AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundeshwari Temple: ತಾಯಿ ಚಾಮುಂಡೇಶ್ವರಿ ವರ್ಧಂತಿ, ಮೈಸೂರಿನಲ್ಲಿ ಮನೆ ಮಾಡಿದ ಸಂಭ್ರಮ

ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ.

Chamundeshwari Temple: ತಾಯಿ ಚಾಮುಂಡೇಶ್ವರಿ ವರ್ಧಂತಿ, ಮೈಸೂರಿನಲ್ಲಿ ಮನೆ ಮಾಡಿದ ಸಂಭ್ರಮ
ತಾಯಿ ಚಾಮುಂಡೇಶ್ವರಿ
ರಾಮ್​, ಮೈಸೂರು
| Updated By: ಆಯೇಷಾ ಬಾನು|

Updated on: Jul 10, 2023 | 7:40 AM

Share

ಮೈಸೂರು: ಇಂದು (ಜುಲೈ 10) ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ(Mysore Chamundeshwari Vardhanti) ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಖುದ್ದು ರಾಜವಂಶಸ್ಥರೇ(Mysore Royal Family), ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗ್ತಾ ಇರೋದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.

ಈಗಾಗಲೇ ಆಷಾಢಮಾಸದ ಸಂಭ್ರಮ ಸಡಗರ ಚಾಮುಂಡಿಬೆಟ್ಟದಲ್ಲಿ ಜೋರಾಗಿದೆ. ಇದೀಗ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Sara Annaiah: ಮೈಸೂರು ಚಾಮುಂಡಿ ದೇವಿಯ ದರ್ಶನ ಪಡೆದ ಕನ್ನಡತಿ

ಬೆಳಗ್ಗೆ 8ಗಂಟೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ

ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತಮಹಲ್ ಮೈದಾನದಿಂದ 9 ಗಂಟೆಯಿಂದ ಬಸ್ ಸೇವೆ ಇರಲಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್