AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನಲ್ಲಿ ದುರಂತ ಸಂಭವಿಸಿದೆ. ಕಾವೇರಿ ನದಿಯಲ್ಲಿ 70 ವರ್ಷದ ತಾತ ಮತ್ತು ಇಬ್ಬರು ಮೊಮ್ಮಕ್ಕಳು ಮುಳುಗಿ ಮೃತಪಟ್ಟಿದ್ದಾರೆ. ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಜಲಸಮಾಧಿಯಾಗಿದ್ದಾರೆ. ತಿರುಮಕೂಡಲಿನ ನಿವಾಸಿಗಳಾದ ಮೂವರ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ
ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 15, 2025 | 7:04 PM

Share

ಮೈಸೂರು, ಮಾರ್ಚ್​ 15: ಕಾವೇರಿ ನದಿಯಲ್ಲಿ ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ (death) ಆಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ. ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ (Drown)  ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ.

ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸರಣಿ ಅಪಘಾತ: ಚಿಕಿತ್ಸೆ ಫಲಿಸದೆ ಕ್ಯಾಂಟರ್​ ಚಾಲಕ ಸಾವು

ಬಾಪೂಜಿನಗರದ ಸ್ಯಾಟ​ಲೈಟ್​​ ಬಸ್ ನಿಲ್ದಾಣದ ಬಳಿ ಕ್ಯಾಂಟರ್​ ಚಾಲಕನಿಂದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡಿದ್ದ ಕ್ಯಾಂಟರ್​ ಚಾಲಕ ಜಗನ್​(44) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ
Image
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
Image
ಮ್ಯಾಚ್​​ ಗೆಲ್ಲಿಸಿದ್ದಕ್ಕೆ ಕೊಲೆ? ಯುವಕನ ಸಾವಿನ ಸುತ್ತ ಅನುಮಾನಗಳ ಹುತ್ತ!
Image
ಸಾಕ್ಷ್ಯ ನಾಶಕ್ಕೆ ಐಷರಾಮಿ ಕಾರು ಸುಟ್ಟ ಕಳ್ಳರು: ಗುಂಡಿಕ್ಕಿ ಹಿಡಿದ ಪೊಲೀಸ್
Image
ಸ್ವಾತಿ ಹತ್ಯೆ: ನಯಾಜ್​ ಕೃತ್ಯಕ್ಕೆ ಸಾಥ್ ಕೊಟ್ಟಿದ್ದ ಹಿಂದೂ ಯುವಕರ ಬಂಧನ

ಇದನ್ನೂ ಓದಿ: 4 ಎಸೆತಗಳಲ್ಲಿ 20 ರನ್ ಚಚ್ಚಿ ಮ್ಯಾಚ್​​ ಗೆಲ್ಲಿಸಿದ್ದಕ್ಕೆ ಕೊಲೆ? ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!

ಕೆಎಸ್​ಆರ್​ಟಿಸಿ ಬಸ್​​, ಕಾರು, ಆಟೋ, ಬೈಕ್​ಗೆ ಡಿಕ್ಕಿ ಹೊಡೆದಿದ್ದ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ ಆಗಿತ್ತು. ಸರಣಿ ಅಪಘಾತದಲ್ಲಿ ಆಟೋ ಚಾಲಕ ಚಾಂದ್​ಪಾಷಾ, ಪಾದಚಾರಿ ಮನೋಜ್​ಗೆ ಗಾಯ ಆಗಿತ್ತು. ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿದ್ಯುತ್ ತಂತಿ ತಗುಲಿ ಯುವಕ ಸಾವು

ಬೋರ್ ವೆಲ್ ಮೋಟರ್ ಎತ್ತುವಾಗ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಹನಮಂತು (24) ಮೃತ ಯುವಕ. ವಿದ್ಯುತ್ ತಂತಿ ಇರುವುದನ್ನು ಗಮನಿಸದೆ ಬೋರ್​ವೆಲ್​ ಮೋಟರ್ ಎತ್ತುತ್ತಿದ್ದಾಗ ಅವಘಡ ಸಂಭವಿಸಿದೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಶು ವೈದ್ಯರ ಎಡವಟ್ಟಿನಿಂದ 20ಕ್ಕೂ ಹೆಚ್ಚು ಕೋಳಿಗಳು ಸಾವು

ಪಶು ವೈದ್ಯರ ಎಡವಟ್ಟಿನಿಂದ 20ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿ ನಗರದ ಸಿದ್ದಾರ್ಥ ಕಾಲೋನಿಯಲ್ಲಿ ನಡೆದಿದೆ. R2B ವ್ಯಾಕ್ಸಿನೇಷನ್​ನಿಂದ ಜವಾರಿ ಕೋಳಿಗಳು ಸಾವು ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಸಾಕ್ಷ್ಯ ನಾಶಕ್ಕೆ ಐಷರಾಮಿ ಕಾರನ್ನೇ ಸುಟ್ಟು ಹಾಕಿದ ಕಳ್ಳರು: ಗುಂಡಿಕ್ಕಿ ದರೋಡೆಕೋರರನ್ನ ಹಿಡಿದ ಪೊಲೀಸ್ರು

ಆನಂದ್ ಜಾನ್ ಎಂಬುವರಿಗೆ ಸೇರಿದ ಜವಾರಿ ಕೋಳಿಗಳು ಸಾವಾಗಿದೆ. ವ್ಯಾಕ್ಸಿನೇಷನ್​ ಹಾಕಿದ ಮರುದಿನ ಕೋಳಿಗಳು ಮೃತಪಟ್ಟಿವೆ. ಆನಂದ್ ಜಾನ್ ಪಶು ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್‌ ಖರೀದಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Sat, 15 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ