AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಹಿಳೆಯನ್ನು ಬಲಿ ಪಡೆದು ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ

ನ.24ರಂದು ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗಿದ್ದ ರತ್ನಮ್ಮ (55) ಎಂಬ ಮಹಿಳೆಯ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಕೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.

ಮೈಸೂರು: ಮಹಿಳೆಯನ್ನು ಬಲಿ ಪಡೆದು ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ
ಮೈಸೂರಿನಲ್ಲಿ ಹುಲಿ ಸೆರೆ
ರಾಮ್​, ಮೈಸೂರು
| Edited By: |

Updated on: Nov 28, 2023 | 9:21 AM

Share

ಮೈಸೂರು, ನ.28: ಬಂಡೀಪುರ ಭಾಗದಲ್ಲಿ ಜನರ ನಿದ್ದೆ ಕೆಡಿಸಿದ್ದ ಹಾಘೂ ಮಹಿಳೆಯನ್ನು ಬಲಿ ಪಡೆದಿದ್ದ (Death) ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು (Tiger) ಸೆರೆ ಹಿಡಿದಿದ್ದಾರೆ. ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ ಹುಲಿಯನ್ನು ಹಿಡಿಯಲಾಗಿದೆ.

ಸೋಮವಾರ ಮಧ್ಯರಾತ್ರಿ 1.45ರ ಹೊತ್ತಿಗೆ ಎರಡು ದಿನದ ಹಿಂದೆ ಹಸುವೊಂದನ್ನು ಕೊಂದಿದ್ದ ಜಾಗಕ್ಕೆ ಬಂದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು ಸದ್ಯ ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ.

ನ.24ರಂದು ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗಿದ್ದ ರತ್ನಮ್ಮ (55) ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ ಆಕೆಯನ್ನು ಕೊಂದು ಹಾಕಿತ್ತು. ಅಲ್ಲದೇ ದೇಹದ ಭಾಗವನ್ನೂ ತಿಂದು ಹಾಕಿತ್ತು. ಮರು ದಿನ ಅದೇ ಗ್ರಾಮದ ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ನಂತರ ಜನರಲ್ಲಿ ಆತಂಕ ಹೆಚ್ಚಾಗಿ ಅರಣ್ಯ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಸದ್ಯ ಮೂರು ದಿನಗಳ ಸತತ ಕಾರ್ಯಾಚರಣೆಯಿಂದ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್

ಇನ್ನು ಹುಲಿ ಒಮ್ಮೆ ಬೇಟೆಯಾಡಿದ ಸ್ಥಳಕ್ಕೆ ಮತ್ತೊಮ್ಮೆ ಬೇಟೆಗಾಗಿ ಬಂದೇ ಬರುತ್ತದೆ ಎಂಬ ಕಾರಣದಿಂದ ಹುಲಿ ದಾಳಿ ಮಾಡಿದ ಸ್ಥಳದಲ್ಲಿ ಕ್ಯಾಮರಗಳನ್ನು ಅಳವಡಿಸಲಾಗಿತ್ತು. ಸೋಮವಾರ ರಾತ್ರಿ 9ರ ಸಮಯದಲ್ಲಿಯೇ ಹುಲಿ ಹಸು ತಿನ್ನಲು ಬಂದಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಸಮೀಪದಲ್ಲಿಯೇ ಬೋನು ಇರಿಸಿ ಅದರೊಳಗೆ ವೈದ್ಯಾಧಿಕಾರಿ ಡಾ.ವಾಸೀಂ ಜಾಫರ್‌ ಅವರು ಇರುವಂತೆ ನೋಡಿಕೊಂಡಿತ್ತು. ಅಲ್ಲದೇ ಸಿಬ್ಬಂದಿಯೂ ಅಲ್ಲಿಯೇ ಇದ್ದರು. ಮಧ್ಯರಾತ್ರಿ ಮತ್ತೆ ಹುಲಿ ಬಂದಾಗ ಅದಕ್ಕೆ ಅರವಳಿಕೆಯನ್ನು ಡಾ.ವಾಸೀಂ ಜಾಫರ್‌ ಅವರು ನೀಡುವಲ್ಲಿ ಯಶಸ್ವಿಯಾದರು. ಕೆಲವೇ ಕ್ಷಣದಲ್ಲಿ ಉರುಳಿ ಬಿದ್ದ ಹುಲಿಯನ್ನು ಬಲೆ ಹಾಕಿ ಸೆರೆ ಹಿಡಿದು ಬೆಳಗಿನ ಜಾವವೇ ಮೈಸೂರು ಮೃಗಾಲಯಕ್ಕೆ ಶಿಫ್ಟ್ ಮಾಡಲಾಯಿತು .

ಮತ್ತೊಂದೆಡೆ ಹುಲಿ ಸೆರೆಗೆ ಸಾಕಾನೆ ಹಾಗೂ ಡ್ರೋನ್ ಬಳಸಿ ನಿರಂತರ ಶೋಧ ನಡೆಸಲಾಗಿತ್ತು. ಸಾಕಾನೆಗಳಾದ ಪಾರ್ಥ, ರೋಹಿತ್, ಹಿರಣ್ಯಾ ಆನೆಗಳ ಮೂಲಕ ಕಾರ್ಯಾಚರಣೆ ನಡೆಯುತ್ತಿತ್ತು. ಟ್ರ್ಯಾಪ್ ಕ್ಯಾಮೆರಾಗಳನ್ನು ಹಾಕಿ ಹುಲಿಗಾಗಿ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ಎರಡು ಹುಲಿಗಳ ಓಡಾಟ ಪತ್ತೆಯಾಗಿತ್ತು. ಅಷ್ಟೇ ಅಲ್ಲ ಸಾಕುಪ್ರಾಣಿಗಳ ಮೇಲೆ ದಾಳಿ ನಡೆದಿದ್ದೂ ಪತ್ತೆಯಾಗಿತ್ತು. ಅಧಿಕಾರಿಗಳು ಸೇರಿ 207 ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ. 100 ಗಿರಿಜನರು ಹುಲಿ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ