ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ; ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ

ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ; ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ
ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಮದುವಿನಹಳ್ಳಿ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

TV9kannada Web Team

| Edited By: Ayesha Banu

Apr 26, 2022 | 9:34 AM

ಮೈಸೂರು: ಜಿಲ್ಲೆಯಲ್ಲಿ ಕಾಡಾನೆಗಳ ಆತಂಕ ಮುಂದುವರಿದಿದೆ, ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಗ್ರಾಮದ ಬಳಿ ರಸ್ತೆಗಳಲ್ಲಿ ಓಡಾಡುತ್ತಿವೆ. ಹೀಗಾಗಿ ಕಾಡಾನೆ ಹಾವಳಿಯಿಂದ ಬೇಸತ್ತು ವಿಷದ ಬಾಟಲಿ ಹಿಡಿದು ರೈತರು ಧರಣಿಗೆ ಮುಂದಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಮದುವಿನಹಳ್ಳಿ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಡಂಚಿನ ಗ್ರಾಮಗಳಲ್ಲಿ ಪದೇಪದೆ ಆನೆಗಳ ದಾಳಿಯಿಂದ ಬೆಳೆ ನಾಶವಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ ಮೂರು ದಿನಗಳಿಂದ ಕಾಡಾನೆ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗ್ತಿಲ್ಲ. ಕಾಡಾನೆ ದಾಳಿ ತಡೆಯಲು ಹಾಕಿದ್ದ ಕಬ್ಬಿಣದ ತಡೆಗೋಡೆ ಮುರಿದಿದೆ. ಹಾಗಾಗಿ ಆನೆಗಳು ಸುಲಭವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ. ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಕಾಡಾನೆ ಹಾವಳಿ ನಿಯಂತ್ರಿಸುವಂತೆ ಆಗ್ರಹಿಸಿ ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಕಾಡಾನೆ ನೋಡಲು ನೂರಾರು ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆದ್ರೆ ಪ್ರತಿ ಬಾರಿ ಕಾಡಿನಿಂದ ನಾಡಿಗೆ ಬರುವ ಆನೆಗಳಿಂದ ಸಮಸ್ಯೆ ಎದುರಾಗಿದ್ದು ಆನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಾಡಂಚಿನ ಗ್ರಾಮಗಳ ನಿವಾಸಿಗಳು ಆಗ್ರಹಿಸಿದ್ದಾರೆ.

mys elephant

ಆನೆಗಳ ದಾಳಿಯಿಂದ ರೈತರು ಕಂಗಾಲು

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

ಋತುವಿಲಾಸಿನಿ : ಸಾವು ಆವರಿಸುವ ಹೊತ್ತಿನಲ್ಲಿ ನೀನು ಹೊರಗಿರಬೇಕು ಅಂತ ಬಯಸುವವಳು ನಾನು

Follow us on

Related Stories

Most Read Stories

Click on your DTH Provider to Add TV9 Kannada