ಯುವ ಬ್ರಿಗೇಡ್​ ಕಾರ್ಯಕರ್ತ ಹತ್ಯೆ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ಮೇಲೆ ಎಫ್​ಐಆರ್

ಯುವ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಯುವ ಬ್ರಿಗೇಡ್​ ಕಾರ್ಯಕರ್ತ ಹತ್ಯೆ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ಮೇಲೆ ಎಫ್​ಐಆರ್
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 15, 2023 | 5:48 PM

ಮೈಸೂರು: ಯುವ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರವಿಕುಮಾರ್‌ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 504, 505(1),(B)ರಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಕಾರ್ಯಕರ್ತರು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಹೊಡೆದಿದ್ದಾರೆ: ಚಕ್ರವರ್ತಿ ಸೂಲಿಬೆಲೆ ಆರೋಪ

rajee_hindu ಇನ್ಸ್​ಸ್ಟಾಗ್ರಾಂ ಐಡಿಯಿಂದ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌ ಹಾಕಲಾಗಿತ್ತು. ಈ ಬಗ್ಗೆ ರವಿಕುಮಾರ್‌ ಎಂಬುವವರು ಟಿ.ನರಸೀಪುರ ಪೊಲೀಸ್​ ಠಾಣೆಗೆ ದೂರು ನೀಡಿ ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರಂತೆ ಇದೀಗ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ​rajee_hindu ಇನ್ಸ್​ಸ್ಟಾಗ್ರಾಂ ಐಡಿ ಯಾರದ್ದು? ಅಂತೆಲ್ಲ ತನಿಖೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ

ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬವರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ಕೊಲೆ ಮಾಡಲಾಗಿತ್ತು. ವೇಣುಗೋಪಾಲ್ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ಜು. 09 ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಇದು ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿತ್ತು.

ಈ ಸಂಬಂಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಾಂಗ್ರೆಸ್​ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಾನಾ ಪೋಸ್ಟ್​ಗಳನ್ನು ಹಾಕಿ ಆಕ್ರೋಶ ಹೊರ ಹಾಕಿದ್ದರು. ಅಲ್ಲದೇ ಈ ಕೊಲೆ ಕಾಂಗ್ರೆಸ್ ಕಾರಣ ಎಂದು ಗಂಭೀರ ಆರೋಪಗಳನ್ನು ಮಾಡಿದ್ದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಕಂಠ, ಸಂದೇಶಮ ಅನಿಲ್, ಶಂಕರ್, ಮಂಜು ಮತ್ತು ಹ್ಯಾರಿಸ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದು, ವೈಯಕ್ತಿ ಕಾರಣದಿಂದ ಈ ಹತ್ಯೆ ನಡೆದಿದೆ ಎಂದು ಹೇಳಿದ್ದಾರೆ,

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್