ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು? ಸ್ವಪಕ್ಷೀಯ ಸಂಸದ ಪ್ರತಾಪ್ ಸಿಂಹ ವಿರುದ್ಧ ಹೆಚ್.ವಿಶ್ವನಾಥ್ ಏಕವಚನದಲ್ಲಿ ವಾಗ್ದಾಳಿ

| Updated By: ಆಯೇಷಾ ಬಾನು

Updated on: Jun 07, 2022 | 3:57 PM

ಪ್ರತಾಪ್ ಸಿಂಹನಿಗೆ ಏನಾಗಿದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ಮಹಾರಾಜರನ್ನು ಬಿಟ್ಟರೆ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಅಂತಾನೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಾಲದಲ್ಲಿ ಯಾವುದೇ ಕೆಲಸವಾಗಿಲ್ಲ ಎಂದು ಸ್ವಪಕ್ಷೀಯ ಸಂಸದನ ವಿರುದ್ಧ ವಿಶ್ವನಾಥ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು? ಸ್ವಪಕ್ಷೀಯ ಸಂಸದ ಪ್ರತಾಪ್ ಸಿಂಹ ವಿರುದ್ಧ ಹೆಚ್.ವಿಶ್ವನಾಥ್ ಏಕವಚನದಲ್ಲಿ ವಾಗ್ದಾಳಿ
ಹೆಚ್.ವಿಶ್ವನಾಥ್
Follow us on

ಮೈಸೂರು: ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು? ಎಂದು ಮೈಸೂರಿನಲ್ಲಿ ಪರಿಷತ್ನ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಪ್ರಾಕ್ಟೀಸ್ ಮಾಡಿದ್ದೇವೆ. ಪ್ರತಾಪ್ ಸಿಂಹನಿಗೆ ಏನಾಗಿದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ಮಹಾರಾಜರನ್ನು ಬಿಟ್ಟರೆ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಅಂತಾನೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಾಲದಲ್ಲಿ ಯಾವುದೇ ಕೆಲಸವಾಗಿಲ್ಲ ಎಂದು ಸ್ವಪಕ್ಷೀಯ ಸಂಸದನ ವಿರುದ್ಧ ವಿಶ್ವನಾಥ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

2014ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ನಾನು ಸೋಲ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಮಂದಿರ ಹಾಗೂ ಮಸೀದಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಮಾನವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕ್ತಿದ್ದೀರಾ ನಿಮಗೆ ನಾಚಿಕೆ ಅಗೋದಿಲ್ವಾ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಈ ಬಗ್ಗೆ ಆರ್ಎಸ್ಎಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಬೇಕು. ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದನ್ನು ನಿಲ್ಲಿಸಿ ಅಂತಾ ಹೇಳಬೇಕು. ಇಲ್ಲಿ 25 ಲಕ್ಷ ಮುಸ್ಲಿಂ ಕುಟುಂಬಗಳು ಬದುಕುತ್ತಿವೆ. ಹೆಚ್ಚು ಕಡಿಮೆ ಆದರೆ ಅವರು ಬದುಕುವುದಕ್ಕೆ ಆಗುತ್ತಾ? ಎಂದು ಮೈಸೂರಿನಲ್ಲಿ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನ ಬಿಬಿಎಂಪಿ ಆಸ್ತಿ ಅಲ್ಲ, ವಕ್ಫ್ ಬೋರ್ಡ್ ಆಸ್ತಿ ಎಂದ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಶಾಫಿ; ಬಿಬಿಎಂಪಿ ದಾಖಲೆಯಲ್ಲೇ ಪತ್ತೆಯಾಯ್ತು ಲೋಪ?

ಎಲ್ಲಾ ಮಸೀದಿಗಳಲ್ಲೂ ಶಿವಲಿಂಗಗಳಿರುವುದಿಲ್ಲ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮೋಹನ್ ಭಾಗವತ್ ಹೇಳಿಕೆ ಸ್ವಾಗತಾರ್ಹ. ಮಸೀದಿಗಳಿಗೆ ಸಂಬಂಧಿಸಿದಂತೆ ಇರುವ ವಿವಾದಗಳನ್ನು ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳೋಣ. ಮೋಹನ್ ಭಾಗವತ್ ಅವರ ಹೇಳಿಕೆಯ ಹಿಂದೆ ಒಳ್ಳೆಯ ಉದ್ದೇಶವಿದೆ. ಮೋಹನ್ ಭಾಗವತ್ ಹೇಳಿಕೆಯನ್ನು ಕಟ್ಟರ್ ಆರ್ಎಸ್ಎಸ್ ವಾದಿಗಳು ಏಕೆ ಸ್ವಾಗತಿಸುತ್ತಿಲ್ಲ? ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಏಕೆ ತುಟಿ ಬಿಚ್ಚುತ್ತಿಲ್ಲ ? ನೀವು ಮೋಹನ್ ಭಾಗವತ್ ಹೇಳಿಕೆಯನ್ನು ವಿರೋಧಿಸುತ್ತೀರಾ? ಭಾಗವತ್ ಕುಣಿಯುವುದನ್ನು ನಿಲ್ಲಿಸಿ ಎಂದರೂ ನೀವು ಏಕೆ ಕುಣಿಯುತ್ತಿದೀರಾ? ಬೆಂಕಿ ಹಚ್ಚುವುದನ್ನು ನಿಲ್ಲಿಸಿ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಆದರೂ ನೀವು ಬೆಂಕಿ ಹಚ್ಚುವುದನ್ನು ನಿಲ್ಲಿಸುತ್ತಿಲ್ಲ. ಸದ್ಯಕ್ಕೆ ರಾಜ್ಯದ ಪರಿಸ್ಥಿತಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲಿ ಆಡಳಿತದಲ್ಲಿರುವುದು ಬಿಜೆಪಿ ಸರ್ಕಾರವೇ ಹೊರತು, ಆರ್ಎಸ್ಎಸ್ ಸರ್ಕಾರವಲ್ಲ. ನಾವು 17 ಮಂದಿ ಬಿಜೆಪಿ ಸರ್ಕಾರ ಬೆಂಬಲಿಸಿ ಬಂದವರು. ನಾವು ಆರ್ಎಸ್ಎಸ್ ಬೆಂಬಲಿಸಿ ಬಂದವರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Breaking: ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಕ್ಕೆ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ