ಮೈಸೂರಿನ ಶಿಲ್ಪಿ ಅರುಣ್ ಕೆತ್ತನೆಯ ನೇತಾಜಿ ಪ್ರತಿಮೆ ಕಂಡು ಅತೀವ ಸಂತಸವಾಯ್ತು -ಪ್ರಧಾನಿ ನರೇಂದ್ರ ಮೋದಿ ಟ್ವೀಟ್​

| Updated By: ಸಾಧು ಶ್ರೀನಾಥ್​

Updated on: Apr 05, 2022 | 7:29 PM

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರಧಾನಿ ಮೋದಿಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಕಾಣಿಕೆ ನೀಡಿದ್ದಾರೆ. ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಭೇಟಿಯಾಗಿ ಸಂತಸವಾಯಿತು ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಕೆತ್ತನೆಯ ನೇತಾಜಿ ಪ್ರತಿಮೆ ಕಂಡು ಅತೀವ ಸಂತಸವಾಯ್ತು -ಪ್ರಧಾನಿ ನರೇಂದ್ರ ಮೋದಿ ಟ್ವೀಟ್​
ಮೈಸೂರಿನ ಶಿಲ್ಪಿ ಅರುಣ್ ಕೆತ್ತನೆಯ ನೇತಾಜಿ ಪ್ರತಿಮೆ ಕಂಡು ಅತೀವ ಸಂತಸವಾಯ್ತು -ಪ್ರಧಾನಿ ನರೇಂದ್ರ ಮೋದಿ ಟ್ವೀಟ್​
Follow us on

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರಧಾನಿ ಮೋದಿಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಕಾಣಿಕೆ ನೀಡಿದ್ದಾರೆ. ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಭೇಟಿಯಾಗಿ ಸಂತಸವಾಯಿತು ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ. ಅರುಣ್ ಯೋಗಿರಾಜ್ ಇತ್ತೀಚೆಗೆ ಕೇದಾರನಾಥದಲ್ಲಿ ಪ್ರತಿಷ್ಠಾಪನೆಗೊಂಡ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತನೆ ಮಾಡಿದ್ದಾರೆ ಎಂಬುದು ಗಮನಾರ್ಹ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದರು. ಈ ವೇಳೆ ತಾವು ಕೆತ್ತಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 2 ಅಡಿ ಎತ್ತರದ ಕಲ್ಲಿನ ಪ್ರತಿಮೆಯನ್ನು ಪ್ರಧಾನಿ ಮೋದಿಗೆ ಕಾಣಿಕೆಯಾಗಿ ನೀಡಿದ್ದರು.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಭೇಟಿಯಾಗಿ ಸಂತಸವಾಯಿತು ಎಂದು ಭೇಟಿ ಬಳಿಕ ಪ್ರಧಾನಿ ಮೋದಿ ಪೋಟೋ ಸಮೇತ ಟ್ವೀಟ್ ಮಾಡಿದ್ದಾರೆ. ಅಸಾಧಾರಣವಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ನೀಡಿದ್ದಕ್ಕಾಗಿ ಅರುಣ್ ಗೆ ಚಿರಋಣಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಭೇಟಿಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು ಸರ್. ನಿಮ್ಮನ್ನು ಭೇಟಿಯಾಗಿ ಖುಷಿಯಾಯಿತು ಎಂದು ಭೇಟಿಯ ಬಳಿಕ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಭೇಟಿಯಾಗಲು ಅವಕಾಶ ಕಲ್ಪಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೂ ಶಿಲ್ಪಿ ಅರುಣ್ ಯೋಗಿರಾಜ್ ಧನ್ಯವಾದ ಅರ್ಪಿಸಿದ್ದಾರೆ. ಪ್ರಧಾನಿ ಮೋದಿಗೆ ನೇತಾಜಿ ಸುಭಾಷ್ ಚಂದ್ರಬೋಸ್ ಪ್ರತಿಮೆ ನೀಡುವ ಮುನ್ನ ಅರುಣ್ ಮತ್ತು ತಾವು ನೇತಾಜಿ ಪ್ರತಿಮೆಯ ಜೊತೆಗೆ ಇರುವ ಪೋಟೋವನ್ನು ಸಂಸದ ಮೈಸೂರು ಸಂಸದ ಪ್ರತಾಪ್ ಸಿಂಹ ಕೂಡ ಟ್ವೀಟ್ ಮಾಡಿದ್ದಾರೆ.

ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್, ಉತ್ತರಾಖಂಡ್‌ನ ಕೇದಾರನಾಥ್ ನಲ್ಲಿ ಪ್ರತಿಷ್ಠಾಪನೆ ಮಾಡಿರುವ ಶಂಕರಾಚಾರ್ಯರ ದೊಡ್ಡ ಪ್ರತಿಮೆಯನ್ನು ಕೆತ್ತಿದ್ದಾರೆ. ಕೆಲ ತಿಂಗಳ ಹಿಂದೆ ಶಂಕರಾಚಾರ್ಯರ ಪ್ರತಿಮೆಯನ್ನು ಕೇದಾರನಾಥ್ ದಲ್ಲಿ ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಪ್ರಧಾನಿ ಕಚೇರಿಯ ಸೂಚನೆ ಮೇರೆಗೆ ದೊಡ್ಡ ಗಾತ್ರದ ಶಂಕರಾಚಾರ್ಯರ ಪ್ರತಿಮೆಯನ್ನ ಅರುಣ್ ಯೋಗಿರಾಜ್ ಕೆತ್ತಿದ್ದರು. ತಮ್ಮ ತಂದೆಯಿಂದ ಕಲ್ಲುನ್ನು ಕೆತ್ತಿ ಉತ್ತಮ ಕಲಾಕೃತಿ ಆಗಿಸುವ ಕಲೆಯನ್ನು ಅರುಣ್ ಯೋಗಿರಾಜ್ ಕಲಿತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಸಾರಾಂಶ ಹೀಗಿದೆ:
Glad to have met @yogiraj_arun today. Grateful to him for sharing this exceptional sculpture of Netaji Bose.

ಸುಭಾಷಚಂದ್ರ ಬೋಸರ ಚಿಕ್ಕ ಮೂರ್ತಿಯನ್ನು ಮೋದೀಜಿಯವರಿಗೆ ಕೊಡುವ ಮುನ್ನ ನಾನು ಮತ್ತು ಅರುಣ್! ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವೀಟ್:

Published On - 4:40 pm, Tue, 5 April 22