ಲೋಕಸಭಾ, ಶಿಕ್ಷಕರ ಕ್ಷೇತ್ರದ ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ:- ಜಿಟಿ ದೇವೇಗೌಡ

ಲೋಕಸಭಾ ಹಾಗೂ ಶಿಕ್ಷಕರ ಕ್ಷೇತ್ರದ ಸೋಲಿನ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ(GT Devegowda) ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದ್ದರು. ಆದರೆ, ಮತದಾರರು ಗ್ಯಾರಂಟಿ ವಿರುದ್ಧ ಮತ ನೀಡಿದ್ದಾರೆ ಎಂದರು.

ಲೋಕಸಭಾ, ಶಿಕ್ಷಕರ ಕ್ಷೇತ್ರದ ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ:- ಜಿಟಿ ದೇವೇಗೌಡ
ಜಿಟಿ ದೇವೇಗೌಡ, ಸಿದ್ದರಾಮಯ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 06, 2024 | 7:41 PM

ಮೈಸೂರು, ಜೂ.06: ಲೋಕಸಭಾ ಚುನಾವಣೆಯಲ್ಲಿ ಸಿಎಂ ತವರಾದ ಮೈಸೂರು(Mysore) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್​ ಸೋಲುಂಡಿದ್ದರು. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್​ಗೆ ಮುಖಭಂಗವಾಗಿದೆ. ಈ ಹಿನ್ನಲೆ ಲೋಕಸಭಾ ಹಾಗೂ ಶಿಕ್ಷಕರ ಕ್ಷೇತ್ರದ ಸೋಲಿನ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ(GT Devegowda) ಅವರು ವಾಗ್ದಾಳಿ ನಡೆಸಿದ್ದಾರೆ.

ಸ್ವ-ಕ್ಷೇತ್ರದ ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ

ಮೈಸೂರಿನಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹೆಚ್ಚು ಸ್ಥಾನ ಗೆದ್ದಿದೆ. ಸಿದ್ದರಾಮಯ್ಯ ತವರು, ಡಿಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದ್ದರು. ಆದರೆ, ಮತದಾರರು ಗ್ಯಾರಂಟಿ ವಿರುದ್ಧ ಮತ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ, ಮೈತ್ರಿಯನ್ನು ಜನ ಒಪ್ಪಿದ್ದಾರೆ. ಪ್ರಧಾನಮಂತ್ರಿ ಮೋದಿ ರಾಜೀನಾಮೆ ಕೇಳುವ ಸಿಎಂ ಸಿದ್ದರಾಮಯ್ಯ ಅವರೇ ಸ್ವಕ್ಷೇತ್ರದ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಕಿಡಿಕಾರಿದರು.

ಇದನ್ನೂ ಓದಿ:ರಾಜ್ಯದಲ್ಲಿ ಮಳೆ ಬೀಳಲಿದೆ ಆದರೆ ಸಿದ್ದರಾಮಯ್ಯ ಸರ್ಕಾರ ಬೀಳದು: ಲಖನ್ ಜಾರಕಿಹೊಳಿ

ಈ ಗೆಲುವು ಮೈತ್ರಿಯ ಗೆಲುವು- ಸಾ.ರಾ.ಮಹೇಶ್

ಇನ್ನು ಮೈಸೂರಿನಲ್ಲಿ ಜೆಡಿಎಸ್‌ನ ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ‘ಮೋದಿ ಹಾಗೂ ದೇವೇಗೌಡರ ನಾಯಕತ್ವವನ್ನ ಜನ ಮೆಚ್ಚಿದ್ದಾರೆ. ಅದರಂತೆ ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಮುಂದೆಯೂ ಮೈತ್ರಿ ಮುಂದುವರಿಯಲಿ ಎಂಬ ಸಂದೇಶ ಕೊಟ್ಟಿದ್ದಾರೆ. ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದಾರೆ, ಇದು ಮೈತ್ರಿಯ ಗೆಲುವು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ