ರಾತ್ರೋರಾತ್ರಿ ಬೃಹತ್ ಮರಗಳು ಮಂಗಮಾಯ; ಕಡಿದ ಮರಕ್ಕೆ ಶ್ರದ್ಧಾಂಜಲಿ, ತಪ್ಪಿತಸ್ಥರ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಮೈಸೂರು ಗ್ರಾಹರ ಪರಿಷತ್ ಹಾಗೂ ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿಯಿಂದ ವಿನೂತನ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಕಡಿದ ಮರದ ಬುಡಕ್ಕೆ ಪೂಜೆ ಸಲ್ಲಿಸಿ, ಹೂಗಳನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ರಾತ್ರೋರಾತ್ರಿ ಬೃಹತ್ ಮರಗಳು ಮಂಗಮಾಯ; ಕಡಿದ ಮರಕ್ಕೆ ಶ್ರದ್ಧಾಂಜಲಿ, ತಪ್ಪಿತಸ್ಥರ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ
ರಾತ್ರೋರಾತ್ರಿ ಬೃಹತ್ ಮರಗಳು ಮಂಗಮಾಯ; ಕಡಿದು ಬೋಳಾದ ಮರಕ್ಕೆ ಶ್ರದ್ಧಾಂಜಲಿ, ತಪ್ಪಿತಸ್ಥರ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ
Follow us
TV9 Web
| Updated By: ಆಯೇಷಾ ಬಾನು

Updated on:Dec 26, 2021 | 12:43 PM

ಮೈಸೂರು: ಪರಿಸರ ಪ್ರೇಮಿಗಳು ಮರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಅಪರೂಪದ ಘಟನೆ ಮೈಸೂರಿನಲ್ಲಿ ನಡೆದಿದೆ. ಮರ ಕಡಿದ ಸ್ಥಳದಲ್ಲಿ ಕಡಿದು ಬೋಳಾದ ಮರಕ್ಕೆ ಪೂಜೆ ಸಲ್ಲಿಸಿ ಮತ್ತೆ ಚಿಗುರಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಮೈಸೂರು ಗ್ರಾಹರ ಪರಿಷತ್ ಹಾಗೂ ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿಯಿಂದ ವಿನೂತನ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಮೈಸೂರಿನ ಯಾದವಗಿರಿಯ ವಿವೇಕಾನಂದ ರಸ್ತೆ ಬಳಿ ಕಡಿದ ಮರದ ಬುಡಕ್ಕೆ ಪೂಜೆ ಸಲ್ಲಿಸಿ, ಹೂಗಳನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಮೈಸೂರಿನ ಯಾದವಗಿರಿಯ ವಿವೇಕಾನಂದ ರಸ್ತೆ ಬಳಿ ಡಿಸೆಂಬರ್ 13 ರ ರಾತ್ರಿ ಮೂರು ಬೃಹತ್ ಹಾಗೂ ಹಳೆಯ ಮರಗಳನ್ನು ಕಡೆಯಲಾಗಿತ್ತು. ಆದ್ರೆ ಮರ ಕಡೆದದಕ್ಕೆ ಕಾರಣವಿರಲಿಲ್ಲ. ಹೀಗಾಗಿ ಪರಿಸರ ಪ್ರೇಮಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸಂಪರ್ಕಿಸಿದಾಗ ಅವರಿಂದ ಉತ್ತಮ ರೀತಿಯ ಪ್ರತಿಕ್ರಿಯೆ ಸಿಕ್ಕಿಲ್ಲ. ಅಲ್ಲದೆ ಫೆಬ್ರವರಿ 27ರಂದು 12ft 40 ವರ್ಷದ ಅರಳಿ ಮರವನ್ನೂ ಸಹ ಕಡಿಯಲಾಗಿತ್ತು. ಈ ಬಗ್ಗೆ ಅನೇಕ ಎನ್ಜಿಒಗಳು, ಎಂಜಿಪಿಗಳು ಅರಣ್ಯ ಇಲಾಖೆ ಗಮನಕ್ಕೆ ತರುವ ಪ್ರಯತ್ನಗಳನ್ನು ಮಾಡಿದ್ದವು ಆದ್ರೆ ಆ ವೇಳೆ ಕೂಡ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಸದ್ಯ ಅಧಿಕಾರಿಗಳ ನಿರ್ಲಕ್ಯಕ್ಕೆ ಬೇಸತ್ತು ಎಂಜಿಪಿ ಸದಸ್ಯರು (ಎಸ್. ಶೋಬನಾ ಮತ್ತು ಭಾಮಿ ಶೆಣೈ) ಇತ್ತೀಚೆಗೆ ನೇಮಕಗೊಂಡ ಡಿಸಿಎಫ್ ಕಮಲಾ ಕರಿಕಾಳನ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೆ. ಮನವಿಗೆ ಸ್ಪಂದಿಸಿದ ಡಿಸಿಎಫ್ ಕಮಲಾ ಮರ ಕಡಿದ ಸ್ಥಳಗಳಲ್ಲಿರುವ ಸಿಸಿ ಟಿವಿಗಳನ್ನು ಪರಿಶೀಲಿಸಿ ಇದರ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ಹಾಕಿ 50,000 ರೂ ದಂಡ ಹಾಕುವುದಾಗಿ ತಿಳಿಸಿದ್ದಾರೆ.

ರಸ್ತೆ ಅಭಿವೃದ್ಧಿ ನೆಪದಲ್ಲಿ ಮರಗಳ ಹನನ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅನುಮತಿ ನೀಡದ ಕಾರಣ ರಾತ್ರೋರಾತ್ರಿ ಮರಗಳನ್ನ ಕಡಿಯಲಾಗುತ್ತಿದೆ. ಈ ರೀತಿ ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಮರ ಕಡಿದರೆ ಆ ಜಾಗದಲ್ಲಿ 50 ಗಿಡ ನೆಡಬೇಕು ಎಂದು ಗ್ರಾಹಕರ ಪರಿಷತ್ ಸದಸ್ಯ ಭಾಮಿ ಶಣೈ ಮರ ಕಡಿದವರ ವಿರುದ್ಧ ಗರಂ ಆಗಿದ್ದಾರೆ.

ಇದನ್ನೂ ಓದಿ: ಹಾಸಿಗೆ ಹಿಡಿಯುವಂತೆ ಮಾಡಿದ ಹಿಟ್ ಅಂಡ್ ರನ್ ಕೇಸ್; ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಣ್ಣೀರು ಹಾಕಿದ ವಿಶೇಷಚೇತನ ಮಹಿಳೆ

Published On - 12:42 pm, Sun, 26 December 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ