ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು

| Updated By: ganapathi bhat

Updated on: Aug 25, 2021 | 3:53 PM

Mysuru Gang Rape Case: ನಾಲ್ಕು ಅಥವಾ ಐದು ಜನರಿಂದ ರೇಪ್ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಜೊತೆಗೆ ಬಂದಿದ್ದ ವಿದ್ಯಾರ್ಥಿನಿ ಸ್ನೇಹಿತನಿಗೆ ಹಲ್ಲೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದ್ದು ಇದೀಗ ವಿದ್ಯಾರ್ಥಿನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು
ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳನ್ನ ಬಂಧಿಸಿದ ಬಾಣಸವಾಡಿ ಪೊಲೀಸರು
Follow us on

ಮೈಸೂರು: ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. 4 ರಿಂದ 5 ಜನರಿಂದ ಗ್ಯಾಂಗ್​ರೇಪ್​ ಎಂದು ಉಲ್ಲೇಖಿಸಿ ಎಫ್​ಐಆರ್ ದಾಖಲಾಗಿದೆ. ಇದೀಗ ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಬಲೆ ಬೀಸಿದ್ದಾರೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ​ ಪ್ರಕರಣದ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಂತ್ರಸ್ತೆ ಸ್ನೇಹಿತನಿಂದ ಮಾಹಿತಿ ಪಡೆಯುತ್ತಿದ್ದಾರೆ. ಅತ್ಯಾಚಾರ ಎಸಗಿದವರು ಪರಿಚಯಸ್ಥರ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣವು ಲಲಿತಾದ್ರಿಪುರದ ಹೊರವಲಯದಲ್ಲಿ ನಡೆದಿತ್ತು ಎಂದು ತಿಳಿದುಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಲಲಿತಾದ್ರಿಪುರದ ಹೊರವಲಯದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದೆ. ನಾಲ್ಕು ಅಥವಾ ಐದು ಜನರಿಂದ ರೇಪ್ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಜೊತೆಗೆ ಬಂದಿದ್ದ ವಿದ್ಯಾರ್ಥಿನಿ ಸ್ನೇಹಿತನಿಗೆ ಹಲ್ಲೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದ್ದು ಇದೀಗ ವಿದ್ಯಾರ್ಥಿನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸದ್ಯ ಸ್ಥಳಕ್ಕೆ ಭೇಟಿ‌ ನೀಡಿ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದೆ. ನಿರ್ಜನ‌ ಪ್ರದೇಶವಾಗಿರುವ ಘಟನಾ ಸ್ಥಳದಲ್ಲಿ ಪಾನಮತ್ತರಾಗಿ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿನಿ ಯುವಕನೊಂದಿದೆ ಪ್ರದೇಶಕ್ಕೆ ಬಂದಿದ್ದರು. ನಿನ್ನೆ (ಆಗಸ್ಟ್ 24) ರಂದು 7 ಗಂಟೆ ಸುಮಾರಿಗೆ ಅತ್ಯಾಚಾರ ನಡೆದಿರಬಹುದು. ಈ ಸಮಯದಲ್ಲಿ ಯುವಕನಿಗೆ ಹಲ್ಲೆಮಾಡಿ, ಯುವತಿಗೆ ರೇಪ್​ ಮಾಡಿರುವ ಆರೋಪ ಕೇಳಿಬಂದಿದೆ. 5 ರಿಂದ 6 ಜನರಿಂದ ಕೃತ್ಯ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಸಂಜೆ ಸಭೆ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣ ಹಾಗೂ ದರೋಡೆಕೋರರಿಂದ ವ್ಯಕ್ತಿಯ ಮೇಲೆ ಫೈರಿಂಗ್ ಹಿನ್ನೆಲೆ, ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಬುಧವಾರ (ಆಗಸ್ಟ್ 25) ಸಂಜೆ ಸಭೆ ನಡೆಯಲಿದೆ. ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಚಿವರು ಎರಡು ಘಟನೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಇದನ್ನೂ ಓದಿ: ಮೈಸೂರು ಚಿನ್ನದಂಗಡಿ ದರೋಡೆ, ಶೂಟೌಟ್ ಆರೋಪಿಗಳ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ

ಅತ್ಯಾಚಾರ ಆರೋಪಿ ರಾಮ್​ ರಹೀಮ್​ ಸಿಂಗ್​ ಭೇಟಿಗೆ, ಅಪರಿಚಿತರಿಗೆ ಅವಕಾಶ ಮಾಡಿಕೊಟ್ಟಿದ್ದ ಡಿಎಸ್​ಪಿ ಅಮಾನತು

Published On - 3:46 pm, Wed, 25 August 21