ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲು, ಬಂಧಿಸುವಂತೆ ಒತ್ತಾಯ

ಪ್ರೊ.ಭಗವಾನ್ ಅವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ದೂರು ನೀಡಿದ್ದು ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲು, ಬಂಧಿಸುವಂತೆ ಒತ್ತಾಯ
ಕೆ.ಎಸ್.ಭಗವಾನ್
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Oct 21, 2023 | 7:03 AM

ಮೈಸೂರು, ಅ.21: ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ (​​​Prof. KS Bhagwan) ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಮತ್ತೊಂದೆಡೆ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

ಪ್ರೊ.ಭಗವಾನ್ ಅವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೆಲವು ಹಿಂಬಾಲಕರನ್ನು ಖುಷಿಯಾಗಿಡಲು ಈ ರೀತಿ ಹೇಳಿಕೆ ನೀಡಿದ್ದಾರೆ. ಒಕ್ಕಲಿಗ ಸಮುದಾಯದ ವಿರುದ್ಧ ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ. ಇದು ದೇಶದ ಸಹಬಾಳ್ವೆ ಒಗ್ಗಟ್ಟು‌ ಒಡೆಯುವ ಕೆಲಸ. ಅದಕ್ಕೆ ದೇಶದ್ರೋಹಿ ಪ್ರಕರಣ ದಾಖಲಿಸುವಂತೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸದ್ಯ ಸೆಕ್ಷನ್ 153 ಅಡಿ ಗಲಾಟೆಗೆ ಪ್ರಚೋದನಕಾರಿಯಾಗುವಂತಹ ಭಾಷಣ. 153A ಎರಡು ಸಮುದಾಯದ ನಡುವೆ ಗಲಾಟೆ ಉಂಟು ಮಾಡುವುದು, ದ್ವೇಷ ಹೆಚ್ಚಿಸುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ; ಪ್ರೊ.ಕೆ.ಎಸ್.ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಬಿಜೆಪಿ ಒತ್ತಾಯ

ಕುವೆಂಪು ಅವರು ಎಲ್ಲೂ ಭಗವಾನ್ ಹೇಳಿದ ರೀತಿ ಹೇಳಿಲ್ಲ

ಮತ್ತೊಂದೆಡೆ ಎಫ್​ಐಆರ್ ದಾಖಲಾದ ಬೆನ್ನಲ್ಲೇ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸದಸ್ಯರು, ಎಫ್​ಐಆರ್ ಆಗಿರುವುದು ಸ್ವಾಗತ. ಕೂಡಲೇ ಭಗವಾನ್ ವಿರುದ್ಧ ಕಾನೂನು ಕ್ರಮ ಆಗಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಸುತ್ತೇವೆ. ಕುವೆಂಪು ಅವರು ಎಲ್ಲೂ ಭಗವಾನ್ ಹೇಳಿದ ರೀತಿ ಹೇಳಿಲ್ಲ. ಅವರು ಹೇಳಿರುವುದು ಕಾದಂಬರಿಯಲ್ಲಿ. ಕಾದಂಬರಿ ಕಾಲ್ಪನಿಕವಾದ ಒಂದು ಕಥೆ. ಭಗವಾನ್‌ಗೆ ನೀಡಿರುವ ಭದ್ರತೆ ವಾಪಸ್ಸು ಪಡೆಯಬೇಕು. ಭಗವಾನ್ ಅವರನ್ನು ಯಾವುದೇ ಕಾರ್ಯಕ್ರಮಗಳಿಗೆ ಕರೆಯಬಾರದು ಎಂದು ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

ಪ್ರೊ.ಭಗವಾನ್ ಹೇಳಿದ್ದೇನು?

ಇನ್ನು ತೀವ್ರ ವಿರೋಧದ ನಡುವೆಯೇ ಮಹಿಷ ಉತ್ಸವ ನೆರವೇರಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರೊ.ಕೆಎಸ್​ ಭಗವಾನ್ ಅವರು ‘ಅಗ್ನಿ ಪೂಜೆಯನ್ನು ಯಾಕೆ ಮಾಡುತ್ತಾರೆ. ಅದರಲ್ಲಿ ಏನು ಪ್ರಯೋಜನ ಇಲ್ಲ ಎಂದು ಬುದ್ಧ ತಿಳಿಸಿದ್ದರು. ಹೀಗಾಗಿ ರಾಜ ಮಹಾರಾಜರು ಅಗ್ನಿ ಪೂಜೆಯನ್ನು‌ ನಿಲ್ಲಿಸಿದರು. ಇದಕ್ಕಾಗಿ‌ ಬುದ್ಧರನ್ನು ಕಂಡರೆ ಬ್ರಾಹ್ಮಣರಿಗೆ ಕೋಪ. ಈಗಲೂ ಬ್ರಾಹ್ಮಣರು ಬುದ್ಧರ ಮೇಲೆ ಕೋಪವಿದೆ. ಬುದ್ಧರಿಗೆ ಜ್ಞಾನೋದಯವಾಗಿದ್ದು ಅರಳಿ ಮರದ ಕೆಳಗೆ, ಹೀಗಾಗಿ ಅವರು ಹೋಮ ಮಾಡುವಾಗ ಬೆಂಕಿಗೆ ಅರಳಿ ಮರದ ಚಕ್ಕೆ ಹಾಕುತ್ತಾರೆ. ಬುದ್ಧರ ಮೇಲಿನ ಕೋಪಕ್ಕೆ ಅರಳಿ ಮರದ ಚಕ್ಕೆಯನ್ನು ಬೆಂಕಿಗೆ ಹಾಕುತ್ತಾರೆ. ಬ್ರಾಹ್ಮಣರ ಸಂಪ್ರದಾಯಗಳು ಗೊಡ್ಡು ಸಂಪ್ರದಾಯಗಳು. ಅವರ ಸಂಪ್ರದಾಯಕ್ಕೆ ಅರ್ಥ ಇಲ್ಲ ಎಂದು ಹರಿಹಾಯ್ದಿದ್ದರು. ಜೊತೆಗೆ 2 ಸಾವಿರ ವರ್ಷದಿಂದ ಇವರು ಬೇರೆ ಅವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರುವುದೆ ಬ್ರಾಹ್ಮಣರ ಸೇವೆ ಮಾಡಲು ಎಂದು‌ ತಿಳಿಸಿದಿದ್ದಾರೆ. ಇದೇ ವೇಳೆ ಒಕ್ಕಲಿಗರು ಸಂಸ್ಕೃತಿ ಹೀನರು‌. ಈ ಮಾತು ನನ್ನದು ಅಲ್ಲ‌ ಕುವೆಂಪು ಅವರದ್ದು. ನಾನು ಹೇಳಿದ್ರೆ ನನ್ನ ಹೊಡೆಯುವುದಕ್ಕೆ ಬರುತ್ತಾರೆ. ನಿಜ ಹೇಳಿದವರನ್ನು ಯಾರು ಬಿಡಲ್ಲ. ಆದರೇ ನಿಜ ಹೇಳಿಯೇ ಸಾಯಬೇಕು ಎಂದು ಹೇಳಿದ್ದರು. ಅವರ ಈ ಹೇಳಿಕೆಯಿಂದ ದಸರಾ ಕವಿಗೋಷ್ಠಿಯಿಂದ ಕೈ ಬೀಡಲಾಗಿತ್ತು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ