AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ

Hamsalekha: ವಿಶ್ವವಿಖ್ಯಾತ ಮೈಸೂರು ದಸರಾ ಅಕ್ಟೋಬರ್ 15ರಂದು ಬೆಳಗ್ಗೆ 10.15 ರಿಂದ 10.30 ರೊಳಗೆ ಶುಭ ಲಗ್ನದಲ್ಲಿ ಉದ್ಘಾಟನೆಯಾಗಲಿದೆ. ಆದರೆ, ಯಾರು ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿತ್ತು. ಅಲ್ಲದೇ ಉದ್ಘಾಟಕರ ಆಯ್ಕೆಯನ್ನು ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಇದೀಗ ಅಂತಿಮವಾಗಿ ಸ್ವತಃ ಮುಖ್ಯಮಂತ್ರಿಗಳೇ ಈ ಬಾರಿಯ ಮೈಸೂರು ದಸರಾ ಉದ್ಘಾಟಕರ ಹೆಸರನ್ನು ಘೋಷಣೆ ಮಾಡಿದ್ದಾರೆ.

Mysore Dasara 2023: ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ
ಸಂಗೀತ ನಿರ್ದೇಶಕ ಹಂಸಲೇಖ
TV9 Web
| Edited By: |

Updated on:Aug 29, 2023 | 10:57 AM

Share

ಮೈಸೂರು (ಆ.29): ಈ ಬಾರಿಯ ಮೈಸೂರು ದಸರಾವನ್ನು (Mysuru Dasara) ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಇದನ್ನೂ ಓದಿ: Mysore Dasara 2023: ಮೈಸೂರು ದಸರಾಗೆ ರಸ್ತೆಗಿಳಿಯಲಿವೆ 300 ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​​ಗಳು

ಇನ್ನು ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ

ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:26 am, Tue, 29 August 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ