ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ: ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ

ಸದಾ ಪಾಕಿಸ್ತಾನದ ಪರ ಮಾತನಾಡುವ ನಟ ಚೇತನ್ ನಮ್ಮ ದೇಶದಲ್ಲಿ ಇರಲು ಅರ್ಹನಲ್ಲ ಆತನನ್ನು ಗಡಿಪಾರು ಮಾಡಬೇಕೆಂದು ‘ಪೇ ಚೇತನ್' ಹೆಸರಿನಲ್ಲಿ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ ಮಾಡುತ್ತಿದ್ದಾರೆ.

ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ: ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ
ಮೈಸೂರು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 21, 2022 | 11:19 AM

ಮೈಸೂರು: ಕೆಲ ದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್​ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್​ ಹಾಕಿದ್ದರು. ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ‌ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ಚೇತನ್ ನಮ್ಮ ದೇಶದಲ್ಲಿ ಇರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎನ್ನುವ ಅಭಿಯಾನವನ್ನು ಶುರು ಮಾಡಿದ್ದಾರೆ.

ನಟ ಚೇತನ್ ಅಹಿಂಸಾ ತಮ್ಮ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಇದೀಗ 5 ದಿನಗಳ ಹಿಂದೆ(ನ.17) ಬೆಂಗಳೂರಿನ ನ್ಯೂ ಹೊರೈಜನ್​ ಕಾಲೇಜಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದರು ಅವರನ್ನು ಬೆಂಬಲಿಸುವ ಮೂಲಕ ಮತ್ತೆ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ.

ಚೇತನ್​ ಅಹಿಂಸಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಕಾಲೇಜ್​ ಫೆಸ್ಟ್​ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ ಕೂಗಿದ್ದಾರೆ. ಇದನ್ನು ಅವರು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕೆ ಆರ್ಯನ್​, ರಿಯಾ ಮತ್ತು ದಿನಕರ್​ ಅವರನ್ನು ಥಳಿಸಿ ಬೆದರಸಿ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಮಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರಂತೆ ಅವರು ನಮ್ಮ ಶತ್ರುಗಳಲ್ಲ. ವಾಕ್​ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು’ ಎಂದು ಬರೆದುಕೊಳ್ಳುವ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ:Kantara: ‘ನೋ ಕಮೆಂಟ್ಸ್​ ಅಂತ ರಿಷಬ್​ ಎಸ್ಕೇಪ್​ ಆಗಬಾರದು’; ಭೂತಕೋಲ ಚರ್ಚೆ ಬಗ್ಗೆ ಚೇತನ್​ ಪ್ರತಿಕ್ರಿಯೆ

ಇನ್ನು ವಿದ್ಯಾರ್ಥಿಗಳ ವಿರುದ್ಧ ಮಾರತ್​ಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ತನಿಖೆ ನಡೆಸಿದ್ದಾರೆ.

ಇನ್ನಷ್ಟು ರಾಜ್ಯ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್