ಮೈಸೂರು, ಡಿಸೆಂಬರ್ 15: ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಶನಿವಾರ (ಡಿ.14) ರಾತ್ರಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಲಾಯದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.
ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗ್ಗತ್ತಿಸಿದ್ದರು.
ಇದನ್ನೂ ಓದಿ: ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಈ ಹಿನ್ನೆಲೆಯಲ್ಲಿ, ಸ್ನೇಹಮಯಿ ಕೃಷ್ಣ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪ ಅವರು ದೂರು ದಾಖಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದಗಧ ನ್ಯಾಯಾಲಯದ ಮೆಟ್ಟಿಲೇರಿ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುವಂತೆ ಮಾಡುವ ಮೂಲಕ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸದ್ಯ ಸುದ್ದಿಯಲ್ಲಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ಮೈಸೂರಿನ ಬಂಡಿಪಾಳ್ಯ ನಿವಾಸಿಯಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಮಾಹಿರಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯದುವಂಶ ವಿರೋಧ ವ್ಯಕ್ತಪಡಿಸಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ ಎಂದು ರಾಜ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:54 am, Sun, 15 December 24