ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ: ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ

| Updated By: ಆಯೇಷಾ ಬಾನು

Updated on: Nov 27, 2023 | 11:08 AM

ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ ಗ್ಯಾಂಗನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು ಮೈಸೂರು ಜಿಲ್ಲೆಯ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಮೇಲೆ ಹದ್ದಿನ ಕಣ್ಣಿಟ್ಟಿದೆ.

ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ: ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ
ಸಾಂದರ್ಭಿಕ ಚಿತ್ರ
Follow us on

ಮೈಸೂರು, ನ.27: ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ (Foeticide) ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ (Mysuru Health Department) ಹೈ ಅಲರ್ಟ್ ಆಗಿದ್ದು ಮೈಸೂರು ಜಿಲ್ಲೆಯ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಕ್ರಮ ತಡೆಗಟ್ಟಲು ಜಿಲ್ಲೆಯಲ್ಲಿ ಟಾಸ್ಕ್ ಪೋರ್ಸ್ ಪಡೆಯನ್ನು ನಿಯೋಜಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಿಸಲಿದೆ.

ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ ಗ್ಯಾಂಗನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಸದ್ಯ ಮೈಸೂರು ಡಿಎಚ್‌ಓ ಬಿ.ಸಿ. ಕುಮಾರಸ್ವಾಮಿ ಅವರು ಸಭೆ ನಡೆಸಿ ಎಲ್ಲಾ ವೈದ್ಯಾಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಆಯುರ್ವೇದ ಸೆಂಟರ್, ಹೋಮಿಯೋಪತಿ ಕ್ಲಿನಿಕ್‌ಗಳ‌ ಮೇಲೂ ನಿಗಾ ಇಡುವಂತೆ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಇದನ್ನೂ ಓದಿ: ಭ್ರೂಣ ಹತ್ಯೆ ಪತ್ತೆ: ಇದು ಸಮಾಜಘಾತುಕ ಕೆಲಸ, ಇದನ್ನ ಖಂಡಿಸುತ್ತೇನೆ: ಸಚಿವ ಚಲುವರಾಯಸ್ವಾಮಿ

ಇನ್ನು ಮತ್ತೊಂದೆಡೆ ಮೈಸೂರಿನ ಮಾತಾ ನರ್ಸಿಂಗ್ ಹೋಮ್‌ ಅನುಮತಿಯೇ ಪಡೆದಿರಲಿಲ್ಲ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ನರ್ಸಿಂಗ್ ಹೋಮ್ ಐದು ತಿಂಗಳ‌ ಹಿಂದೆಯೇ ಬಂದ್ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇದಕ್ಕೆ ಸಂಬಂಧಪಟ್ಟವರು ಯಾರೂ ಲಭ್ಯವಿಲ್ಲ. ಪೊಲೀಸರು ತನಿಖೆ‌ ಮುಂದುವರಿಸಿದ್ದಾರೆ. ಇಂತಹ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ ಎರಡು ಟಾಸ್ಕ್‌ಪೋರ್ಸ್ ಕೆಲಸ ನಿರ್ವಹಿಸುತ್ತಿವೆ. ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಆರೋಗ್ಯ ಸಂಸ್ಥೆಗಳು, ನರ್ಸಿಂಗ್ ಹೋಮ್ ಸೇರಿ ಎಲ್ಲ ಕಡೆಗಳಲ್ಲೂ ನಿರಂತರವಾಗಿ ಪರಿಶೀಲನೆ ನಡೆಯುತ್ತಿದೆ. ಆಶಾ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಭ್ರೂಣ ಪತ್ತೆ ಹತ್ಯೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಈ ಬಗ್ಗೆ ಯಾವುದೇ ಮಾಹಿತಿ ಇದ್ದರೂ ತಿಳಿಸಿ ಎಂದು ಟಿವಿ9 ಮೂಲಕ ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:07 am, Mon, 27 November 23