ಕಳೆದ 3 ವರ್ಷಗಳಲ್ಲಿ ರೈತರ ಆತ್ಮಹತ್ಯೆ ಕಡಿಮೆ: ಬೆಳಗಾವಿ ಜಿಲ್ಲೆಯಲ್ಲಿ 200 ಮಂದಿ, ಎರಡನೇ ಸ್ಥಾನದಲ್ಲಿರುವ ಮೈಸೂರು ಜಿಲ್ಲೆಯಲ್ಲಿ 191 ಮಂದಿ ಸಾವು

ಮೈಸೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಲ್ಲಿ ಹೆಚ್ಚಿನವರು ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕಿನವರು ಅಕ್ರಮವಾಗಿ ತಂಬಾಕು ಬೆಳೆದವರು. ಅವರು ಖಾಸಗಿ ಲೇವಾದೇವಿದಾರರಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದಿದ್ದಾರೆ. ಅನೇಕರು ತಮ್ಮ ಮಕ್ಕಳ ಮದುವೆ ಮತ್ತು ಶಾಲಾ ಶುಲ್ಕಕ್ಕಾಗಿ ಭಾರಿ ಮೊತ್ತವನ್ನು ಖರ್ಚು ಮಾಡಿದ್ದಾರೆ- ನಾಗೇಂದ್ರ

ಕಳೆದ 3 ವರ್ಷಗಳಲ್ಲಿ ರೈತರ ಆತ್ಮಹತ್ಯೆ ಕಡಿಮೆ: ಬೆಳಗಾವಿ ಜಿಲ್ಲೆಯಲ್ಲಿ 200 ಮಂದಿ, ಎರಡನೇ ಸ್ಥಾನದಲ್ಲಿರುವ ಮೈಸೂರು ಜಿಲ್ಲೆಯಲ್ಲಿ 191 ಮಂದಿ ಸಾವು
ಕಳೆದ 3 ವರ್ಷಗಳಲ್ಲಿ ರೈತರ ಆತ್ಮಹತ್ಯೆ ಕಡಿಮೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Feb 21, 2023 | 10:47 AM

ಮೈಸೂರು: ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಗಳು (Farmer suicides) ಮೂರು ವರ್ಷಗಳ ಅವಧಿಯಲ್ಲಿ 33 % ರಷ್ಟು ಕಡಿಮೆಯಾಗಿದೆ. 2020 ರಿಂದ ಆರಂಭಗೊಂಡು 2023 ರ ಫೆಬ್ರವರಿ ಮಧ್ಯದವರೆಗೆ ಇತ್ತೀಚಿನ ಸರ್ಕಾರಿ ಅಂಕಿಅಂಶಗಳು ತೋರಿಸುತ್ತವೆ. ಈ ಅವಧಿಯಲ್ಲಿ ರಾಜ್ಯದಲ್ಲಿ 2,082 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 200 ಮಂದಿ ಸಾವನ್ನಪ್ಪಿರುವ ಜಿಲ್ಲೆಗಳ ಪೈಕಿ ಬೆಳಗಾವಿ (Belagavi) ಅಗ್ರಸ್ಥಾನದಲ್ಲಿದೆ. 191 ಪ್ರಕರಣಗಳೊಂದಿಗೆ ಮೈಸೂರು (Belagavi) ಎರಡನೇ ಸ್ಥಾನದಲ್ಲಿದೆ. ಕಳೆದ ವಾರ ಪಕ್ಷೇತರ ಶಾಸಕ ಯಶವಂತರಾಯಗೌಡ ವಿಠಲಗೌಡ ಪಾಟೀಲ (Independent MLA Yashvantharaygouda Vittalagouda Patil) ಸದನದಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಕಂದಾಯ ಸಚಿವ ಆರ್ ಅಶೋಕ (R Ashoka) ಅವರು ಉತ್ತರಿಸಿದ್ದು, ಅವರು ಹಂಚಿಕೊಂಡ ವಿವರ ಹೀಗಿದೆ: 2020-21ರಲ್ಲಿ 855, 2021-22ರಲ್ಲಿ 917 ಮತ್ತು 2022-23ರಲ್ಲಿ (2023ರ ಫೆಬ್ರವರಿ ಮಧ್ಯದವರೆಗೆ) 310 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ 2020-21ರಲ್ಲಿ 68, 2021-22ರಲ್ಲಿ 82, 2022-2ರಲ್ಲಿ 41 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ (173), ಧಾರವಾಡ (169), ಚಿಕ್ಕಮಗಳೂರು (145), ಯಾದಗಿರಿ (115) ಮತ್ತು ಹಾಸನ (111) ಹೆಚ್ಚಿನ ರೈತರ ಆತ್ಮಹತ್ಯೆ ಹೊಂದಿರುವ ಇತರ ಜಿಲ್ಲೆಗಳಾಗಿವೆ ಎಂದು timesofindia.indiatimes.com ವರದಿ ಮಾಡಿದೆ.

ಸಚಿವರು ಒದಗಿಸಿದ ಮಾಹಿತಿಯ ಪ್ರಕಾರ 2020-21ನೇ ಹಣಕಾಸು ವರ್ಷದಲ್ಲಿ ಆತ್ಮಹತ್ಯೆ ಮಾಡಿಕೊಂಡ 855 ರೈತರ ಪೈಕಿ 718 ಕುಟುಂಬಗಳಿಗೆ ಪರಿಹಾರ ದೊರೆತಿದ್ದು, 137 ಕುಟುಂಬಗಳ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 2021-22ರಲ್ಲಿ 917 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ 775 ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದ್ದು, 134 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಎಂಟು ಅರ್ಜಿಗಳನ್ನು ಅಂತಿಮಗೊಳಿಸಲಾಗುತ್ತಿದೆ.

2022-23ರಲ್ಲಿ 310 ಪ್ರಕರಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ 188 ರೈತರ ಕುಟುಂಬಗಳಿಗೆ ಪರಿಹಾರ ನೀಡಲಾಗಿದ್ದು, 24 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇನ್ನೂ 98 ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ಅವರುಗಳು ಮಾತನಾಡಿ, ಆತ್ಮಹತ್ಯೆಯಿಂದ ಸಾವನ್ನಪ್ಪಿದ ರೈತರಲ್ಲಿ ಹೆಚ್ಚಿನವರು ವಾಣಿಜ್ಯ ಬೆಳೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ – ವಿಶೇಷವಾಗಿ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ತಂಬಾಕು, ನಂಜನಗೂಡು ತಾಲ್ಲೂಕಿನ ಕೆಲವು ಭತ್ತ ಮತ್ತು ಕಬ್ಬು ಬೆಳೆಗಾರರೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಹೊಸೂರು ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ:

Karnataka Political News Live: ಚಾಮರಾಜನಗರದಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಮೈಸೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಲ್ಲಿ ಹೆಚ್ಚಿನವರು ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕಿನವರು ಅಕ್ರಮವಾಗಿ ತಂಬಾಕು ಬೆಳೆದವರು ಎಂದು ನಮ್ಮ ಅಧ್ಯಯನದಿಂದ ತಿಳಿದುಬಂದಿದೆ. ಅವರು ಖಾಸಗಿ ಲೇವಾದೇವಿದಾರರಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದಿದ್ದಾರೆ. ಅನೇಕರು ತಮ್ಮ ಮಕ್ಕಳ ಮದುವೆ ಮತ್ತು ಶಾಲಾ ಶುಲ್ಕಕ್ಕಾಗಿ ಭಾರಿ ಮೊತ್ತವನ್ನು ಖರ್ಚು ಮಾಡಿದ್ದಾರೆ ಎಂದು ನಾಗೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ​​ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಮಾತನಾಡಿ, ಕೃಷಿ ಸಾಲ ಮರುಪಾವತಿ ಮಾಡಬೇಕೆಂಬ ಒತ್ತಡ ಹಲವು ರೈತರನ್ನು ಈ ತೀವ್ರ ಕ್ರಮಕ್ಕೆ ದೂಡುತ್ತಿದೆ. ರೈತರು ಎದುರಿಸುತ್ತಿರುವ ಮಾನಸಿಕ ಆಘಾತವನ್ನು ಪರಿಹರಿಸಲು ಹಳ್ಳಿಗಳಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಸುಲಭ ಮರುಪಾವತಿ ಷರತ್ತುಗಳ ಮೇಲಿನ ಸಾಲ ಮಾತ್ರ ಈ ಪಿಡುಗನ್ನು ತಡೆಯಲು ಸಾಧ್ಯ ಎಂದರು. ಮಹಿಳಾ ಸ್ವಸಹಾಯ ಸಂಘಗಳು (Self-help Groups) ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದೂ ಅವರು ಕಿವಿಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ