ಚುರುಕುಗೊಂಡ ಭ್ರೂಣ ಹತ್ಯೆ ಕೇಸ್​ ತನಿಖೆ; ಮೈಸೂರಿನಲ್ಲಿ ಈ ವರ್ಷ 1800ಕ್ಕೂ ಹೆಚ್ಚು ಗರ್ಭಪಾತ, ಕಾರಣ ಕೇಳಿ ನೋಟಿಸ್

ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭ್ರೂಣ ಹತ್ಯೆ, ಪತ್ತೆ ಜಾಲ ಭೇದಿಸಲು ಮುಂದಾಗಿದ್ದಾರೆ. ಈಗಾಗಲೇ 15 ಖಾಸಗಿ ಕ್ಲಿನಿಕ್‌ಗಳಿಗೆ ಬೀಗ ಹಾಕಿಸಿದ್ದಾರೆ. ಈ ಸಾಲಿನಲ್ಲಿ 1800ಕ್ಕೂ ಹೆಚ್ಚು ಗರ್ಭಪಾತ ಪ್ರಕರಣಗಳು ದಾಖಲಾಗಿರುವ ಬಗ್ಗೆ ಟಿವಿ9ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Dec 17, 2023 | 8:33 AM

ಮೈಸೂರು, ಡಿ.17: ಮೈಸೂರಿನಲ್ಲಿ ಭ್ರೂಣ ಹತ್ಯೆ, ಪತ್ತೆ ಜಾಲ (Foeticide) ದೊಡ್ಡ ಮಟ್ಟದಲ್ಲಿ ಕಂಡು ಬರ್ತಿದ್ದಂತೆ ಆರೋಗ್ಯಾಧಿಕಾರಿಗಳು ಫುಲ್​ ಅಲರ್ಟ್ ಆಗಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (Mysuru District Health Officer) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೈಸೂರು ಜಿಲ್ಲೆಯಲ್ಲಿ ಈವರೆಗೂ 15 ಖಾಸಗಿ ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ. 80 ಕ್ಲಿನಿಕ್‌ಗಳಿಗೆ ನೋಟಿಸ್ ನೀಡಲಾಗಿದೆ. ಇನ್ನು ಮತ್ತೊಂದೆಡೆ 2023ರ ಸಾಲಿನ ಗರ್ಭಪಾತದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಸಾಲಿನಲ್ಲಿ 1800ಕ್ಕೂ ಹೆಚ್ಚು ಗರ್ಭಪಾತ ಪ್ರಕರಣಗಳು ದಾಖಲಾಗಿರುವ ಬಗ್ಗೆ ಟಿವಿ9ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭ್ರೂಣ ಹತ್ಯೆ, ಪತ್ತೆ ಜಾಲ ಭೇದಿಸಲು ಮುಂದಾಗಿದ್ದಾರೆ. ಈಗಾಗಲೇ 15 ಖಾಸಗಿ ಕ್ಲಿನಿಕ್‌ಗಳಿಗೆ ಬೀಗ ಹಾಕಿಸಿದ್ದಾರೆ. ಜಿಲ್ಲಾ ಟಾಸ್ಕ್ ಫೋರ್ಸ್ ತಂಡ ಕ್ಲಿನಿಕ್‌ಗಳು, ನರ್ಸಿಂಗ್ ಹೋಂಗಳು, ಸ್ಕ್ಯಾನಿಂಗ್ ಸೆಂಟರ್​ಗಳಲ್ಲಿ ಪರಿಶೀಲನೆ ನಡೆಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದೆ. ಮೈಸೂರು ಜಿಲ್ಲೆಯಾದ್ಯಂತ ಟಾಸ್ಕ್‌ಫೋರ್ಸ್‌ನಿಂದ ಪರಿಶೀಲನೆ ನಡೆಸಲಾಗುತ್ತಿದೆ. KPMA ಪ್ರಮಾಣಪತ್ರ, ನಿಯಮ ಪಾಲಿಸದ ಕ್ಲಿನಿಕ್​​ಗಳಿಗೆ ನೋಟಿಸ್​ ನೀಡಿದ್ದೇವೆ. ಒಂದು ವಾರದಲ್ಲಿ ಉತ್ತರ ಕೊಡಲು ಸೂಚಿಸಿದ್ದೇವೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ.ಕುಮಾರಸ್ವಾಮಿ ತಿಳಿಸಿದ್ದಾರೆ.

2023ರ ಸಾಲಿನ ಗರ್ಭಪಾತದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಸಾಲಿನಲ್ಲಿ 1800ಕ್ಕೂ ಹೆಚ್ಚು ಗರ್ಭಪಾತ ಪ್ರಕರಣಗಳು ದಾಖಲಾಗಿರುವ ಬಗ್ಗೆ ಟಿವಿ9ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಕಾರಣಗಳಿಂದ ಈ ಗರ್ಭಪಾತಗಳು ಆಗಿವೆ. ಇದರ ಸಂಪೂರ್ಣ ಅಂಕಿ ಅಂಶ ಕಲೆ ಹಾಕಲಾಗುತ್ತಿದೆ. ಗರ್ಭಪಾತದ ನಿಖರ ಕಾರಣ ನೀಡುವಂತೆ ಸೂಚಿಸಲಾಗಿದೆ. ಒಂದು ವೇಳೆ ವೈದ್ಯಕೀಯ ಕಾರಣಕ್ಕೆ ಆಗದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಕೇಸ್​: ಡಾ ಶ್ರೀನಿವಾಸ್ ಬಂಧನ

ಸ್ಥಗಿತಗೊಂಡಿರುವ ಸ್ಕ್ಯಾನಿಂಗ್ ಸೆಂಟರ್ ಸೀಲ್ ಮಾಡಲು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚನೆ ನೀಡಿದ್ದಾರೆ. ಹಲವು ಕಾರಣಗಳಿಂದ ಕೆಲಸ ನಿರ್ವಹಿಸದ ಸ್ಕ್ಯಾನಿಂಗ್ ಸೆಂಟರ್‌ಗಳು ದುರುಪಯೋಗ ಆಗುವ ಸಾಧ್ಯತೆ ಇದೆ. ಭ್ರೂಣ ಪತ್ತೆ ಹತ್ಯೆಯಂತಹ ಪ್ರಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂತಹ ಸ್ಕ್ಯಾನಿಂಗ್ ಸೆಂಟರ್ ಸೀಲ್ ಮಾಡಲು ನಿರ್ಧಾರ ಮಾಡಲಾಗಿದೆ.

ಭ್ರೂಣ ಪತ್ತೆ ಹತ್ಯೆ ಮಾಡಿಸಿರುವ ಪೋಷಕರಿಗಾಗಿ ಹುಡುಕಾಟ

ಇನ್ನು ಆಶಾ ಕಾರ್ಯಾಕರ್ತರ ಮೂಲಕ ಮನೆ ಮನೆಗೂ ತೆರಳಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಭ್ರೂಣ ಪತ್ತೆ ಹತ್ಯೆ ಮಾಡಿಸಿರುವ ಪೋಷಕರಿಗಾಗಿ ಹುಡುಕಾಟ ನಡೆಯುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಬಗ್ಗೆ ನಿರಂತರವಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಭ್ರೂಣ ಪತ್ತೆ ಕಾನೂನು ಬಾಹಿರ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಮಾಹಿತಿ ನೀಡಿದರೆ 50 ಸಾವಿರ ಬಹುಮಾನ ನೀಡಲಾಗುತ್ತೆ. ಮಾಹಿತಿ ನೀಡಿದವರ ಗೌಪ್ಯತೆ ಕಾಪಾಡಲಾಗುವುದು. ಅನಧಿಕೃತ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ವಾರ್ನಿಂಗ್ ಕೊಟ್ಟಿದ್ದೇವೆ. ಒಂದು ವೇಳೆ ಕಾನೂನು ಬಾಹಿರವಾಗಿ ಕ್ಲಿನಿಕ್ ಸ್ಕ್ಯಾನಿಂಗ್ ಸೆಂಟರ್ ನಡೆಸುತ್ತಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ ಎಂದು ಪಿ.ಸಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿಗೆ ಸಂಬಂಧಪಟ್ಟ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:29 am, Sun, 17 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ