AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಸ್ನೇಹಿತನ ಭೇಟಿಗೆ ಹೋಗಿದ್ದ ಶಿಕ್ಷಕನ ಶವ ಕೆರೆಯಲ್ಲಿ ಪತ್ತೆ, ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಲದಲ್ಲಿ ಸಿಕ್ತು

ಸ್ನೇಹಿತನ ಭೇಟಿಗೆ ಹೋಗುವುದಾಗಿ ತೆರಳಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬ ಮೃತದೇಹ ಮೈಸೂರಿನ ಮೂಕನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ. ಮತ್ತೊಂದೆಡೆ ಪತಿಯೊಬ್ಬ ಪತ್ನಿ ಮೇಲೆ ಅನುಮಾನಗೊಂಡು ಆಕೆಯನ್ನೇ ಹತ್ಯೆ ಮಾಡಿದ್ದಾನೆ. ಈ ಎರಡು ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

ಪ್ರತ್ಯೇಕ ಘಟನೆ: ಸ್ನೇಹಿತನ ಭೇಟಿಗೆ ಹೋಗಿದ್ದ ಶಿಕ್ಷಕನ ಶವ ಕೆರೆಯಲ್ಲಿ ಪತ್ತೆ, ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಲದಲ್ಲಿ ಸಿಕ್ತು
ಕೂಲಿ ಕಾರ್ಮಿಕ ಸಿಂಗ್ರಯ್ಯ, ಶಿಕ್ಷಕ ರೇವಣ್ಣ
ರಾಮ್​, ಮೈಸೂರು
| Edited By: |

Updated on: Aug 10, 2023 | 9:29 AM

Share

ಮೈಸೂರು, (ಆಗಸ್ಟ್ 10): ಮೈಸೂರು (Mysuru) ಜಿಲ್ಲೆ ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಕೆರೆಯಲ್ಲಿ(Lake)  ಶಿಕ್ಷಕರೊಬ್ಬರ(Teacher)  ಶವ ಪತ್ತೆಯಾಗಿದೆ. ಮೂಕನಹಳ್ಳಿ ಕೆರೆಯಲ್ಲಿ ರೇವಣ್ಣ 50 ಶವ ಪತ್ತೆಯಾಗಿದೆ. ರೇವಣ್ಣ ಸೋಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾಗಿದ್ದರು. ಸ್ನೇಹಿತನ ಭೇಟಿಗೆ ಹೋಗುವುದಾಗಿ ತೆರಳಿದ್ದ ರೇವಣ್ಣ, ವಾಪಸ್​ ಮನೆಗೆ ಬಂದಿರಲಿಲ್ಲ. ಕೆರೆ ಬಳಿ ಚಪ್ಪಲಿ ಮತ್ತು ಸ್ಕೂಟರ್ ಪತ್ತೆಯಾಗಿದ್ದು, ಬಳಿಕ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ನಡೆಸಿದ ವೇಳೆ ರೇವಣ್ಣ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಮಗಳನ್ನ ಕೊಟ್ಟು ಮದುವೆ ಮಾಡಲಿಲ್ಲವೆಂದು 850 ಅಡಕೆ ಗಿಡ ನಾಶ ಮಾಡಿದ ಭೂಪ

ರೇವಣ್ಣ ಅವರು ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಎನ್ನಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಈ ಬಗ್ಗೆ ನಿಖರ ಕಾರಣ ತಿಳಿದುಬಮದಿಲ್ಲ. ಈ ಬಗ್ಗೆ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೊಲದಲ್ಲಿ ಕೂಲಿ ಕಾರ್ಮಿಕನ ಶವ ಪತ್ತೆ

ಮತ್ತೊಂದೆಡೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದಲ್ಲಿ ಕಾರ್ಮಿಕ ಸಿಂಗ್ರಯ್ಯ(65) ಶವ ಪತ್ತೆಯಾಗಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಸಿಂಗ್ರಯ್ಯ ಮನೆಗೆ ಬಂದಿರಲಿಲ್ಲ. ನೂರುಲ್ಲಾ ಷರೀಫ್ ಜಮೀನಿನಲ್ಲಿ ಸಿಂಗ್ರಯ್ಯ ಶವ ಪತ್ತೆಯಾಗಿದ್ದು, ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯನ್ನೇ ಹತ್ಯೆಗೈದ ಪತಿ

ಇನ್ನು ಮಂಡ್ಯದಲ್ಲಿ ಪತಿಯೊರ್ವ ಕಟ್ಟಿಕೊಂಡ ಹೆಂಡತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ಶೀಲದ ಮೇಲೆ ಅನುಮಾನಗೊಂಡು ಆಕೆಯನ್ನು ವೇಲ್ ನಿಂದ ಕತ್ತು ಬಿಗಿದು ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಮಹದೇವಪುರ ಬಳಿಯ ನಾಲೆಗೆ ಎಸೆದಿದ್ದಾನೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಗ್ರಾಮದಲ್ಲಿ ನಡೆದಿದೆ. ಪೂಜಾ(28) ಕೊಲೆಯಾದ ದುರ್ದೈವಿ. ಶ್ರೀನಾಥ್ (32) ಪತ್ನಿಯನ್ನೇ ಕೊಲೆ ಮಾಡಿದ ಆರೋಪಿ.

ಲಾರಿ ಚಾಲಕನಾಗಿ ಕೆಲಸ ಮಾಡಿದ್ದ ಶ್ರೀನಾಥ್, ಒಂಬತ್ತು ವರ್ಷದ ಹಿಂದೆ ವಿವಾಹವಾಗಿದ್ದರು. ಆದ್ರೆ, ಇದೀಗ ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನ ಕೊಲೆ ಮಾಡಿದ್ದಾನೆ, ಈ ಬಗ್ಗೆ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್