ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ

ಭ್ರೂಣ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಮೈಸೂರಿನಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ. ಜಿಲ್ಲಾ ಟಾಸ್ಕ್‌ಫೋರ್ಸ್ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ
ಟಾಸ್ಕ್‌ಫೋರ್ಸ್ ತಂಡ ಪರಿಶೀಲನೆ
Follow us
| Updated By: ಆಯೇಷಾ ಬಾನು

Updated on:Dec 16, 2023 | 10:57 AM

ಮೈಸೂರು, ಡಿ.16: ಭ್ರೂಣ ಪತ್ತೆ, ಹತ್ಯೆ ಪ್ರಕರಣ (foeticide) ಸಂಬಂಧ ಕಾರ್ಯಾಚರಣೆ ಮುಂದುವರಿದಿದ್ದು ಮೈಸೂರಿನಲ್ಲಿ (Mysuru) ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ. ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾ ಟಾಸ್ಕ್‌ಫೋರ್ಸ್ (Task Force) ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಜಿಲ್ಲೆಯಲ್ಲಿನ ನರ್ಸಿಂಗ್ ಹೋಂ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು ಸೂಕ್ತ ದಾಖಲಾತಿ ಇಲ್ಲದ ಕ್ಲಿನಿಕ್‌ಗಳಿಗೆ ಅಧಿಕಾರಿಗಳು ನೋಟಿಸ್ ಕಳಿಸುತ್ತಿದ್ದಾರೆ.

ರಾಜ್ಯದಲ್ಲಿ ಹೆಣ್ಣು ಭ್ರೂಣ ಹಂತಕರ ಜಾಲದ ಬಗ್ಗೆ ಟಿವಿ9 ನಿರಂತರ ವರದಿ ಬಿತ್ತರಿಸ್ತಿದೆ. ಈ ಮಧ್ಯೆ ಮೊನ್ನೆ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 16 ವಾರದ ಹೆಣ್ಣು ಭ್ರೂಣವನ್ನ ಹತ್ಯೆ ಮಾಡಿ, ಕಸದ ರೀತಿ ಡಸ್ಟ್​ಬಿನ್​ಗೆ​ ಹಾಕಲಾಗಿತ್ತು. ಮಾಹಿತಿ ಪಡೆದು ಆಸ್ಪತ್ರೆಗೆ ದಾಳಿ ಮಾಡಿದ್ದ ಆರೋಗ್ಯ ಅಧಿಕಾರಿಗಳ ತಂಡ, ಆಸ್ಪತ್ರೆ ವಿರುದ್ಧ ಕೇಸ್‌ ದಾಖಲಿಸಿದೆ. ಆಸ್ಪತ್ರೆ ಸೀಜ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಇದ್ದ ರೋಗಿಗಳನ್ನ ಬೇರೆ ಬೇರೆ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇನ್ನು ಭ್ರೂಣ ಹತ್ಯೆ ಪ್ರಕರಣ ಬಯಲಾಗ್ತಿದ್ದಂತೆ ವೈದ್ಯ ಶ್ರೀನಿವಾಸ್ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಹೊಸಕೋಟೆ: SPG ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್​ಐಆರ್ ದಾಖಲು

ಎಸ್​ಪಿಜಿ ಆಸ್ಪತ್ರೆಯ 7 ಸಿಬ್ಬಂದಿ ವಶಕ್ಕೆ, ಪೊಲೀಸರಿಂದ ತೀವ್ರ ವಿಚಾರಣೆ!

ಆಸ್ಪತ್ರೆಗೆ ದಾಳಿ ಮಾಡಿದ್ದ ಅಧಿಕಾರಿಗಳು ಒಬ್ಬ ಗರ್ಭಿಣಿ ಸೇರಿದಂತೆ ಆಸ್ಪತ್ರೆಯ 7 ಸಿಬ್ಬಂದಿಯನ್ನ ವಶಕ್ಕೆ ಪಡೆಯಲಾಗಿದೆ. ಇವ್ರೆಲ್ಲ ಐದರಿಂದ 10 ಸಾವಿರ ರೂಪಾಯಿ ಸಂಬಳಕ್ಕೆ ಕೆಲಸ ಮಾಡ್ತಿದ್ರು ಅನ್ನೋದು ಗೊತ್ತಾಗಿದೆ. ಇದೀಗ ಇವ್ರನ್ನ ಪೊಲೀಸರು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ.

ಒಂದು ವರ್ಷದಲ್ಲಿ 1500 ಸ್ಕ್ಯಾನಿಂಗ್.. ಬೆಟ್ಟದಷ್ಟು ಅನುಮಾನ!

ಅಷ್ಟಕ್ಕೂ SPG ಆಸ್ಪತ್ರೆಯ ಸ್ಕ್ಯಾನಿಂಗ್ ದಾಖಲೆಗಳು ಸಾಕಷ್ಟು ಅನುಮಾನ ಮೂಡಿಸಿವೆ. ಯಾಕಂದ್ರೆ, ಕಳೆದ ಒಂದು ವರ್ಷದಲ್ಲಿ ಆಸ್ಪತ್ರೆಯ 1500 ಕ್ಕೂ ಅಧಿಕ ಮಹಿಳೆಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ. 1500 ಕ್ಕೂ ಅಧಿಕ ಮಹಿಳೆಯರಲ್ಲಿ 400 ಕ್ಕೂ ಅಧಿಕ ಮಹಿಳೆಯರ ಹೆರಿಗೆ ಆಗಿರುವ ಮಾಹಿತಿ ಇದೆ. ಈ ಮಹಿಳೆಯರು ಎಲ್ಲಿ ಹೆರಿಗೆ ಮಾಡಿಸಿಕೊಂಡಿದ್ದಾರೆ ಅಂತ ಮಾಹಿತಿ ಕಲೆ ಹಾಕೋ ಕೆಲಸ ಮಾಡಲಾಗ್ತಿದೆ.

ಈ ಮಧ್ಯೆ ತಿರುಮಲಶೆಟ್ಟಿಹಳ್ಳಿ ಠಾಣೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಜುನಾಥ್ ಭೇಟಿ ನೀಡಿ, ಆಸ್ಪತ್ರೆ ವಿರುದ್ಧ ದೂರು ನೀಡಿದ್ದಾರೆ. ಒಟ್ನಲ್ಲಿ ಟಿವಿ9 ನಿರಂತರವಾಗಿ ರಾಜ್ಯದಲ್ಲಿ ಅವ್ಯವಹಾತವಾಗಿ ನಡೀತಿರೋ ಭ್ರೂಣಹತ್ಯೆ ಜಾಲದ ಹಿಂದೆ ಬಿದ್ದಿದೆ. ಇದೀಗ ಟಿವಿ9 ವರದಿ ವಿಧಾನಸಭೆಯಲ್ಲೂ ಸದ್ದು ಮಾಡ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:55 am, Sat, 16 December 23

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ