AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ತಾಲೂಕಿನಲ್ಲಿ ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಘಟನೆ ನಂತರ ಹೆದರಿದ್ದ ಬಾಧಿತ ಮಹಿಳೆ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದರು. ಬಳಿಕ, 2 ದಿನಗಳ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಸಂತ್ರಸ್ತೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ನಂಜನಗೂಡು ತಾಲೂಕಿನಲ್ಲಿ ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 15, 2022 | 7:24 PM

Share

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ವರದಿಯಾಗಿದೆ. ಏಪ್ರಿಲ್ 11ರಂದು ಮಹಿಳೆಯನ್ನು ಬಲವಂತವಾಗಿ ಪೊದೆಯೊಳಗೆ ಎಳೆದೊಯ್ದು ಮೂವರು ಗ್ಯಾಂಗ್​ರೇಪ್ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಂತರ ಹೆದರಿದ್ದ ಬಾಧಿತ ಮಹಿಳೆ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದರು. ಬಳಿಕ, 2 ದಿನಗಳ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಸಂತ್ರಸ್ತೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಕವಲಂದೆ ಠಾಣೆ ಪೊಲೀಸರು ಮೂವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಹಾಡಹಗಲೇ ಸೀರೆ ಅಂಗಡಿಯಲ್ಲಿ 10 ಲಕ್ಷ ನಗದು, ಬೆಳ್ಳಿ ಆಭರಣ ಕಳ್ಳತನ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳ್ಳರು ತಮ್ಮ ಕರಾಮತ್ತು ತೋರಿದ್ದಾರೆ. ಹಾಡಹಗಲೇ ಸೀರೆ ಅಂಗಡಿಯಲ್ಲಿ ಲಾಕರ್ ನಲ್ಲಿದ್ದ 10 ಲಕ್ಷ ನಗದು, ಬೆಳ್ಳಿ ಆಭರಣ ಕಳ್ಳತನ ಮಾಡಿದ್ದಾರೆ. ಪ್ರತಾಪ್ ರಾಮ್ ಎಂಬುವವರ ಮಾಲೀಕತ್ವದ ಹನುಮಾನ್ ಸಿಲ್ಕ್ಸ್ ಶಾಪ್​ನನಲ್ಲಿ ಈ ಕಳವು ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಶಾಂತ್ ಕಾಂಪೆಕ್ಸ್ ನಲ್ಲಿ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ ಕೆಲಸಗಾರ ಅಂಗಡಿಗೆ ಬೀಗ ಹಾಕಿ, ಊಟಕ್ಕೆ ತೆರಳಿದ್ದ. ಆ ವೇಳೆ ರಾಡ್ ನಿಂದ ಶಟರ್ ಮುರಿದು ಕಳ್ಳತನ ಮಾಡಲಾಗಿದೆ. ಲಾಕರ್ ನಲ್ಲಿದ್ದ 10 ಲಕ್ಷ ನಗದು ಮತ್ತು ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಪರಿಚಯಸ್ಥರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮುಗಿಸಿ ಬರುವಾಗ ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಸ್ಥಳದಲ್ಲೇ ದುರ್ಮರಣ: ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಅಣ್ಣಿಗೇರಿ ಗ್ರಾಮದ ಪ್ರದೀಪ್(9) ಮತ್ತು ವಿನಾಯಕ್(19) ಮೃತಪಟ್ಟವರು. ಮದುವೆ ಸಮಾರಂಭ ಮುಗಿಸಿ ವಾಪಸ್ ಊರಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಿಗೆ ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅಂತರಗಂಗೆ ರಸ್ತೆಯಲ್ಲಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿ: ಕೋಲಾರ: ನಗರದ ಅಂತರಗಂಗೆ ರಸ್ತೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ಬೈಕ್‌ನಲ್ಲಿ ಬಂದು ಮಹಿಳೆಯ ಚಿನ್ನದ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಪರಿಚಿತ ಬೈಕ್ ಸವಾರರು ಉಮಾದೇವಿ ಎಂಬುವರ 50 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪೇರಿ ಕಿತ್ತಿದ್ದಾರೆ. ಕೋಲಾರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Published On - 7:20 pm, Fri, 15 April 22

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್