್ಕಿ; ಅನಾನಸ್ ತುಂಬಿಕೊಂಡ ಲಾರಿ ಬೆಂಕಿಗಾಹುತಿ

Published On - 8:48 am, Thu, 31 March 22