AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಮೈಸೂರಿನ ಎಂ.ಕೆ. ಯಶವಂತ್ ಕುಮಾರ್ ರವರಿಂದ ಈ ಸಂಬಂಧ ದೂರು ದಾಖಲಾಗಿದೆ. ಅವರ ತಾಯಿ ತಾಯಿ ಗೌರಮ್ಮ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದರು.

TV9 Web
| Edited By: ಸಾಧು ಶ್ರೀನಾಥ್​|

Updated on: Jul 15, 2021 | 8:04 AM

Share

ಮೈಸೂರು: ಕೊರೊನಾದಿಂದ ಆಸ್ಪತ್ರೆಗೆ ಸೇರಿದಾಗ ಸೋಂಕಿತರ ಬೆಲೆಬಾಳುವ ವಸ್ತುಗಳನ್ನು ಎಗರಿಸುವ ಪ್ರಕರಣಗಳು ಇನ್ನೂ ನಿಂತಿಲ್ಲ.  ಕಳೆದ ಏಪ್ರಿಲ್​-ಮೇ ತಿಂಗಳುಗಳಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರಿದ್ದಾಗ ಈ ಕಳ್ಳರ ಕರಾತ್ತು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬಂದಿತ್ತು. ಇದೀಗ ಮೈಸೂರಿನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿರುದ್ದವೂ ಇಂತಹ ಪ್ರಕರಣವೊದು ದಾಖಲಾಗಿದೆ.

ಮೈಸೂರಿನ ಎಂ.ಕೆ. ಯಶವಂತ್ ಕುಮಾರ್ ರವರಿಂದ ಈ ಸಂಬಂಧ ದೂರು ದಾಖಲಾಗಿದೆ. ಅವರ ತಾಯಿ ತಾಯಿ ಗೌರಮ್ಮ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದರು.

ಗೌರಮ್ಮ ಅವರು ಆಸ್ಪತ್ರೆ ಸೇರಿದಾಗ 4 ಚಿನ್ನದ ಬಳೆ, ಒಂದು ಉಂಗುರ, 2 ಓಲೆ ಮತ್ತು ಕೊರಳಿನಲ್ಲಿ ಒಂದು ಚಿನ್ನದ ಸರ ಧರಿಸಿದ್ದರು. ಬಿಲ್ ಪಾವತಿಸಿದ ನಂತರ ನಿಮ್ಮ ತಾಯಿಯವರ ಒಡವೆಗಳನ್ನು ನೀಡುತ್ತೇವೆಂದು ಆಸ್ಪತ್ರೆಯ ಸಿಬ್ಬಂದಿ ಯಶವಂತ್ ಕುಮಾರ್​ಗೆ ತಿಳಿಸಿದ್ದರು. ನಂತರ ಎಲ್ಲಾ ಒಡವೆ ನೀಡಿದ ಆಸ್ಪತ್ರೆ ಸಿಬ್ಬಂದಿ 25 ಗ್ರಾಂ ತೂಕದ ಚಿನ್ನದ ಸರವನ್ನು ಬಿಟ್ಟು ಎಲ್ಲವನ್ನೂ ಹಿಂತಿರುಗಿಸಿದ್ದಾರೆ. ಸರದ ಬಗ್ಗೆ ಕೇಳಿದಾಗ ನಮಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ ಆಸ್ಪತ್ರೆಯ ಸಿಬ್ಬಂದಿ. ಈ ಸಂಬಂಧ ವಿದ್ಯಾರಣ್ಯಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು; ಮೊಬೈಲ್ ಕಳುವಾಗಿದೆ ಎಂದು ಪತ್ರ ಬರೆದ ಕೊಡಗು ಬಾಲಕಿಗೆ ಹೊಸ ಫೋನ್!

(Gold chain allegedly stolen from coronavirus patient in mysore by private hospital)

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!

ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ