ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ; 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ

| Updated By: ಆಯೇಷಾ ಬಾನು

Updated on: Aug 12, 2024 | 3:11 PM

ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದೆ. 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ. ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಗುರುತಿಸಲಾಗಿದ್ದು ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿವೆ.

ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ; 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ
ಸಾಂದರ್ಭಿಕ ಚಿತ್ರ
Follow us on

ಮೈಸೂರು, ಆಗಸ್ಟ್​.12: ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಇಲಾಖೆ ಗುರುತಿಸಿದೆ.

ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆಗಮಿಸಲಿದ್ದು ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆಗಮಿಸಲಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯ ಖಾಲಿಯಾದ್ರೆ ನಾಲ್ಕು ಜಿಲ್ಲೆ ಜನರಿಗೆ ಸಂಕಷ್ಟ, ಆಂಧ್ರಕ್ಕೂ ಇದೇ ಪಾಲು

ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ.  ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

‘ಎರಡನೇ ತಂಡದಲ್ಲಿ 5 ಆನೆಗಳಿರಲಿದ್ದು, 4 ಆನೆಗಳನ್ನು ತುರ್ತು ಸನ್ನಿವೇಶಗಳಿಗೆ ಮೀಸಲಿರಿಸಲಾಗಿದೆ. ಆ.12ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಮಾನವ – ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಅಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ