Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕೊಡಗು- ಹುಣಸೂರು ಭಾಗದಲ್ಲಿ ಭಾರಿ ಮಳೆ; ಅಪಾರ ಬೆಳೆ ಹಾನಿ, ಮಹಿಳೆ ಸಾವು

ಪುಟ್ಟಮ್ಮ ಸ್ವಾಮಿಗೌಡ (30) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮನೆ ಮುಂದೆ ಕಟ್ಟಿದ್ದ ಮೇಕೆ ದನ ಕೊಟ್ಟಿಗೆ ಕಟ್ಟಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ಅಲ್ಲಲ್ಲಿ ಧರೆಗುರುಳಿದ ವಿದ್ಯುತ್ ಕಂಬಗಳಿಂದಾಗಿ ತಾಲ್ಲೂಕಿನಾದ್ಯಂತ ವಿದ್ಯುತ್ ಸಂಪರ್ಕ ಕಡಿತವಾಗಿದೆ.

Karnataka Rain: ಕೊಡಗು- ಹುಣಸೂರು ಭಾಗದಲ್ಲಿ ಭಾರಿ ಮಳೆ; ಅಪಾರ ಬೆಳೆ ಹಾನಿ, ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 02, 2022 | 10:00 AM

ಮೈಸೂರು: ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ ಉಂಟಾಗಿದೆ. ಇಲ್ಲಿನ ಹುಣಸೂರು ತಾಲೂಕಿನಲ್ಲಿ ಮಳೆಯಿಂದ ಅಪಾರ ಬೆಳೆ ಹಾನಿ, ನಾಶ ಆಗಿದ್ದು ಕೊಡಗು- ಹುಣಸೂರು ಮಾರ್ಗದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ. ಬಿರುಗಾಳಿ ಮಳೆಗೆ ಬಾಳೆ ಬೆಳೆ ನಾಶವಾಗಿದ್ದು ಮಾತ್ರವಲ್ಲದೆ, ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿಕ್ಕ ಹುಣಸೂರಿನಲ್ಲಿ 5 ಎಕರೆಯಲ್ಲಿದ್ದ ಬಾಳೆ ಬೆಳೆಗೆ ಹಾನಿಯಾಗಿದೆ. ಗೌಡಗೆರೆಯಲ್ಲಿ 5 ಕಂಬ, ಕಿರಿಜಾಜಿಯಲ್ಲಿ 4 ವಿದ್ಯುತ್ ಕಂಬ, ದೊಡ್ಡ ಹೆಜ್ಜೂರಿನಲ್ಲಿ 2 ಕಂಬ, ಚಿಲ್ಕುಂದದಲ್ಲಿ 1 ಕಂಬ ಧರೆಗೆ ಉರುಳಿ ಬಿದ್ದಿದೆ.

ಕಟ್ಟೆಮಳಲವಾಡಿ ಗ್ರಾಮದಲ್ಲಿ ಮರ ಬಿದ್ದು ದ್ವಿಚಕ್ರವಾಹನ ಜಖಂ ಆಗಿದೆ. ಅಕಾಲಿಕ ಮಳೆಯಿಂದ ಮಾವು, ತಂಬಾಕು, ಅಡಿಕೆ ಬೆಳೆ ನಾಶವಾಗಿದೆ. ಬೆಳೆಹಾನಿಗೆ ಸೂಕ್ತ ಪರಿಹಾರ ನೀಡುವಂತೆ ರೈತರ ಒತ್ತಾಯ ಕೇಳಿಬಂದಿದೆ. ರಸ್ತೆಗಳಲ್ಲಿ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಕಟ್ಟೆಮಳಲವಾಡಿಯಲ್ಲಿ ಮನೆಯ ಮೇಲೆ ಮರ ಬಿದ್ದು ಮೇಲ್ಚಾವಣಿ ಹಾನಿ ಉಂಟಾಗಿದೆ.

ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ಹುಣಸೂರು ತಾಲೂಕಿನಾದ್ಯಂತ ಭಾರಿ ಹಾನಿಯಾಗಿದೆ. ಬಿರುಗಾಳಿಗೆ ಕೊಡಗು ಹುಣಸೂರು ಮಾರ್ಗದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಬಿರುಗಾಳಿ ಮಳೆಗೆ ಬಾಳೆ ಬೆಳೆ ನಾಶವಾಗಿದ್ದು ಹಲವಾರು ವಿದ್ಯುತ್ ಕಂಬಗಳು, ಗಿಡ ಮರಗಳು ಧರೆಗೆ ಉರುಳಿವೆ. ಆಲಿಕಲ್ಲು ಬಿರುಗಾಳಿ ಸಹಿತ ಬಾರೀ ಮಳೆ ಆಗಿದೆ. ಚಿಕ್ಕ ಹುಣಸೂರಿನ ಮರಿಯಮ್ಮ ಬೆಳೆದಿದ್ದ 5 ಎಕರೆ ನೇಂದ್ರ ಬಾಳೆಗೆ ಹಾನಿಯಾಗಿದೆ. ಸುಮಾರು 8 ಲಕ್ಷ ನಷ್ಟವಾಗಿದ್ದು ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ.

ಭಾರಿ ಮಳೆಗೆ ಮರ ಉರುಳಿ ಬಿದ್ದು ರೈತ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗ್ರಾಮ ಬೋರೆಕೊಪ್ಪಲಿನಲ್ಲಿ ನಡೆದಿದೆ. ಇಲ್ಲಿನ ಪುಟ್ಟಮ್ಮ ಸ್ವಾಮಿಗೌಡ (30) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮನೆ ಮುಂದೆ ಕಟ್ಟಿದ್ದ ಮೇಕೆ ದನ ಕೊಟ್ಟಿಗೆ ಕಟ್ಟಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ಅಲ್ಲಲ್ಲಿ ಧರೆಗುರುಳಿದ ವಿದ್ಯುತ್ ಕಂಬಗಳಿಂದಾಗಿ ತಾಲ್ಲೂಕಿನಾದ್ಯಂತ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಇತ್ತ, ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಅರಕೆರೆ ಗ್ರಾಮದ ಬಳಿ ಮ್ಯಾಕ್ಸಿ ಕ್ಯಾಬ್, ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿದ್ದ ಹಾರಂಗಿ ಉಪವಿಭಾಗದ ಎಇಇಯಾಗಿದ್ದ ಹೆಚ್.ಆರ್. ಪ್ರಕಾಶ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ವರುಣನ ಆರ್ಭಟ; ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಇನ್ನೆರಡು ದಿನ ಮಳೆ

ಇದನ್ನೂ ಓದಿ: Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ

Published On - 8:43 am, Sat, 2 April 22

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು