Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ದಿನಾಚರಣೆ ಪ್ರಯುಕ್ತ ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ

ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ ಮೃಗಾಲಯ ಮತ್ತು ವಸ್ತು ಪ್ರದರ್ಶನಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗಿದೆ. ಪ್ರತಿ ವರ್ಷವೂ ಮಕ್ಕಳ ದಿನಾಚರಣೆ ದಿನ ಉಚಿತ ಪ್ರವೇಶ ನೀಡಲಾಗುತ್ತೆ. ಅದರಂತೆ ಇಂದು ಕೂಡ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇಂದು ದೀಪಾವಳಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ.

ಮಕ್ಕಳ ದಿನಾಚರಣೆ ಪ್ರಯುಕ್ತ ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ
ಮೈಸೂರು ಮೃಗಾಲಯ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Nov 14, 2023 | 9:58 AM

ಮೈಸೂರು, ನ.14: ಮಕ್ಕಳ ದಿನಾಚರಣೆಯ (Childrens Day) ಪ್ರಯುಕ್ತ ಮಂಗಳವಾರ (ನ. 14) ಚಾಮರಾಜೇಂದ್ರ ಮೃಗಾಲಯ (Mysuru Zoo) ಮತ್ತು ಕಾರಂಜಿ ಕೆರೆಯ ನೇಚರ್ ಪಾರ್ಕ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. 12 ವರ್ಷದೊಳಗಿನ ಮಕ್ಕಳಿಗೆ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೃಗಾಲಯವನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ನೀಡಲಾಗಿದೆ.

ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ ಮೃಗಾಲಯ ಮತ್ತು ವಸ್ತು ಪ್ರದರ್ಶನಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗಿದೆ. ಪ್ರತಿ ವರ್ಷವೂ ಮಕ್ಕಳ ದಿನಾಚರಣೆ ದಿನ ಉಚಿತ ಪ್ರವೇಶ ನೀಡಲಾಗುತ್ತೆ. ಅದರಂತೆ ಇಂದು ಕೂಡ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇಂದು ದೀಪಾವಳಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ. ಇನ್ನು ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತೆ. ಈ ದಿನ ಶಾಲೆ, ಕಾಲೇಜುಗಳಲ್ಲಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಿ, ಸಮಾರಂಭಗಳನ್ನು ಮಾಡಿ ಸಿಹಿ ಹಂಚಲಾಗುತ್ತೆ. ಬಹುಮಾನಗಳನ್ನು ವಿತರಿಸಲಾಗುತ್ತೆ. ಆದರೆ ಇಂದು ದೀಪಾವಳಿ ರಜೆ ಇರುವ ಕಾರಣ ಕೆಲವು ಶಾಲೆಗಳು ನಾಳೆ ಈ ದಿನವನ್ನು ಆಚರಿಸಲು ಸಿದ್ಧತೆ ಮಾಡಿಕೊಂಡಿವೆ.

ಇದನ್ನೂ ಓದಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ: ಕಸ ಸಂಗ್ರಹಿಸಲು ಬಿಬಿಎಂಪಿಗೆ ಪ್ರತಿ ತಿಂಗಳು ಹಣ ಪಾವತಿಸಬೇಕು, ಎಷ್ಟು ಗೊತ್ತಾ?

ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಮಾಡುವ ಮೂಲಕ ಅವರ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಮೂಲ ಉದ್ದೇಶವಾಗಿದೆ. ಈ ಹಿಂದೆ ನವೆಂಬರ್ 20 ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿತ್ತು. ಕಾರಣ ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಈ ದಿನಾಂಕವನ್ನು ಘೋಷಣೆ ಮಾಡಿತ್ತು. ಆದರೆ ಪಂಡಿತ್ ಜವಾಹರಲಾಲ್ ನೆಹರು ಅವರ ಮರಣದ ನಂತರ ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನವೆಂಬರ್ 14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ.

ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾದ ಜವಾಹರಲಾಲ್ ನೆಹರು ರವರಿಗೆ ಮಕ್ಕಳೆಂದರೆ ಪ್ರೀತಿ. ಮಕ್ಕಳು ಪ್ರೀತಿಯಿಂದ ಚಾಚಾ ನೆಹರು ಎಂದು ಕರೆಯುತ್ತಿದ್ದರು. ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಧ್ಯೇಯವಾಗಿತ್ತು. ಹೀಗಾಗಿ ಅವರ ಸವಿನೆನಪಿಗಾಗಿ ಅವರ ಜನ್ಮ ದಿನಾಂಕದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:25 am, Tue, 14 November 23

ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ