AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR ಪ್ರಕ್ರಿಯೆ ವೇಳೆ ಕರ್ತವ್ಯನಿರತ ಸಿಬ್ಬಂದಿಗೆ ನಿಂದನೆ, ಬೆದರಿಕೆ: FIR ದಾಖಲು!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿ ಲತಾ ಎಂಬುವರ ಮನೆಗೆ ನುಗ್ಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ ಆರೋಪಿ ಮಹೇಂದ್ರ ಕುಮಾರ್ ವಿರುದ್ಧ FIR ದಾಖಲಾಗಿದೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲೂ ದಲಿತ ಸಮುದಾಯದ ಬಿಎಲ್‌ಒ ಅಧಿಕಾರಿಗೆ ಜಾತಿ ನಿಂದನೆ ಮಾಡಿ ಅಪಮಾನಿಸಲಾಗಿತ್ತು. ಈ ಘಟನೆಗಳು ಕರ್ತವ್ಯನಿರತ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿವೆ.

SIR ಪ್ರಕ್ರಿಯೆ ವೇಳೆ ಕರ್ತವ್ಯನಿರತ ಸಿಬ್ಬಂದಿಗೆ ನಿಂದನೆ, ಬೆದರಿಕೆ: FIR ದಾಖಲು!
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Jul 21, 2026 | 10:12 AM

Share

ಮುಖ್ಯಾಂಶಗಳು

  • SIR ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಗೆ ನಿಂದಿಸಿ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ FIR
  • ಜುಲೈ 13ರಂದು ಕುಡಿದು ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ್ದ ಆರೋಪಿ ಮಹೇಂದ್ರ
  • ದಕ್ಷಿಣ ಕನ್ನಡದ ಶಿರ್ಲಾಲಿನಲ್ಲೂ ಈ ಹಿಂದೆ BLO ಮೇಲೆ ನಡೆದಿತ್ತು ಅಪಮಾನ

ಮೈಸೂರು, ಜುಲೈ 21: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮನೆಗೆ ನುಗ್ಗಿ ಬೆದರಿಕೆಯೊಡ್ಡಿ ಅನುಚಿತವಾಗಿ ವರ್ತಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಮುಳ್ಳೂರು ಗ್ರಾಮದ ನಿವಾಸಿ ಮಹೇಂದ್ರ ಕುಮಾರ್ ಎಂಬಾತನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ನಡೆದಿದ್ದೇನು?

ಮತದಾರರ ಪಟ್ಟಿ ಪರಿಷ್ಕರಣೆಯ (SIR) ಕರ್ತವ್ಯದಲ್ಲಿದ್ದ ಸಿಬ್ಬಂದಿ ಲತಾ ಎಂಬುವರ ಮನೆಗೆ ಜುಲೈ 13ರಂದು ರಾತ್ರಿ ಕುಡಿದು ಬಂದಿದ್ದ ಮಹೇಂದ್ರ ಕುಮಾರ್, ಅಕ್ರಮವಾಗಿ ಮನೆಗೆ ನುಗ್ಗಿದ್ದಾನೆ. ಈ ವೇಳೆ ಲತಾ ಅವರ ಕೈ ಹಿಡಿದು ಎಳೆದಾಡಿ, ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ನೀನು 300 ಜನರ ಮತಗಳನ್ನು ಹಾಳು ಮಾಡಿದ್ದೀಯಾ, ನಮ್ಮ ಗ್ರಾಮದಲ್ಲಿ ನೀನು ಹೇಗೆ ಕೆಲಸ ಮಾಡುತ್ತೀಯಾ ನೋಡುತ್ತೇನೆ? ನಿನ್ನನ್ನು ಕೆಲಸದಿಂದಲೇ ತೆಗೆದುಹಾಕಿಸುತ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಸಿಬ್ಬಂದಿ ನೀಡಿದ ದೂರಿನನ್ವಯ ಬಿಳಿಗೆರೆ ಪೊಲೀಸರು ಮಹೇಂದ್ರ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಿಂದೆಯೂ ನಡೆದಿತ್ತು ಇದೇ ರೀತಿಯ ಘಟನೆ

SIR ಪ್ರಕ್ರಿಯೆಯ ವೇಳೆ ಕರ್ತವ್ಯನಿರತ ಸಿಬ್ಬಂದಿ ಹಾಗೂ ಬಿಎಲ್‌ಒ (BLO)ಗಳ ಮೇಲೆ ಇಂತಹ ದೌರ್ಜನ್ಯ ನಡೆದಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲೂ ಇಂತಹುದೇ ಅಮಾನವೀಯ ಘಟನೆ ವರದಿಯಾಗಿತ್ತು.

ಅಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಶಿರ್ಲಾಲು ಗ್ರಾಮದ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬುವರ ಮನೆಗೆ ಎಸ್‌ಐಆರ್ ಪ್ರಕ್ರಿಯೆಗೆಂದು ತೆರಳಿದ್ದರು. ಆದರೆ, ಆ ಸಮಯದಲ್ಲಿ ಮನೆಮಾಲಿಕರು ನಿಮ್ಮ ಜಾತಿಯವರು ಒಳಗೆ ಬರಬಾರದು ಎಂದು ಜಾತಿ ನಿಂದನೆ ಮಾಡಿ, ಅವರನ್ನು ಅಂಗಳದಲ್ಲೇ ನಿಲ್ಲಿಸಿ ತೀವ್ರವಾಗಿ ಅಪಮಾನಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ