Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ, ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಇಂದು ಬೃಹತ್ ಧರಣಿ ನಡೆಯುತ್ತಿದೆ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘ ಯತ್ನಿಸಿದ್ದು 50ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ, ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ
ರೈತರು ವಶಕ್ಕೆ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Nov 09, 2023 | 1:15 PM

ಮೈಸೂರು, ನ.09: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ (siddaramaiah) ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಸೇರಿ 50ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆಯಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ಎಂದು ರೈತರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ರಸ್ತೆಯಲ್ಲಿ ಮಲಗಿದ ರೈತರು

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆ ರೈತ ಮುಖಂಡ ಕುರುಬೂರು ಶಾಂತಕುಮಾರ್, ಮಹಿಳೆಯರು ಸೇರಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಕ್ರಮಕ್ಕೆ ಕುರುಬೂರು ಶಾಂತಕುಮಾರ್ ಹಾಗೂ ರೈತರು ರಸ್ತೆಯಲ್ಲಿ ಮಲಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಬಲವಂತವಾಗಿ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ಚುನಾವಣಾ ರಾಜಕೀಯ ನಿವೃತ್ತಿಗೆ ಹೈಕಮಾಂಡ್​ ಸೂಚನೆ ಕೊಟ್ಟಿದ್ಯಾ? ಈ ಬಗ್ಗೆ ಸದಾನಂದಗೌಡ, ಬಿಎಸ್​ವೈ ಹೇಳಿದ್ದಿಷ್ಟು

ಸಿಎಂ ನಿವಾಸದ ಬಳಿ ಬಿಗಿ ಭದ್ರತೆ

ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲೂ ಮುನ್ನೆಚ್ಚರಿಕೆಯಾಗಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ನಿಯೋಜಿಸಲಾಗಿದೆ.

ಅಂತ್ಯ ಸಂಸ್ಕಾರಕ್ಕೆ ಹೊರಟವರಿಗೆ ತಟ್ಟಿದ ಬಿಸಿ

ಸಿಎಂ ಸಿದ್ದರಾಮಯ್ಯ ಮನೆಗೆ ರೈತರ ಮುತ್ತಿಗೆ ಯತ್ನ ಹಿನ್ನೆಲೆ ಅಂತ್ಯ ಸಂಸ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಿದೆ. ಸಿದ್ದರಾಮಯ್ಯ ನಿವಾಸದ ಮಾರ್ಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಜನರು ಹೊರಟಿದ್ದರು. ಇದೇ ವೇಳೆ ಸಿಎಂ ಮನೆ ಮುತ್ತಿಗೆಗೆ ರೈತರು ಕೂಡ ಆಗಮಿಸಿದರು. ಆಗ ರೈತರನ್ನು ತಡೆಯಲು ಪೊಲೀಸರು ಕೂಡ ಧಾವಿಸಿ ಬಂದಿದ್ದಾರೆ. ಈ ವೇಳೆ ತೆರೆದ ವಾಹನದಲ್ಲಿ ಶವಸಂಸ್ಕಾರಕ್ಕೆ ಹೊರಟಿದ್ದ 50ಕ್ಕೂ ಹೆಚ್ಚು ಜನರಿಗೆ ಸಮಸ್ಯೆಯಾಯಿತು. ಪೊಲೀಸರು ಶವಸಂಸ್ಕಾರಕ್ಕೆ ಹೊರಟಿದ್ದವರನ್ನೂ ತಡೆದು ನಿಲ್ಲಿಸಿದ್ರು. ಬಳಿಕ ವಿಚಾರಿಸಿ ವಾಪಸ್ಸು ಕಳುಹಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:14 pm, Thu, 9 November 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ