ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವು ಆರೋಪ! ಮೈಸೂರಿನಲ್ಲಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ
ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸೇಂಟ್ ಮೇರಿಸ್ ಆಸ್ಪತ್ರೆಗೆ ನುಗ್ಗಿ ಮೃತನ ಸ್ನೇಹಿತರು ಕಲ್ಲು ತೂರಾಟ ಮಾಡಿದ್ದಾರೆ.
ಮೈಸೂರು: ವೈದ್ಯರ (Doctor) ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮೃತನ ಸ್ನೇಹಿತರು (Friends) ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಯುವಕ ಇಮಾನ್ ವಿಲ್ ಕರುಳು ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ವೇಳೆ ಬಿಪಿ ಲೋ ಆಗಿ ಇಮಾನ್ಗೆ ಹೃದಯಾಘಾತವಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುವಾಗ ಯುವಕ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸೇಂಟ್ ಮೇರಿಸ್ ಆಸ್ಪತ್ರೆಗೆ ನುಗ್ಗಿ ಮೃತನ ಸ್ನೇಹಿತರು ಕಲ್ಲು ತೂರಾಟ ಮಾಡಿದ್ದಾರೆ. ಯುವಕರು ದಾಂಧಲೆ ನಡೆಸುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಸಿದ್ದರಾಜು ಹಾಗೂ ಸುಮಿತ್ರಾ ಎಂಬುವರ ಶವ ಪತ್ತೆಯಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಹೊಸ ಅಂತಾರಾಷ್ಟ್ರೀಯ ಮಾರ್ಗಗಳು ಆರಂಭ
ಮೀನುಗಳು ಮಾರಣಹೋಮ: ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಬಿ.ಆರ್. ಗುಂಡ ಗ್ರಾಮದಲ್ಲಿ ಮೀನುಗಳು ಸಾವನ್ನಪ್ಪಿವೆ. ದುರ್ಗಪ್ಪ ಎಂಬುವವರು ಗ್ರಾಮದ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಿದ್ದರು. ಇಂದು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ಮೀನುಗಳನ್ನು ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸತ್ತಿರುವ ರಾಶಿ ರಾಶಿ ಮೀನುಗಳು ಕೆರೆ ದಡದಲ್ಲಿ ಬಿದ್ದಿವೆ.
ರೈಲಿಗೆ ಸಿಲುಕಿ ವ್ಯಕ್ತಿ ಸಾವು: ತುಮಕೂರು: ರೈಲಿಗೆ ಸಿಲುಕಿ ಸುಮಾರು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕ್ಯಾತ್ಸಂದ್ರ ರೈಲ್ವೆ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ.
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:33 am, Wed, 22 June 22