ಕೇಂದ್ರದ ವಿರುದ್ಧ ಹೋರಾಟಕ್ಕೆ ಕರ್ನಾಟಕ ಜನರಂಗ ಅಸ್ತಿತ್ವಕ್ಕೆ; ಮೊದಲ ಹೋರಾಟಕ್ಕೆ ದಿನಾಂಕ ನಿಗದಿ

| Updated By: Rakesh Nayak Manchi

Updated on: Feb 19, 2024 | 2:36 PM

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಟಾಪಟಿ ಆರಂಭವಾಗಿದೆ. ತೆರಿಗೆ ಪಾಲು ನೀಡುವಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈಸೂರಿನಲ್ಲಿ ಕರ್ನಾಟಕ ಜನರಂಗ ಅಸ್ತಿತ್ವಕ್ಕೆ ಬಂದಿದೆ. ಸಂಘಟನೆಯ ಮೊದಲ ಹೋರಾಟಕ್ಕೆ ದಿನಾಂಕವೂ ನಿಗದಿಯಾಗಿದೆ.

ಕೇಂದ್ರದ ವಿರುದ್ಧ ಹೋರಾಟಕ್ಕೆ ಕರ್ನಾಟಕ ಜನರಂಗ ಅಸ್ತಿತ್ವಕ್ಕೆ; ಮೊದಲ ಹೋರಾಟಕ್ಕೆ ದಿನಾಂಕ ನಿಗದಿ
ಪ್ರಧಾನಿ ನರೇಂದ್ರ ಮೋದಿ
Follow us on

ಮೈಸೂರು, ಫೆ.19: ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಟಾಪಟಿ ಜೋರಾಗಿಯೇ ನಡೆಯುತ್ತಿದೆ. ತೆರಿಗೆ (Tax) ಪಾಲು ನೀಡುವಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈಸೂರಿನಲ್ಲಿ ಕರ್ನಾಟಕ ಜನರಂಗ (Karnataka Janaranga) ಅಸ್ತಿತ್ವಕ್ಕೆ ಬಂದಿದೆ. ಸಂಘಟನೆಯ ಮೊದಲ ಹೋರಾಟಕ್ಕೆ ದಿನಾಂಕವೂ ನಿಗದಿಯಾಗಿದೆ.

ತೆರಿಗೆ ಪಾಲು ನೀಡುವಲ್ಲಿ ಕೇಂದ್ರದಿಂದ ಅನ್ಯಾಯ ಆರೋಪ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮೈಸೂರಿನ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಕರ್ನಾಟಕ ಜನರಂಗ ಅಸ್ತಿತ್ವಕ್ಕೆ ಬಂದಿದೆ. ಅದರಂತೆ ಮೊದಲ ಹೋರಾಟವು ಮೈಸೂರಿನ ಚಿಕ್ಕ ಗಡಿಯಾರದ ಬಳಿ ಫೆಬ್ರವರಿ 21 ರಿಂದ 23 ರ ವರೆಗೆ ಪ್ರತಿಭಟನೆ ಆಯೋಜಿಸಲಾಗಿದೆ. ನ್ಯಾಯಬದ್ಧ ತೆರಿಗೆ ವಾಪಸ್‌ ಕೊಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಲು ಪ್ಲಾನ್ ಮಾಡಿಕೊಂಡಿದೆ.

ತೆರಿಗೆ ತಾರತಮ್ಯ: 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹೇಳುವುದೇನು?

ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ತಮಗೆ ಅನ್ಯಾಯ ಆಗುತ್ತಿದೆ ಎಂದು ದಕ್ಷಿಣದ ರಾಜ್ಯಗಳು ಬಲವಾಗಿ ಆರೋಪಿಸುತ್ತಿವೆ. ಅದರಲ್ಲೂ ಕರ್ನಾಟಕ ಸರ್ಕಾರ ಸಾಕಷ್ಟು ಟೀಕಾ ಪ್ರಹಾರ ನಡೆಸುತ್ತಿದೆ. ಈಗ 16ನೇ ಹಣಕಾಸು ಆಯೋಗ ರಚನೆಯಾಗಿದ್ದು, ಮಾಜಿ ನೀತಿ ಆಯೋಗ್ ಮುಖ್ಯಸ್ಥ ಅರವಿಂದ್ ಪನಗರಿಯಾ ಈ 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದಾರೆ. ವಿವಿಧ ರಾಜ್ಯಗಳಿಗೆ ತೆರಳಿ ಸಂಬಂಧಿತ ಎಲ್ಲರೊಂದಿಗೂ ಆಯೋಗ ಅಭಿಪ್ರಾಯ ಸಂಗ್ರಹಿಸಿ ತೆರಿಗೆ ಹಂಚಿಕೆ ಸೂತ್ರವನ್ನು ಆಯೋಗವು ಪ್ರಸ್ತುತಪಡಿಸಲಿದೆ. ಮಾಧ್ಯಮ ಸಂದರ್ಶನವೊಂದರಲ್ಲಿ ಪನಗರಿಯ ಅವರಿಗೆ ಕರ್ನಾಟಕದ ವಿಚಾರದ ಬಗ್ಗೆ ಪ್ರಶ್ನೆ ಎದುರಾಯಿತು. ಸದ್ಯ ಈ ವಿಚಾರದ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದು ಅನುಚಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನನ್ನ ತೆರಿಗೆ ನನ್ನ ಹಕ್ಕು’ಅಭಿಯಾನ: ಸಾರ್ವಜನಿಕರ ಪ್ರಶ್ನೆಗಳಿಗೆ ಅಂಕಿ-ಸಂಖ್ಯೆ ಸಮೇತ ಉತ್ತರಿಸಿದ ಸಿಎಂ

ಈ ವಿಚಾರ (ತೆರಿಗೆ ಹಂಚಿಕೆಯದ್ದು) ಹಣಕಾಸು ಆಯೋಗದ ಕಾರ್ಯ ವ್ಯಾಪ್ತಿಗೆ ಬರುವಂಥದ್ದೇ. ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ 15ನೇ ಹಣಕಾಸು ಆಯೋಗ ಬೇರೆ ಮಾನದಂಡವನ್ನೂ ತರಲು ಯತ್ನಿಸಿತ್ತು. ಹೀಗಾಗಿ, ನಾವು ಆ ಸಂಗತಿಯನ್ನೂ ಅವಲೋಕಿಸಿ ಬಳಿಕ ನಿರ್ಧರಿಸಬೇಕಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್, ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ಆರಂಭಿಸಿದೆ. ಇತ್ತೀಚೆಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದರು. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ GST ಪ್ರಮಾಣ ಕಡಿಮೆಮಾಡಿ. ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ GST ಹೆಚ್ಚಿಸಬೇಕು. ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಗುಜರಾತ್ ಸಿಎಂ ಆಗಿದ್ದಾಗ 50% ತೆರಿಗೆ ಪಾಲು ಕೊಡಿ ಎಂದು ಹೇಳಿದ್ದಾಗಿ ತಿಳಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Mon, 19 February 24