ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ
ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ
Follow us
TV9 Web
| Updated By: ಆಯೇಷಾ ಬಾನು

Updated on:Jul 29, 2023 | 11:12 AM

ಮೈಸೂರು, ಜುಲೈ 29: ತಿರುಪತಿ(Tirupati) ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ ವಿಚಾರಕ್ಕೆ ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನಿಂದ 220 ಮಂದಿ ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನೂರಾರು ಜನರನ್ನು ಕರೆಸಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ದೂರು‌ ನೀಡಿದ್ರು ಆಂಧ್ರದ ಪಾಕಲಂ ಪೊಲೀಸರು ಸ್ಪಂದಿಸಿಲ್ಲ. ಮೊಬೈಲ್​ನಲ್ಲಿ ಸೆರೆಯಾದ ಹಲ್ಲೆ ದೃಶ್ಯ ಡಿಲೀಟ್ ಮಾಡಿಸಿದರು ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ ಹಲ್ಲೆಗೊಳಗಾದವರು ಈ ಬಗ್ಗೆ ಮೈಸೂರಿನಲ್ಲಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಆಂಧ್ರ ವ್ಯಕ್ತಿಗಳು

ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಸೀಟ್ ಮೇಲಿಟ್ಟಿದ್ದ ಲ್ಯಾಪ್ ಟಾಪ್ ಮೇಲೆ ಕುಳಿತಿದ್ದೀರಾ ಎಂದು ಗಲಾಟೆ ಶುರುವಾಗಿದ್ದು ಮಾತಿಗೆ ಮಾತು ಬೆಳೆದು ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಆಂಧ್ರ ಮೂಲದವರು ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದಾರೆ. ಪೊಲೀಸರನ್ನು ಕರೆದರು ಸಹಾಯಕ್ಕೆ ಬರಲಿಲ್ಲ. ಪೊಲೀಸರಿಗೆ ನಾವು ದೂರು ಕೊಟ್ಟರೂ ನಮ್ಮನ್ನೆ ಅಪರಾಧಿಗಳಂತೆ ಪ್ರಶ್ನೆ ಮಾಡಿದರು. ಹಲ್ಲೆ ಮಾಡಿದ ವಿಡಿಯೋವನ್ನ ಚಿತ್ರಿಕರಣ ಮಾಡಿದ್ದಕ್ಕೆ‌ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಅಲ್ಲಿನ ಜನ ತಮ್ಮ ಬಳಿ ಡ್ರಾಗರ್ ಹಾಗೂ ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದು ಅದರಲ್ಲೇ ಹಲ್ಲೆ ಮಾಡಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸದ್ಯ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Sat, 29 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್