ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೆ ಎಂ ಎಫ್ ಅಧಿಕಾರಿಗಳು
ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾಗಿದೆ. ಭಾರೀ ಪ್ರಮಾಣದಲ್ಲಿ ನಕಲಿ ತುಪ್ಪವನ್ನು ತಯಾರಿಸಿ ಮೈಸೂರು ನಗರದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಮೈಸೂರಿನ ಹೊಸಹುಂಡಿಯಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಲಾಗಿತ್ತು.
ಮೈಸೂರು: ರಾಜ್ಯದಲ್ಲಿ ನಕಲಿ ತುಪ್ಪ ಮಾರಾಟ ಮಾಡುವ ಜಾಲ ಹೆಚ್ಚಾಗಿದೆ. ಬ್ರಾಂಡ್ಗಳ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಮಾಡುವ ದಂಧೆ ರಾಜ್ಯದ ಹಲೆವೆಡೆ ತೆಲೆ ಎತ್ತಿವೆ. ಇದೀಗ ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾಗಿದೆ. ಭಾರೀ ಪ್ರಮಾಣದಲ್ಲಿ ನಕಲಿ ತುಪ್ಪವನ್ನು ತಯಾರಿಸಿ ಮೈಸೂರು ನಗರದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಮೈಸೂರಿನ ಹೊಸಹುಂಡಿಯಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಲಾಗಿತ್ತು. ಈ ಘಟಕದಲ್ಲಿ ಡಾಲ್ಡಾ ತುಪ್ಪವನ್ನು ಮಿಶ್ರಣ ಮಾಡಿ ನಕಲಿ ತುಪ್ಪ ತಯಾರಿಸಿ ಗೋಡೋನ್ನಲ್ಲಿ ಶೇಖರಿಸಿಡಲಾಗುತ್ತಿತ್ತು. ಈ ಬಗ್ಗೆ ಯುವ ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಶಾಂತ ಎನ್ನುವವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಕೆ ಎಂ ಎಫ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಿನಿ ತುಪ್ಪದಂತೆ ಕಾಣಲು ಅದಕ್ಕೆ ಡಾಲ್ಡಾ ತುಪ್ಪವನ್ನು ಮಿಶ್ರಣ ಮಾಡಿ ನಕಲಿ ತುಪ್ಪ ತಯಾರಿಸಲಾಗುತ್ತಿತ್ತು. ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹೊಸಹುಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೊಸಹುಂಡಿಯಲ್ಲಿ ಈ ದಂದೆ ನಡೆಯುತ್ತಿದ್ದು, ಇದೀಗ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಕಳೆದ ನಾಲ್ಕು ತಿಂಗಳಿನಿಂದ ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪವನ್ನು ಮಾರಟಮಾಡುತ್ತಿದ್ದ ಜಾಲ ಪೊಲೀಸರ ಬಲೆಗೆ ಬಿದ್ದಿದೆ.
ಇದನ್ನೂ ಓದಿ:
ಪ್ರೇಯಸಿಯ ಪತಿಯಿಂದ ತಪ್ಪಿಸಿಕೊಳ್ಳಲು ಐದನೇ ಅಂತಸ್ತಿನಿಂದ ಹಾರಿದ ಯುವಕ; ಗಾಬರಿ ಪ್ರಾಣಕ್ಕೇ ಕುತ್ತು ತಂದ ಘಟನೆ ಇದು !
ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ