ಮೈಸೂರಿನಲ್ಲಿ ಆ 30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅಲೆ ಜೋರಾಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ 3 ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದು, ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಮೈಸೂರಿನಲ್ಲಿ ಆ 30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 20, 2023 | 6:57 PM

ಮೈಸೂರು, ಆಗಸ್ಟ್​ 20: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ (Gruha Lakshmi scheme) ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು 4 ಜಿಲ್ಲೆಗಳಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. 1,09,54,000 ಮಹಿಳೆಯರ ಖಾತೆಗೆ ತಲಾ 2,000 ರೂ. ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಭಾನುವಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ವೇದಿಕೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ಸಚಿವ ಮಹದೇವಪ್ಪ, ಶಾಸಕ ಕೆ ಹರೀಶ್ ಗೌಡ, ಡಿ ರವಿಶಂಕರ್, ದರ್ಶನ್​ ಸಾಥ್​ ನೀಡಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸ್ಥಳ, ದಿನಾಂಕ ಮುಂದೂಡಿಕೆ; ಸಾಂಸ್ಕೃತಿಕ ನಗರಿಯಲ್ಲಿ ರಾಹುಲ್ ಗಾಂಧಿಯಿಂದ ಚಾಲನೆಗೆ ಸಿದ್ಧತೆ

ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಮಹಿಳೆಯರು ಭಾಗಿಯಾಗುತ್ತಾರೆ. ಸರ್ಕಾರಿ ಬಸ್‌ಗಳ ಮೂಲಕ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಆಯನೂರು ಮಂಜುನಾಥ್ ಸೇರ್ಪಡೆಗೆ ಕಾಂಗ್ರೆಸ್​​ನಲ್ಲಿ ವಿರೋಧ, ಬಿಜೆಪಿ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಕೈ ಮುಖಂಡ

ಇಂದು ಮಧ್ಯಾಹ್ನ 12.30ಕ್ಕೆ ಸಚಿವರು, ಮೈಸೂರಿಗೆ ಆಗಮಿಸಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಾಡಲಾಗಿದೆ. ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಕಾರ್ಯಕ್ರಮ ಶಿಫ್ಟ್​​!

ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಈ ಮೊದಲು ಬೆಳಗಾವಿಯಲ್ಲಿ ನಿಗದಿಯಾಗಿತ್ತು. ಇದೀಗ ಮೈಸೂರಿಗೆ ಶಿಫ್ಟ್ ಆಗಿದ್ದು, ಈ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿತ್ತು. ಇದಕ್ಕೆಲ್ಲ ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬ್ರೇಕ್ ಹಾಕಿದ್ದಾರೆ. ಬೆಳಗಾವಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು ನಿಜ, ಸಿಎಂ, ಡಿಸಿಎಂ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿದರೂ. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹಾಗಾಗಿ ಮೈಸೂರಿಗೆ ಶಿಫ್ಟ್​​ ಆಗಿದೆ. ಯಾರು ವರ್ಚುಸ್ಸು ತೋರಿಸುವ ಅಗತ್ಯವಿಲ್ಲ, ಶಕ್ತಿ ಪ್ರದರ್ಶನ ಸಹ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Sun, 20 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು