AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬೋನಿಗೆ ಬಿತ್ತು ಹೆಣ್ಣು ಚಿರತೆ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಹಲವು ದಿನಗಳಿಂದ ಗ್ರಾಮದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ, ಮೇಕೆ ಮರಿಗಳನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ರೈತ ಜನಾರ್ಧನ್ ಅವರ ಜಮೀನಿನಲ್ಲಿ ಅರಣ್ಯ ಅಧಿಕಾರಿಗಳು ಬೋನು ಇಟ್ಟಿದ್ದರು. ಸದ್ಯ ಬೋನಿಗೆ ಚಿರತೆ ಬಿದ್ದಿದ್ದು, ಚಿರತೆಯನ್ನು ಅರಣ್ಯಾಧಿಕಾರಿಗಳು ಮತ್ತೆ ಕಾಡಿಗೆ ಬಿಟ್ಟಿದ್ದಾರೆ.

ಮೈಸೂರಿನಲ್ಲಿ ಬೋನಿಗೆ ಬಿತ್ತು ಹೆಣ್ಣು ಚಿರತೆ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ
ಸೆರೆ ಸಿಕ್ಕ ಹೆಣ್ಣು ಚಿರತೆ
TV9 Web
| Edited By: |

Updated on:Oct 04, 2021 | 10:02 AM

Share

ಮೈಸೂರು: ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟ ಬೋನಿಗೆ ಹೆಣ್ಣು ಚಿರತೆಯೊಂದು ಸೆರೆ ಸಿಕ್ಕಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕಾರ್ಗಳ್ಳಿ ಗ್ರಾಮದಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಹಲವು ದಿನಗಳಿಂದ ಗ್ರಾಮದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ, ಮೇಕೆ ಮರಿಗಳನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ರೈತ ಜನಾರ್ಧನ್ ಅವರ ಜಮೀನಿನಲ್ಲಿ ಅರಣ್ಯ ಅಧಿಕಾರಿಗಳು ಬೋನು ಇಟ್ಟಿದ್ದರು. ಸದ್ಯ ಬೋನಿಗೆ ಚಿರತೆ ಬಿದ್ದಿದ್ದು, ಚಿರತೆಯನ್ನು ಅರಣ್ಯಾಧಿಕಾರಿಗಳು ಮತ್ತೆ ಕಾಡಿಗೆ ಬಿಟ್ಟಿದ್ದಾರೆ.

ಚಾಮರಾಜನಗರ: ಕಾಡಾನೆ ದಾಳಿ; ಆನೆಯನ್ನು ಕಾಡಿಗಟ್ಟುವಂತೆ ಗ್ರಾಮಸ್ಥರಿಂದ ಒತ್ತಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೊರಮನ ಕತ್ರಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ಉಪಟಳದಿಂದ ರೈತರು ಬೆಳೆದ ಬೆಳೆಗೆ ಹಾನಿಯಾಗಿದೆ. ಹೀಗಾಗಿ ನೊಂದ ಗ್ರಾಮಸ್ಥರು ಆನೆಯನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದಾರೆ. ಆನೆ ಕಾಡಿಗಟ್ಟಲು ಯುವಕರು ಮತ್ತು ಮಲೆಮಾದೇಶ್ವರ ವನ್ಯಜೀವಿ ವಿಭಾಗದ ಪಿಜಿ ಪಾಳ್ಯ ಅರಣ್ಯ ಇಲಾಖೆ ಸಿಬ್ಬಂದಿಗಳು ಹರ ಸಾಹಸ ಪಟ್ಟಿದ್ದಾರೆ.

ರಾತ್ರಿ ಇಡೀ ಜೋಳ, ರಾಗಿ, ಆಲೂಗಡ್ಡೆ ಸೇರಿದಂತೆ ಹಲವು ಬೆಳೆ ತಿಂದು ಕಾಡಾನೆಗಳು ಹಾಳು ಮಾಡಿವೆ. ಹೀಗಾಗಿ ಪದೇ ಪದೇ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜಕಾಲುವೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾವು ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆಯ ಅವಾಂತರದಿಂದ ರಾಜಕಾಲುವೆಗೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾವನ್ನಪ್ಪಿವೆ. ಮನೆ, ಕೊಟ್ಟಿಗೆಗೆ ಏಕಾಏಕಿ ನೀರು ನುಗ್ಗಿ ಜಾನುವಾರು ಮೃತಪಟ್ಟಿವೆ. ಅಂದಾನಪ್ಪ ಎಂಬುವವರಿಗೆ ಸೇರಿದ 5 ಹಸು, 6 ಮೇಕೆ ಸಾವೀಗಿಡಾಗಿದೆ. ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಕೂಡ ನೀರುಪಾಲಾಗಿದೆ. ರೈತನ ಮನೆಯಲ್ಲಿದ್ದ ಸುಮಾರು 30 ಮೂಟೆ ಇಂಡಿ ಬೂಸ ಮಳೆಗೆ ಸಂಪೂರ್ಣ ಹಾನಿಯಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಆತಂಕ ಮೂಡಿಸಿದ್ದ ಚಿರತೆ ಸೆರೆ, ನಿಟ್ಟುಸಿರುಬಿಟ್ಟ ಜನ

ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ವಾಕಿಂಗ್ ಸ್ಟಿಕ್​​ನೊಂದಿಗೆ ಹೋರಾಡಿದ ಮಹಿಳೆ; ಭಯಾನಕ ದೃಶ್ಯವಿದು

Published On - 9:56 am, Mon, 4 October 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್