ಮೈಸೂರು: ವಾಟರ್ ಫಿಲ್ಟರ್ ಹೌಸ್ನಲ್ಲಿ ಅನಿಲ ಸೋರಿಕೆ; ವಿಷ ಅನಿಲ ಸೇವಿಸಿ ಐವರು ಅಸ್ವಸ್ಥ
Mysuru News: ಪಟ್ಟಣದ ವಾಟರ್ ಫಿಲ್ಟರ್ ಹೌಸ್ ಮುಂದಿನ ರಸ್ತೆ ಬಂದ್ ಮಾಡಲಾಗಿದೆ. ಅನಿಲ ಸೋರಿಕೆ ನಿಲ್ಲಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಮೈಸೂರು: ಇಲ್ಲಿನ ಟೀ.ನರಸೀಪುರದಲ್ಲಿ ವಾಟರ್ ಫಿಲ್ಟರ್ ಹೌಸ್ನಲ್ಲಿ ಅನಿಲ ಸೋರಿಕೆ ಉಂಟಾಗಿದೆ. ವಿಷ ಅನಿಲ ಸೇವಿಸಿ ಐವರು ಅಗ್ನಿಶಾಮಕ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ಪಟ್ಟಣದ ವಾಟರ್ ಫಿಲ್ಟರ್ ಹೌಸ್ ಮುಂದಿನ ರಸ್ತೆ ಬಂದ್ ಮಾಡಲಾಗಿದೆ. ಅನಿಲ ಸೋರಿಕೆ ನಿಲ್ಲಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಇದೀಗ ವಾಟರ್ ಫಿಲ್ಟರ್ ಹೌಸ್ ಮುಂದಿನ ರಸ್ತೆಯಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ. ನೆರೆಹೊರೆಯ ಮನೆಯವರು ಹೊರಗೆ ಬರದಂತೆ ಸೂಚನೆ ನೀಡಲಾಗಿದೆ. ಅನಿಲ ಸೋರಿಕೆ ನಿಲ್ಲಿಸಲು ಅಗ್ನಿಶಾಮಕ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಅಸ್ವಸ್ಥರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೀರು ಶುದ್ಧೀಕರಣ ಘಟಕದ ಮುಂದಿನ ರಸ್ತೆಯಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ. ಆಸ್ಪತ್ರೆಗೆ ಟಿ.ನರಸೀಪುರ ಕ್ಷೇತ್ರದ ಶಾಸಕ ಅಶ್ವಿನ್ ಕುಮಾರ್, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್ ಭೇಟಿ ನೀಡಿದ್ದಾರೆ. ಅಸ್ವಸ್ಥ ಸಿಬ್ಬಂದಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಚಿಕ್ಕಬಳ್ಳಾಪುರ: ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ ಆಗಿದೆ. ಭಾರಿ ಸ್ಫೋಟದ ಸದ್ದು ಹಾಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಭಯದಿಂದ ಮನೆಯಿಂದ ಹೊರಗೆ ಬಂದಿದ್ದಾರೆ. ನಂದನವನ, ಅಪ್ಸನಹಳ್ಳಿ, ಗೋನೇನಹಳ್ಳಿ ಸುತ್ತಮುತ್ತ ಕಂಪನ ಅನುಭವ ಆಗಿದೆ. ಗ್ರಾಮಕ್ಕೆ ಕೆಂಚಾರ್ಲಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಗ್ರಾಮಸ್ಥರಿಂದ ಮಾಹಿತಿ ಪಡೆದಿದ್ದಾರೆ.
ಮಿಟ್ಟಹಳ್ಳಿ ಸುತ್ತಮುತ್ತ ಯಾವುದೇ ರೀತಿ ಗಣಿಗಾರಿಕೆ ಇಲ್ಲ. ಗ್ರಾಮದ ಸುತ್ತಮುತ್ತ ಸ್ಫೋಟ ನಡೆದಿರುವ ಸಾಧ್ಯತೆಯಿಲ್ಲ. ಭೌಗೋಳಿಕವಾಗಿ ಮಿಟ್ಟಹಳ್ಳಿ ಸುತ್ತಮುತ್ತ ಸುರಕ್ಷಿತ ವಲಯ. ಹೀಗಾಗಿ ಅಧಿಕಾರಿಗಳಿಗೆ ಪರಿಶೀಲಿಸಿ ಮಾಹಿತಿ ನೀಡಲು ಸೂಚಿಸಿದೆ ಎಂದು ಮಿಟ್ಟಹಳ್ಳಿ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ ಹಿನ್ನೆಲೆ ಟಿವಿ9ಗೆ ಜಿಲ್ಲಾ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ: ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ಅವಘಡ ಉಂಟಾಗಿತ್ತು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಘಟನೆ ನವೆಂಬರ್ 7 ರಂದು ನಡೆದಿತ್ತು. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹೊತ್ತಿದ್ದ ತಕ್ಷಣ ಇಬ್ಬರು ಬಾಣಂತಿಯರನ್ನು ಜಿಲ್ಲಾಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಅವರನ್ನು ಜಿಲ್ಲಾ ಆಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿತ್ತು. ಈ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಅಸ್ವಸ್ಥರಾಗಿದ್ದರು.
ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಅವಘಡ ನಡೆದಿದೆ. ಕೂಡಲೇ ಐಸಿಯುನಲ್ಲಿದ್ದ ಬಾಣಂತಿಯರ ಸ್ಥಳಾಂತರ ಮಾಡಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಯಾರಿಗೂ ಭಯ ಬೇಡ. ಐಸಿಯು ಬಿಟ್ಟು ಹೆರಿಗೆ ವಾರ್ಡ್‌ನಲ್ಲಿ ಸಮಸ್ಯೆ ಆಗಿಲ್ಲ. ಎಸಿ ಮಿಷನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರನ್ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: ಶಿವಮೊಗ್ಗ: ಕೆರೆಯಲ್ಲಿರುವ ಪಕ್ಷಿ ರಕ್ಷಿಸಲು ಹೋಗಿ ಯುವಕ ಸಾವು
ಇದನ್ನೂ ಓದಿ: ಮೈಸೂರು: ಮಳೆ ಹಾನಿಗೆ ಪರಿಹಾರವಾಗಿ ನಗರ ಪಾಲಿಕೆಯ ಪ್ರತಿ ವಾರ್ಡ್‌ಗೆ ತಲಾ ₹ 8 ಲಕ್ಷ ಅನುದಾನ; ಎಸ್.ಟಿ ಸೋಮಶೇಖರ್
Published On - 8:17 pm, Tue, 9 November 21