ಮಗನ ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ; ಮೈಸೂರು ಡಿಸಿ, ಎಸ್ಪಿಗೆ ಮನವಿ

ಮನೆಯಲ್ಲಿದ್ದ ಸ್ವಾಮಿ ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪಾಪಣ್ಣ ಕುಟುಂಬಸ್ಥರ ಹಲ್ಲೆಯಿಂದ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಪಾಪಣ್ಣ ತಮ್ಮ ಶಿವಣ್ಣ, ಪ್ರಭಾವ ಬಳಸಿ ಮರಣೋತ್ತರ ಪರೀಕ್ಷೆಗೆ ಬಿಟ್ಟಿಲ್ಲವೆಂದು ಆರೋಪಿಸಿದ್ದಾರೆ.

ಮಗನ ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ; ಮೈಸೂರು ಡಿಸಿ, ಎಸ್ಪಿಗೆ ಮನವಿ
ಚೋಳಮ್ಮ ಕುಟುಂಬ
Follow us
TV9 Web
| Updated By: ಆಯೇಷಾ ಬಾನು

Updated on:May 17, 2022 | 2:51 PM

ಮೈಸೂರು: ಮಗನ ಸಾವಿಗೆ ನ್ಯಾಯ ಸಿಗದ ಹಿನ್ನೆಲೆ ಮೈಸೂರಿನ ಕುಟುಂಬವೊಂದು ದಯಾಮರಣಕ್ಕೆ(Euthanasia) ಅರ್ಜಿ ಸಲ್ಲಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಚೋಳಮ್ಮ ಕುಟುಂಬ ತನ್ನ ಮಗನ ಸಾವಿಗೆ ನ್ಯಾಗ ಸಿಕ್ಕಿಲ್ಲವೆಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿಕೊಂಡಿದೆ.

ಘಟನೆ ಹಿನ್ನೆಲೆ ಫೆಬ್ರವರಿ 14ರಂದು ಚೋಳಮ್ಮನವರ ಪುತ್ರ ಸ್ವಾಮಿ ಮೃತಪಟ್ಟಿದ್ದರು. ಅದೇ ಗ್ರಾಮದ ಯುವತಿಯನ್ನು ಸ್ವಾಮಿ ಪ್ರೀತಿಸುತ್ತಿದ್ದ ಎಂಬ ಆರೋಪವಿದೆ. ಏಕೆಂದರೆ ಮೃತ ಸ್ವಾಮಿ ತನ್ನ ಕೈ ಮೇಲೆ ಆಕೆಯ ಹೆಸರು ಹಚ್ಚೆ ಹಾಕಿಸಿಕೊಂಡಿದ್ದ. ಗ್ರಾಮದ ಪಾಪಣ್ಣ ಎಂಬುವವರ ಮನೆಯಲ್ಲಿ 2 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಸ್ವಾಮಿ, ಪಾಪಣ್ಣನ ಮಗಳನ್ನೇ ಪ್ರೀತಿಸಿದ್ದ ಎನ್ನಲಾಗಿದೆ. ಪ್ರೇಮಿಗಳ ದಿನಾಚರಣೆ ವೇಳೆ ಪಾಪಣ್ಣನ ಮಗಳ ಹೆಸರನ್ನು ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಇದೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳವಾಗಿತ್ತು. ಆಗ ಸ್ವಾಮಿ ಕುಟುಂಬದವರ ಮೇಲೆ ಪಾಪಣ್ಣ ಕಡೆಯವರು ರಸ್ತೆಯಲ್ಲಿ ಹಲ್ಲೆ ಮಾಡಿದ್ದರು.

ಮನೆಯಲ್ಲಿದ್ದ ಸ್ವಾಮಿ ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪಾಪಣ್ಣ ಕುಟುಂಬಸ್ಥರ ಹಲ್ಲೆಯಿಂದ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಪಾಪಣ್ಣ ತಮ್ಮ ಶಿವಣ್ಣ, ಪ್ರಭಾವ ಬಳಸಿ ಮರಣೋತ್ತರ ಪರೀಕ್ಷೆಗೆ ಬಿಟ್ಟಿಲ್ಲವೆಂದು ಆರೋಪಿಸಿದ್ದಾರೆ. ಪುತ್ರನನ್ನು ಕಳೆದುಕೊಂಡ ತಾಯಿ ನ್ಯಾಯಕ್ಕಾಗಿ ಅಲೆದಾಡಿದ್ದಾರೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಅಥವಾ ದಯಾಮರಣ ನೀಡಿ ಎಂದು ಮೈಸೂರು ಡಿಸಿ, ಎಸ್ಪಿಗೆ ನೊಂದ ತಾಯಿ ಚೋಳಮ್ಮ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಏನಿದು ದಯಾಮರಣ? ಆರೋಗ್ಯ ಸಮಸ್ಯೆ ಅಥವಾ ಜೀವನವನ್ನೇ ನಡೆಸಲು ಸಾಧ್ಯವಿಲ್ಲ ಎಂಬ ಸ್ಥಿತಿಗೆ ಮನುಷ್ಯ ತಲುಪಿದಾಗ ಮುಂದೆ ಈ ಸಮಸ್ಯೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲದ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಮೂಲಕ ಕೇಳಿಕೊಳ್ಳುವುದೇ ದಯಾಮರಣ. ಹಲವು ರಾಷ್ಟ್ರಗಳಲ್ಲಿ ದಯಾಮರಣಕ್ಕೆ ಅನುಮತಿ ಇದೆ.

Published On - 2:51 pm, Tue, 17 May 22

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ