G20 Summit: ಜಿ 20 ಶೃಂಗಸಭೆಯ ಸದಸ್ಯರು ಮೈಸೂರು ಅರಮನೆಗೆ ಭೇಟಿ, ಆಗಸ್ಟ್ 1, 2 ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

G20 Summit Mysuru: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2 ರಂದು ಜಿ 20 ಶೃಂಗಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯವಾಗು ವಿದೇಶಿ ಗಣ್ಯರು ಮೈಸೂರು ಅರಮನೆಗೂ ಭೇಟಿ ನೀಡಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

G20 Summit: ಜಿ 20 ಶೃಂಗಸಭೆಯ ಸದಸ್ಯರು ಮೈಸೂರು ಅರಮನೆಗೆ ಭೇಟಿ, ಆಗಸ್ಟ್ 1, 2 ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ಮೈಸೂರು ಅರಮನೆ
Edited By: Rakesh Nayak Manchi

Updated on: Jul 30, 2023 | 4:11 PM

ಮೈಸೂರು, ಜುಲೈ 30: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2 ರಂದು ನಡೆಯುವ ಜಿ 20 ಶೃಂಗಸಭೆಯಲ್ಲಿ (G20 Summit) ಭಾಗಿಯಾಗುವ ವಿದೇಶಿ ಗಣ್ಯರು ಮೈಸೂರು ಅರಮನೆಗೆ (Mysuru Palace) ಭೇಟಿ ನೀಡಲಿದ್ದಾರೆ. ಅಗತ್ಯ ಮುಂಜಾಗೃತ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ‌ ನಿರ್ಬಂಧ ವಿಧಿಸಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಉಪ ನಿರ್ದೇಶಕ ಟಿ. ಎಸ್. ಸುಬ್ರಮಣ್ಯ, ಆಗಸ್ಟ್ 1 ರ ಮಧ್ಯಾಹ್ನ 2.30 ರಿಂದ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 2 ರಂದು ರಾತ್ರಿ 7 ರಿಂದ 8 ಗಂಟೆಯವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ವೀಕ್ಷಣೆಗೂ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: G-20 Summit: ಜಿ-20 ಶೃಂಗಸಭೆಗೆ ಆಗಮಿಸಿದ್ದ ವಿದೇಶಿ ಗಣ್ಯರು ನೆಟ್ಟ ಗಿಡಗಳೇ ಮಾಯ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಜಿ 20 ಶೃಂಗಸಭೆಗೆ ಚಾಲನೆ ನೀಡಲಾಗಿತ್ತು. ಕರ್ನಾಟಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಕಡೆಗಳಲ್ಲಿ ಶೃಂಗಸಭೆ ಆಯೋಜಿಸಲಾಗಿದೆ. ಈ ಪೈಕಿ ಬೆಂಗಳೂರು ಮತ್ತು ಹಂಪಿಯಲ್ಲಿ ಶೃಂಗಸಭೆ ನಡೆದಿದ್ದು, ಮೈಸೂರಿನಲ್ಲಿ ಆಗಸ್ಟ್ ಒಂದು ಮತ್ತು ಎರಡರಂದು ನಡೆಯಲಿದೆ. ಆಗಸ್ಟ್ 16ರಿಂದ 19ರ ವರೆಗೆ ಮತ್ತೆ ಬೆಂಗಳೂರಿನಲ್ಲಿ ಶೃಂಗಸಭೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us