ಹಿಂದೂ ಕಾರ್ಯಕರ್ತರು ಒಬ್ಬೊಬ್ಬರೇ ಓಡಾಡಬೇಡಿ, ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನೂ ಕೊಲ್ಲುತ್ತಾರೆ: ಶ್ರೀರಾಮುಲು
ಕೊಲೆಯಾದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಅವರ ನಿವಾಸಕ್ಕೆ ಇಂದು (ಜು.12) ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದರು. ಈ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ. ನಿಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಕುಟುಂಬಸ್ಥರಿಗೆ ಹೇಳಿದರು.
ಮೈಸೂರು: ಹಿಂದೂ ಕಾರ್ಯಕರ್ತರು (Hindu Activist) ಯಾರೂ ಒಬ್ಬೊಬ್ಬರೆ ಓಡಾಡಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಇರುವವರೆಗೆ ಎಲ್ಲರನ್ನೂ ಕೊಲ್ಲುತ್ತಾರೆ. ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು (Sriramulu) ಅವರು ಹೇಳಿದರು. ಮೈಸೂರು (Mysore) ಜಿಲ್ಲೆಯ ಟಿ.ನರಸೀಪುರದಲ್ಲಿ (T. Narasipura) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ವೇಣುಗೋಪಾಲ್ ನಾಯಕ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದನು. ವೇಣುಗೋಪಾಲ್ ಮೊಬೈಲ್ ಪರಿಶೀಲನೆ ಮಾಡಿದರೇ ಗೊತ್ತಾಗುತ್ತೆ ಎಂದರು.
ಕೊಲೆಯಾದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಅವರ ನಿವಾಸಕ್ಕೆ ಇಂದು (ಜು.12) ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದರು. ಈ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ. ನಿಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ. ಎಲ್ಲರಿಗೂ ಶಿಕ್ಷೆಯಾಗಬೇಕು, ನಾವೆಲ್ಲ ಹೋರಾಟ ಮಾಡುತ್ತೇವೆ ಎಂದು ವೇಣುಗೋಪಾಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಹೊಡೆದಿದ್ದಾರೆ: ಚಕ್ರವರ್ತಿ ಸೂಲಿಬೆಲೆ ಆರೋಪ
ಮೊಬೈಲ್ ಪರಿಶೀಲಿಸಿದರೇ ಯಾರೆಲ್ಲ ಕರೆ ಮಾಡಿದ್ದಾರೆ ಗೊತ್ತಾಗುತ್ತೆ. ವೇಣುಗೋಪಾಲ್ ನಾಯಕ ಯಾವ ಕ್ರಿಮಿನಲ್ ಕೆಲಸ ಮಾಡಿಲ್ಲ. ಇದು ಧರ್ಮದ ವಿಚಾರವಾಗಿ ನಡೆದಿರುವ ಕೊಲೆ. ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ. ಇದರಲ್ಲಿ ಯಾವುದೇ ಪಕ್ಷ ಅನ್ನುವುದು ಇಲ್ಲ. ಕೊಲೆಯ ಬಗ್ಗೆ ಸಂಪೂರ್ಣ ತನಿಖೆ ನಡೆದರೆ ಯಾರ ಕುಮ್ಮಕ್ಕಿನಿಂದ ಆಗಿರುವುದು ಎಂಬುದು ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:48 pm, Wed, 12 July 23