ಮುರುಘಾ ಶರಣರ ವಿರುದ್ಧ FIR ದಾಖಲು ವಿಚಾರ: ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆಯುತ್ತಿರುವ ಪೊಲೀಸ್: ಒಡನಾಡಿ ಮುಖ್ಯಸ್ಥ ಸ್ಟ್ಯಾನ್ಲಿ

ಸೆಕ್ಷನ್ 161ರ ಅಡಿ ಪೊಲೀಸರು ಹೇಳಿಕೆ ದಾಖಲಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಹೇಳಿಕೆ ನೀಡಿದರು.

ಮುರುಘಾ ಶರಣರ ವಿರುದ್ಧ FIR ದಾಖಲು ವಿಚಾರ: ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆಯುತ್ತಿರುವ ಪೊಲೀಸ್: ಒಡನಾಡಿ ಮುಖ್ಯಸ್ಥ ಸ್ಟ್ಯಾನ್ಲಿ
ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 17, 2022 | 6:32 PM

ಮೈಸೂರು: ಚಿತ್ರದುರ್ಗದಿಂದ ಮೂವರು ಅಧಿಕಾರಿಗಳು ಬಂದಿದ್ದಾರೆ. ಸಂತ್ರಸ್ತ ಬಾಲಕಿಯರು, ಪೋಷಕರ ಹೇಳಿಕೆ ಪಡೆಯುತ್ತಿದ್ದಾರೆ. ಸೆಕ್ಷನ್ 161ರ ಅಡಿ ಪೊಲೀಸರು ಹೇಳಿಕೆ ದಾಖಲಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಹೇಳಿಕೆ ನೀಡಿದರು. ಮೈಸೂರಿನ ಒಡನಾಡಿ ಸಂಸ್ಥೆಯಲ್ಲೇ ವಿಚಾರಣೆ ನಡೆಯುತ್ತಿದ್ದು, ಬಾಲಕಿಯ ಆರೋಗ್ಯ ಸಮಸ್ಯೆ, ಭದ್ರತಾ ದೃಷ್ಟಿಯಿಂದ ವಿಚಾರಣೆ ನಡೆಯುತ್ತಿದೆ. 2-3 ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆಯಿದೆ ಎಂದು ಸ್ಟ್ಯಾನ್ಲಿ ಹೇಳಿದರು. ಈ ಹಿಂದೆ ಮಕ್ಕಳ ಹೇಳಿಕೆಯನ್ನ ಪಡೆದು ಕಾನೂನು ಕ್ರಮ ಜರುಗಿಸುವಂತೆ ಮೈಸೂರಿನ ಒಡನಾಡಿ ಸಂಸ್ಥೆಯಿಂದ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಯಲಾಗಿತ್ತು. ಮಕ್ಕಳು ಪೋಷಕರೊಂದಿಗೆ ಮೈಸೂರಿನಲ್ಲಿ ಇದ್ದಾರೆ. ಪ್ರಕರಣದ ಸಂಬಂಧ ಮಕ್ಕಳ ಹೇಳಿಕೆಯನ್ನು ದಾಖಲಿಸಿ ಮುಂದಿನ ಕ್ರಮ ಜರುಗಿಸಬೇಕು ಸ್ಟ್ಯಾನ್ಲಿ ಈ ಹಿಂದೆ ಆಗ್ರಹಿಸಿದ್ದರು.

ಪ್ರಭಾರ ಪೀಠಾಧ್ಯಕ್ಷರಾಗಿ ಬಸವಪ್ರಭುಶ್ರೀ ನೇಮಕ:

ಚಿತ್ರದುರ್ಗದ  ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕವಾಗಿದೆ. ಹಲವರ ವಿರೋಧದ ನಡುವೆಯೂ ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಬಸವಪ್ರಭುಶ್ರೀ ನೇಮಕ ಕುರಿತು ಮುರುಘಾಮಠ ನಿನ್ನೆ (ಅಕ್ಟೋಬರ್ 16) ಅಧಿಕೃತ ಪ್ರಕಟಣೆ ಹೊರಡಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳು ಮಠದ ಪರಂಪರೆ ಮುಂದುವರೆಸಿಕೊಂಡು ಹೋಗಲು ಪ್ರಕಟಣೆಯಲ್ಲಿ ತಿಳಿಸಿದೆ.

ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಸವಪ್ರಭು ಶ್ರೀ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪೂಜೆ, ದಾಸೋಹ,‌ ಮಠದ ಕೆಲಸ ನೋಡಿಕೊಳ್ಳಲು ಶಿವಮೂರ್ತಿ ಮುರುಘಾ ಶರಣರಿಂದ ಆದೇಶ ಸಿಕ್ಕಿದೆ. ನಿಷ್ಠೆಯಿಂದ ಭಕ್ತಿಯಿಂದ ಸೇವಾಕಾರ್ಯ ಮಾಡುತ್ತೇನೆ. ಮುರುಘೇಶ, ಗುರು ಬಸವೇಶನ ಸೇವೆ ಮಾಡುತ್ತೇನೆ ಎಂದು ಹೇಳಿದರು. ಮುರುಘಾಶ್ರೀ ಆಶೀರ್ವಾದ, ಮಾರ್ಗದರ್ಶನದಲ್ಲಿ ಎಲ್ಲಾ ಮಠದ ಶ್ರೀಗಳು, ಎಲ್ಲಾ ಭಕ್ತರ ಆಶಯದಂತೆ ಸೇವೆ ಮಾಡುತ್ತೇನೆ. ಭಕ್ತರು ಎಂದಿನಂತೆ ಸಹಕರಿಸಬೇಕೆಂದು ಮನವಿ ಮಾಡಿದರು. ತಾತ್ಕಾಲಿಕ ಆದೇಶ, ಮುಂದಿನ ಆದೇಶದವರೆಗೆ ಬಸವಣ್ಣನ ಆಶೀರ್ವಾದ, ಗುರುವಿನ ಆಶೀರ್ವಾದ, ಮುರುಘಾಶ್ರೀ ಆಶೀರ್ವಾದ ಶಕ್ತಿಯಿಂದ ಜವಬ್ದಾರಿ‌ ನಿರ್ವಹಿಸುತ್ತೇನೆ ಎಂದು ಹೇಳಿದರು.

ನ್ಯಾ.ಎಸ್.ಬಿ.ವಸ್ತ್ರದಮಠ್​​ಗೆ ಪವರ್ ಆಫ್​ ಅಟಾರ್ನಿ:

ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿರುವ ಮುರುಘಾ ಶ್ರೀಗಳು ವಿವಿಧ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳುವ ಪವರ್ ಆಫ್​ ಅಟಾರ್ನಿಯನ್ನು ಮುರುಘಾ ಮಠದ ಎಸ್​​​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯೂ ಆಗಿರುವ ನಿವೃತ್ತ ನ್ಯಾ.ಎಸ್.ಬಿ.ವಸ್ತ್ರದಮಠ್ ಅವರಿಗೆ ನೀಡಿದ್ದಾರೆ. ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ-ಪೋಕ್ಸೋ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಪವರ್ ಆಫ್ ಅಟಾರ್ನಿ ಜಾರಿಗೆ ಹೈಕೋರ್ಟ್ ಅನುಮತಿ ನೀಡಿತ್ತು.

ಅದರಂತೆ ವಸ್ತ್ರದಮಠ್​ ಅವರಿಗೆ ಮುರುಘಾಶ್ರೀ ಪವರ್ ಆಫ್​ ಅಟರ್ನಿ ನೀಡಿದ್ದಾರೆ. ಎಸ್​​​​ಜೆಎಂ ವಿದ್ಯಾಪೀಠದ ಚೆಕ್ ಸಹಿ ಸೇರಿದಂತೆ ವಿವಿಧ ಆಡಳಿತಾತ್ಮಕ ನಿರ್ಧಾರಕ್ಕಾಗಿ ವಸ್ತ್ರದಮಠ್​ಗೆ ಅಧಿಕೃತವಾಗಿ ನೋಟರಿ ಮಾಡಿ ಪವರ್ ಆಫ್​ ಅಟರ್ನಿ ಹಸ್ತಾಂತರ ಮಾಡಿದರು.

ಮುರುಘಾಮಠದ ಎಸ್​ಜೆಎಂ ವಿದ್ಯಾಪೀಠದ ಕಾರ್ಯದರ್ಶಿಗೆ ಪವರ್ ಆಫ್ ಅಟರ್ನಿ ಹಸ್ತಾಂತರ ಹಿನ್ನೆಲೆ ಎಸ್​ಜೆಎಂ ವಿದ್ಯಾಪೀಠದ ಆಡಳಿತ ಅಧಿಕಾರ ಕಾರ್ಯದರ್ಶಿಗೆ ಸಿಗಲಿದೆ. ಮುರುಘಾಶ್ರೀ, ಎಸ್​ಜೆಎಂ ವಿದ್ಯಾಪೀಠದ ಅದ್ಯಕ್ಷರು, ಮಠದ ಪೀಠಾದ್ಯಕ್ಷರು ಆಗಿರುವ ಮುರುಘಾ ಶ್ರೀಗಳು ಫೋಕ್ಸೋ ಪ್ರಕರಣದಲ್ಲಿ ಬಂಧನ ಹಿನ್ನೆಲೆ ಎಸ್ ಜೆ ಎಂ ವಿದ್ಯಾಪೀಠದ ಆಡಳಿತಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆ ಸಂಸ್ಥೆಯ ಸಿಬ್ಬಂದಿಗೆ ಸಂಬಳ ನೀಡುವುದು ತಡವಾಗಿತ್ತು. ಹೈಕೋರ್ಟ್ ಅನುಮತಿ ಪಡೆದು ಜೈಲಿನಲ್ಲೇ ಮುರುಘಾಶ್ರೀ ಸಹಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್