ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಮೈಸೂರು(Mysore) ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ ಸೇರಿ ವಿದ್ಯಾರ್ಥಿಗಳಾದ ಧನುಷ್ ಪೃಥ್ವಿ,ಗೌತಮ್​ಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್​ ಸ್ಪೋಟ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 5:33 PM

ಮೈಸೂರು, ನ.02: ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ(Cylinder Explosive) ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಮೈಸೂರು(Mysore) ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ(Government School) ನಡೆದಿದೆ. ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ ಸೇರಿ ವಿದ್ಯಾರ್ಥಿಗಳಾದ ಧನುಷ್ ಪೃಥ್ವಿ,ಗೌತಮ್​ಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿರುವ ಟಿ ನರಸೀಪುರ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಇನ್ನು ಕಳೆದ ತಿಂಗಳು ಅ. 17 ರಂದು ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್​ ಹೊತ್ತಿ ಉರಿದ ಘಟನೆ ನಡೆದಿತ್ತು. ವರಾಹಿ ನದಿ ನೀರು ಯೋಜನೆಯ ಪೈಪ್​ಗಳನ್ನು ಈ ಗೋಡೌನ್​ನಲ್ಲಿ ಸಂಗ್ರಹಿಸಿಟ್ಟಿದ್ದರು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು, ಬೆಂಕಿ ನಂದಿಸಿದ್ದರು. ಅದೃಷ್ಟವಶಾತ್​ ಯಾವುದೇ ಸಾವುಗಳು ಸಂಭವಿಸಿರಲಿಲ್ಲ.

ಇದನ್ನೂ ಓದಿ:ಉಡುಪಿ: ಸಿಲಿಂಡರ್ ಸ್ಫೋಟ, ಧಗಧಗಿಸಿದ ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್

ಇತ್ತೀಚೆಗೆ ತೆಲಂಗಾಣದಲ್ಲಿ ಸಿಲಿಂಡರ್ ಸ್ಪೋಟಗೊಂಡು  ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಕಾರ್ಮಿಕ ಅಭಿ ಎನ್ನುವವರಿಗೆ ಚಿಕಿತ್ಸೆ ಕೊಡಿಸದೆ ಬೇಕರಿ ಮಾಲೀಕ ಅಮಾನವೀಯತೆ ತೋರಿದ್ದ ಘಟನೆ ನಡೆದಿತ್ತು. ಹಾಲ್ತೋರೆ ಗ್ರಾಮದ ನಿವಾಸಿಯಾದ ಪ್ರತಾಪ್‌ಗೌಡ, ಮಾಲೀಕತ್ವದ ಬೇಕರಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದ. ಇನ್ನು ಜೂನ್​​ 2ರಂದು ಬೇಕರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಭಿಗೆ ಗಂಭೀರವಾಗಿ ಗಾಯಗೊಂಡಿದ್ದು, 5 ಸಾವಿರ ಹಣ ನೀಡಿ, ಊರಿಗೆ ಕಳಿಸಿದ್ದ. ಬಳಿಕ ಚಿಕಿತ್ಸಾ ವೆಚ್ಚ, ಪರಿಹಾರ ಕೊಡಿಸುವಂತೆ ಅಭಿ ಕಣ್ಣೀರು ಹಾಕಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Thu, 2 November 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us