ಮೈಸೂರು: ಏಕಾಏಕಿ ಹೊತ್ತಿ ಉರಿದ ಶಾಲಾ ಬಸ್, ತಪ್ಪಿದ ಅನಾಹುತ
ಘಟನೆಯಲ್ಲಿ ಒಂದು ಬಸ್ ಬೆಂಕಿಗಾಹುತಿ ಆಗಿದ್ದು, ಕೆಲ ಬಸ್‌ಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಮೈಸೂರು: ಶಾಲಾ ಬಸ್ ಒಂದು ಏಕಾಏಕಿ ಹೊತ್ತಿ ಉರಿದ ದುರ್ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ. ಘಟನೆಯಲ್ಲಿ ಒಂದು ಬಸ್ ಬೆಂಕಿಗಾಹುತಿ ಆಗಿದ್ದು, ಕೆಲ ಬಸ್‌ಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಬಸ್‌ನಲ್ಲಿ ಶಾಲಾ ಮಕ್ಕಳು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಕಿ ತಗಲುತ್ತಿದ್ದಂತೆ ಅಕ್ಕ ಪಕ್ಕ ನಿಲ್ಲಿಸಿದ್ದ ಬಸ್ ಗಳ ತೆರವು ಮಾಡಲಾಗಿದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದಾವಣಗೆರೆ: ಟ್ರಾನ್ಸ್ಫಾರ್ಮರ್ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಿದ್ದ ಬಸ್ ಟ್ರಾನ್ಸ್ಫಾರ್ಮರ್ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಸ್ ಬಿದ್ದ ದುರ್ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಬಳಿ ನಡೆದಿದೆ. ಎದುರಿಗೆ ಬಂದ ಬೈಕ್ಗೆ ದಾರಿ ಬಿಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ. ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯ ಆಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಜಯಪುರ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣು ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾದ ದುರ್ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಶೆಡ್ನಲ್ಲಿ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲತವಾಡ ಪಟ್ಟಣ ನಿವಾಸಿ ಅಮರಪ್ಪ ಗಂಗನಗೌಡ ಆತ್ಮಹತ್ಯೆ ಮಾಡಿಕೊಂಡ ರೈತ. ವಿವಿಧ ಬ್ಯಾಂಕ್ ಹಾಗೂ ಖಾಸಗಿಯಾಗಿ 2.75 ಲಕ್ಷ ಸಾಲ ಮಾಡಿದ್ದ ರೈತ ಸಾಲ ಮರುಪಾವತಿ ಮಾಡಲಾಗದ್ದಕ್ಕೆ ನೇಣಿಗೆ ಶರಣಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು, ಕಂದಾಯ ಇಲಾಖೆ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯಿಂದ ಭಯವಿಲ್ಲ; ಸಮಾಜ ಸೇವೆಯೇ ಕ್ರೈಸ್ತ ಧರ್ಮದ ಮೂಲ ಉದ್ದೇಶ: ಮೈಸೂರು ಕ್ರೈಸ್ತ ಧರ್ಮಾಧಿಕಾರಿ
ಇದನ್ನೂ ಓದಿ: ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು
Published On - 3:53 pm, Wed, 22 December 21