ಸಿದ್ದರಾಮಯ್ಯ ವೃತ್ತ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿಯೇ ಓಲಾ ಬೈಕ್​ ಕಂಪನಿ ತಮಿಳುನಾಡಿಗೆ ಹೋಯ್ತು. ಓಲಾ ಕಂಪನಿ ಇಲ್ಲೇ ಆಗಿದ್ರೆ 10,000 ಉದ್ಯೋಗ ಸಿಗುತ್ತಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉದಾಹರಣೆ ನೀಡಿದರು.

ಸಿದ್ದರಾಮಯ್ಯ ವೃತ್ತ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ
ಸಿದ್ದರಾಮಯ್ಯ ವೃತ್ತ ಉದ್ಘಾಟನೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 08, 2022 | 8:35 PM

ಮೈಸೂರು: ಸಿದ್ದರಾಮಯ್ಯ ವೃತ್ತ ಉದ್ಘಾಟನೆ (Inauguration) ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಶಾಸಕರಾದ ಜಿ.ಟಿ.ದೇವೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಮತ್ತಿತರರು ಹಾಜರಿದ್ದರು. ಮೈಸೂರು ವಿಶ್ವವಿದ್ಯಾಲಯ ಉದ್ಯೋಗಿಗಳ ಬಡಾವಣೆಯಲ್ಲಿ ಇಂದು ಬಸ್ ತಂಗಲಿದೆ. ಇಂದು ಬೆಳಗ್ಗೆಯಷ್ಟೇ ಯಾರು ಏನೇ ಹುನ್ನಾರ ಮಾಡಿದ್ರು ಕರ್ನಾಟಕ ಪ್ರಗತಿ ನಿಲ್ಲಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ಯಾರೇ ಏನೇ ಅಭಿಯಾನ ಮಾಡಿದ್ರು ಕರ್ನಾಟಕದ ಪ್ರಗತಿ ನಿರಂತರವಾಗಿ ಮುಂದುವರಿಯುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಹೂಡಿಕೆದಾರರು ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಸಂಜೆಯ ವೇಳೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಸರಿಯಿಲ್ಲದಿದ್ದರೆ ಇನ್ವೆಸ್ಟರ್ಸ್​ ಬರಲ್ಲ. ಹೂಡಿಕೆದಾರರು ಬರಲ್ಲ ಅಂದ್ರೆ ಆರ್ಥಿಕ ವ್ಯವಸ್ಥೆ ಕುಸಿಯುತ್ತೆ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿಯೇ ಓಲಾ ಬೈಕ್​ ಕಂಪನಿ ತಮಿಳುನಾಡಿಗೆ ಹೋಯ್ತು. ಓಲಾ ಕಂಪನಿ ಇಲ್ಲೇ ಆಗಿದ್ರೆ 10,000 ಉದ್ಯೋಗ ಸಿಗುತ್ತಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉದಾಹರಣೆ ನೀಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಆಗಿಲ್ಲ. ಚುನಾವಣೆಗೆ ಹೋದರೆ ಸಾಧನೆ ಏನು ಎಂದು ಹೇಳಿಕೊಳ್ತಾರೆ? ಹಾಗಾಗಿ ಇಂತಹ ಧಾರ್ಮಿಕ ವಿಚಾರ ಮುನ್ನೆಲೆಗೆ ತರುತ್ತಾರೆ. ಮುಸ್ಲಿಂ ಸಮುದಾಯಕ್ಕೆ ಕೆಲ ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಹಿಜಾಬ್, ಹಲಾಲ್, ಮಸೀದಿ ಮೈಕ್​ಗೆ ನಿರ್ಬಂಧ ಅಂದರು. ದೇವಸ್ಥಾನ ಸುತ್ತಮುತ್ತ ವ್ಯಾಪಾರ ನಿರ್ಬಂಧ, ಮಾವು ಮಾರಾಟ ವಿಚಾರ ಮುಂದೆ ತಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ತೋರಿದರು.

ಬೆಲೆ ಏರಿಕೆ ಬಗ್ಗೆ ಮಾತನಾಡಲಿ, ಯಾಕೆ ಬಿಜೆಪಿ ಅದರ ಬಗ್ಗೆ ಮಾತಾಡ್ತಿಲ್ಲ? ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳವಾಗುತ್ತಲೇ ಇದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಧಾರ್ಮಿಕ ವಿಚಾರ ಚರ್ಚೆಗೆ ತಂದಿದ್ದಾರೆ. ಹಲಾಲ್ ಮಾಂಸ ಹಿಂದೆಲ್ಲಾ ತಿಂದಿಲ್ವಾ? ಅದೇನ್ ಹೊಸದಾ? ಎಂದು ಮೈಸೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ:

ಕಾಲಿಗೆ ಕಾಡುಬಳ್ಳಿ ತೊಡರಿ ಬಿಡಿಸಿಕೊಳ್ಳಲಾಗದೆ ಅರಚುತ್ತಿದ್ದ ಕರಡಿಯನೆರವಿಗ ಅರಣ್ಯ ಸಿಬ್ಬಂದಿ ಧಾವಿಸಿದರು

ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್