ಕಪಿಲಾ ನದಿ ಪಾತ್ರದಲ್ಲಿ ಮುಂದುವರಿದ ಪ್ರವಾಹ ಭೀತಿ; ಎಚ್ಚರಿಕೆಯಿಂದಿರಲು ಸೂಚನೆ
ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದ್ದು, ಜನರು ಕಪಿಲಾ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯದ ಇಂದಿನ ಸದ್ಯದ ಒಳ ಹರಿವು 27,771 ಕ್ಯೂಸೆಕ್, ಹೊರಹರಿವು 30,800 ಕ್ಯೂಸೆಕ್ ಇದೆ.
ಮೈಸೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಮುಂದುವರಿದಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಕಬಿನಿ ಜಲಾಶಯದ ಒಳಹರಿವು ಮತ್ತು ಹೊರಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೇ ಜಲಾಶಯದ ಒಳ ಹಾಗೂ ಹೊರಹರಿವು ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಹೀಗಾಗಿ ನದಿ ಪಾತ್ರದ ಇಕ್ಕೆಲಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದ್ದು, ಜನರು ಕಪಿಲಾ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯದ ಇಂದಿನ ಸದ್ಯದ ಒಳ ಹರಿವು 27,771 ಕ್ಯೂಸೆಕ್, ಹೊರಹರಿವು 30,800 ಕ್ಯೂಸೆಕ್ ಇದೆ. 84 ಅಡಿ ಸಾಮರ್ಥ್ಯದಿಂದ ಕೂಡಿರುವ ಜಲಾಶಯದ ಇಂದಿನ ನೀರಿನ ಮಟ್ಟ 79.94 ಅಡಿಯಿದೆ.
ಪುಣ್ಯ ಸ್ನಾನ ಮತ್ತು ಮುಡಿ ಸೇವೆ ಬಂದ್ ಕಬಿನಿ ಜಲಾಶಯದಲ್ಲಿ ಹೊರ ಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆ ಶ್ರೀಕಂಠೇಶ್ವರನ ದೇಗುಲದಲ್ಲಿ ಪುಣ್ಯ ಸ್ನಾನ ಮತ್ತು ಮುಡಿ ಸೇವೆ ಬಂದ್ ಮಾಡಲಾಗಿದೆ. ದೇವಸ್ಥಾನದ ಸ್ನಾನಘಟ್ಟದ ಮೆಟ್ಟಿಲುಗಳು ಮುಳುಗಡೆಯಾಗಿದ್ದು, ಪುಣ್ಯ ಸ್ನಾನ ನಿಷೇಧಿಸಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ದೇವರ ದರ್ಶನ, ಪೂಜೆ ಪುನಸ್ಕಾರಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಕಪಿಲಾ ನದಿ ದಡದ ನಿವಾಸಿಗಳು ಎಚ್ಚರದಿಂದಿರಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ
ಬೆಣ್ಣೆಹಳ್ಳದಲ್ಲಿ ನೋಡ ನೋಡುತ್ತಲೇ ಕೊಚ್ಚಿ ಹೋದ ಸಾಕುನಾಯಿಗಳು; ಹೂಳು ಎತ್ತದ ಕಾರಣ ಹೆಚ್ಚುತ್ತಿದೆ ಅನಾಹುತ ಕಬಿನಿ ಜಲಾಶಯದಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳ; ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಪುಣ್ಯ ಸ್ನಾನ, ಮುಡಿ ಸೇವೆಗೆ ತಾತ್ಕಾಲಿಕ ನಿರ್ಬಂಧ
(Fear of Flooding has begun around the Kapila River)