ಅಕಾಲಿಕ ಮಳೆಯಿಂದ ಸಣ್ಣ ಈರುಳ್ಳಿ ಬೆಳೆ ನಾಶ; ಬೆಳೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ

ಕಟಾವು ಹಂತಕ್ಕೆ ಬಂದಿದ್ದ ಈರುಳ್ಳಿ, ಮಳೆ ನೀರಿನಲ್ಲಿ ಕೊಳೆತು ಹೋಗಿದೆ. ಬ್ಯಾಂಕ್‌ನಲ್ಲಿ ಬೆಳೆ ಸಾಲ ಪಡೆದು ಬೆಳೆ ಬೆಳೆಯಲಾಗಿತ್ತು. ಆದರೆ ಈಗ ಫಸಲು ಕೈಗೆ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಸರ್ಕಾರ ಬೆಳೆ ಪರಿಹಾರ ನೀಡಬೇಕು ಎಂದು ರೈತ ಸಿದ್ದರಾಜ ನಾಯಕ ಮನವಿ ಮಾಡಿಕೊಂಡಿದ್ದಾರೆ.

ಅಕಾಲಿಕ ಮಳೆಯಿಂದ ಸಣ್ಣ ಈರುಳ್ಳಿ ಬೆಳೆ ನಾಶ; ಬೆಳೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ
ರೈತ ಸಿದ್ದರಾಜ ನಾಯಕ ಅವರಿಗೆ ಸೇರಿದ ಈರುಳ್ಳಿ ಬೆಳೆ ನಾಶ
TV9kannada Web Team

| Edited By: Apurva Kumar Balegere

Jul 21, 2021 | 9:42 AM

ಮೈಸೂರು: ಅಕಾಲಿಕ ಮಳೆಯಿಂದಾಗಿ ಸಣ್ಣ ಈರುಳ್ಳಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹದಿನಾರ ಗ್ರಾಮದಲ್ಲಿ 2 ಎಕರೆಯಲ್ಲಿ ಸಣ್ಣ ಈರುಳ್ಳಿ ಬೆಳೆಯನ್ನು ಬೆಳೆಯಲಾಗಿತ್ತು. ಆದರೆ ಮಳೆಯಿಂದಾಗಿ ಬೆಳೆ ಹಾಳಾಗಿದೆ. ಒಂದು ವಾರದಿಂದ ಸತತ ಮಳೆಯಾಗಿದ್ದು, ರೈತ ಸಿದ್ದರಾಜ ನಾಯಕ ಅವರಿಗೆ ಸೇರಿದ ಬೆಳೆ ನಾಶವಾಗಿದೆ.

ಕಟಾವು ಹಂತಕ್ಕೆ ಬಂದಿದ್ದ ಈರುಳ್ಳಿ, ಮಳೆ ನೀರಿನಲ್ಲಿ ಕೊಳೆತು ಹೋಗಿದೆ. ಬ್ಯಾಂಕ್‌ನಲ್ಲಿ ಬೆಳೆ ಸಾಲ ಪಡೆದು ಬೆಳೆ ಬೆಳೆಯಲಾಗಿತ್ತು. ಆದರೆ ಈಗ ಫಸಲು ಕೈಗೆ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಸರ್ಕಾರ ಬೆಳೆ ಪರಿಹಾರ ನೀಡಬೇಕು ಎಂದು ರೈತ ಸಿದ್ದರಾಜ ನಾಯಕ ಮನವಿ ಮಾಡಿಕೊಂಡಿದ್ದಾರೆ.

ಒಂದು ತಿಂಗಳ ಕಾಲ ಸುರಿದ ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 30ರಿಂದ 40 ಸಾವಿರ ಹೆಕ್ಟೇರ್ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಜಿಲ್ಲೆಯ ಪ್ರಮುಖ ಬೆಳೆಯಾದ ಈರುಳ್ಳಿಯನ್ನೇ ಹೆಚ್ಚು ಜನರು ನಂಬಿಕೊಂಡಿದ್ದಾರೆ. ಆದರೆ, ಈ ಸಲ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಆರಂಭದಲ್ಲೇ ಆಘಾತ ಎದುರಾಗಿದೆ. ಈರುಳ್ಳಿಗೆ ನೇರಳೆ ಮಚ್ಚೆ ರೋಗ ಬಾಧಿಸುತ್ತಿದ್ದು, ಬೆಳೆ ಹಾನಿ ಆಗುತ್ತಿದೆ. ಇನ್ನು ಅಧಿಕಾರಿಗಳು ನೆಪ ಮಾತ್ರಕ್ಕೆ ಕೆಲವೆಡೆ ಭೇಟಿ‌ ನೀಡಿದ್ದಾರೆ. ಆದರೆ ರೈತರಿಗೆ ಯಾವುದೇ ಪರಿಹಾರ ಸೂತ್ರ ತಿಳಿಸಿಲ್ಲ ಮತ್ತು ಈರುಳ್ಳಿ ಬೆಳೆ ಹಾನಿಯ ಪರಿಹಾರದ ಬಗ್ಗೆ ಭರವಸೆಯೂ ನೀಡಿಲ್ಲ ಎಂದು ರೈತ ಲಕ್ಷ್ಮೀಕಾಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ ಅವರನ್ನು ಕೇಳಿದರೆ ಈ ವರ್ಷ ಜಿಲ್ಲೆಯಲ್ಲಿ 30ಸಾವಿರ ಹೆಕ್ಟೇರ್ ಈರುಳ್ಳಿ ಬಿತ್ತನೆ ಗುರಿ ಹೊಂದಲಾಗಿದೆ. ಈವರೆಗೆ ಸುಮಾರು 8ಸಾವಿರ ಹೆಕ್ಟೇರ್ ಈರುಳ್ಳಿ ಬಿತ್ತನೆ ಆಗಿದೆ. ಆದರೆ, ಮಳೆ ಹೆಚ್ಚಿದ ಕಾರಣ ಹಲವೆಡೆ ಈರುಳ್ಳಿಗೆ ನೇರಳೆ ಮಚ್ಚೆ ರೋಗ, ಕೊಳೆ ರೋಗ ಕಾಣಿಸಿಕೊಂಡಿದೆ. ಈಗಾಗಲೇ ಈ ಬಗ್ಗೆ ವಿಜ್ಞಾನಿಗಳು ಹಾಗೂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಕೊಳೆ ರೋಗ ನಿವಾರಣೆಗೆ ಸಲಹೆ ನೀಡಲಾಗಿದೆ. ಇನ್ನೂ ಮಳೆಯಿಂದ ಶೀತ ಪ್ರಮಾಣ ಹೆಚ್ಚಾಗಿ ರೋಗ ಉಲ್ಬಣಗೊಂಡು ಬೆಳೆ ಹಾನಿಯಾದರೆ, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳ ಕಾಲ ಸುರಿದ ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ; ನೇರಳೆ‌ ಮಚ್ಚೆ ರೋಗದಿಂದ ಕಂಗಾಲಾದ ಚಿತ್ರದುರ್ಗದ ರೈತರು

ದಾಳಿಂಬೆ ಬೆಳೆಗೆ ದುಂಡಾಣು ಅಂಗ ಮಾರಿ ರೋಗಬಾಧೆ; ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada