AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಮೃತರ ಕುಟುಂಬಸ್ಥರ ಒಪ್ಪಿಗೆ ಇಲ್ಲದೆಯೇ ಮುಗಿಯಿತಾ ಪೋಸ್ಟ್​ಮಾರ್ಟಮ್?

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣದಲ್ಲಿ ಮೈಸೂರಿನ ಕೆ.ಆರ್. ಆಸ್ಪತ್ರೆ ಬಳಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಒಪ್ಪಿಗೆ ಇಲ್ಲದೆ, ಪಂಚನಾಮೆ ಹೆಸರಲ್ಲಿ ಸಹಿ ಪಡೆದು ಪೊಲೀಸರು ಪೋಸ್ಟ್​ಮಾರ್ಟಮ್ ಮುಗಿಸಿದ್ದಾರೆ ಎಂದು ಮೃತನ ಸಹೋದರಿ ಹಾಗೂ ನರ್ಸ್ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಕೆ.ಆರ್. ಆಸ್ಪತ್ರೆ ಶವಾಗಾರದ ಬಳಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಮೃತರ ಕುಟುಂಬಸ್ಥರ ಒಪ್ಪಿಗೆ ಇಲ್ಲದೆಯೇ ಮುಗಿಯಿತಾ ಪೋಸ್ಟ್​ಮಾರ್ಟಮ್?
ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣಕ್ಕೆ ಟ್ವಿಸ್ಟ್
ರಾಮ್​, ಮೈಸೂರು
| Edited By: |

Updated on:Aug 16, 2026 | 2:23 PM

Share

ಮುಖ್ಯಾಂಶಗಳು

  • ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ: ಕುಟುಂಬಸ್ಥರ ಒಪ್ಪಿಗೆಯಿಲ್ಲದೆ ಪೋಸ್ಟ್​ಮಾರ್ಟಮ್ ಆರೋಪ.
  • ಪಂಚನಾಮೆ ಹೆಸರಲ್ಲಿ ಸಹಿ ಪಡೆದು ಪೊಲೀಸರು ಯಾಮಾರಿಸಿದ್ದಾರೆ ಎಂದು ಗಂಭೀರ ದೂರಿದ ನರ್ಸ್.
  • ಮೈಸೂರಿನ ಕೆ.ಆರ್. ಆಸ್ಪತ್ರೆ ಶವಾಗಾರ ಆವರಣದಲ್ಲಿ ಹೆಚ್ಚುತ್ತಿರುವ ಮೃತರ ಸಂಬಂಧಿಕರ ಆಕ್ರೋಶ.

ಮೈಸೂರು, ಆಗಸ್ಟ್ 16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಆಂಥೋನಿ, ಪೀಟರ್ ಹಾಗೂ ಕುಮಾರ್ ಬಲಿಯಾದ ಪ್ರಕರಣ ತೀವ್ರ ಗಂಭೀರ ತಿರುವು ಪಡೆದುಕೊಂಡಿದೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗೆ (Post-Mortem) ಕುಟುಂಬಸ್ಥರು ಒಪ್ಪಿಗೆ ನೀಡದಿರುವ ನಡುವೆಯೇ, ಪೊಲೀಸರು ಹಾಗೂ ಜಿಲ್ಲಾಡಳಿತ ಅಮಾಯಕರನ್ನು ಯಾಮಾರಿಸಿ ಪೋಸ್ಟ್​ಮಾರ್ಟಮ್ ಮುಗಿಸಿದ್ದಾರೆ ಎಂದು ಮೃತ ಪೀಟರ್ ಅವರ ಸಹೋದರಿ ಹಾಗೂ ವೃತ್ತಿಯಲ್ಲಿ ನರ್ಸ್ ಆಗಿರುವ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ.

ಹೈಡ್ರಾಮಾಗೆ ಕಾರಣವಾದ ಪಂಚನಾಮೆ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಬಳಿಕ ಶವಗಳ ಮರಣೋತ್ತರ ಪರೀಕ್ಷೆಗೆ ಮೃತರ ಕುಟುಂಬಸ್ಥರೇ ಅಡ್ಡಿಪಡಿಸಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಬಂದು ಸೂಕ್ತ ಪರಿಹಾರ ಘೋಷಿಸುವವರೆಗೆ ಮರಣೋತ್ತರ ಪರೀಕ್ಷೆಗೆ ಸಮ್ಮತಿಸುವುದಿಲ್ಲ ಎಂದು ಮೃತರ ಸಂಬಂಧಿಕರು ಪಟ್ಟು ಹಿಡಿದಿದ್ದರು.

ಮೂವರಲ್ಲಿ ಇಬ್ಬರ ಮೃತದೇಹಗಳ ವೈಜ್ಞಾನಿಕ ಸ್ಕ್ಯಾನಿಂಗ್ ನಡೆಸಲು ಅಧಿಕಾರಿಗಳು ಮುಂದಾದರು. ಆದರೆ, ಶವಗಳನ್ನು ಸ್ಕ್ಯಾನಿಂಗ್‌ಗೆ ಕಳುಹಿಸುವ ವೇಳೆ ಸಂಬಂಧಿಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ, ಶವಾಗಾರದ ಬಾಗಿಲಲ್ಲೇ ಶವದ ವಾಹನ ತಡೆದಿದ್ದಾರೆ. ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಮೃತದೇಹಗಳನ್ನು ಮತ್ತೆ ಶವಾಗಾರಕ್ಕೇ ವಾಪಸ್ ಕಳುಹಿಸಿದ್ದಾರೆ.

ಪಂಚನಾಮೆ ಹೆಸರಲ್ಲಿ ಸಹಿ ಪಡೆದು ಪೋಸ್ಟ್ ಮೌರ್ಟಮ್ ಮುಕ್ತಾಯ?

ಮೃತರ ಕುಟುಂಬಸ್ಥರ ಅಮಾಯಕತೆಯನ್ನೇ ದುರ್ಬಳಕೆ ಮಾಡಿಕೊಂಡಿರುವ ಪೊಲೀಸರು, ಕೇವಲ ಪಂಚನಾಮೆ ಪ್ರಕ್ರಿಯೆ ಎಂದು ಹೇಳಿ ಅವರಿಂದ ಸಹಿ ಪಡೆದುಕೊಂಡಿದ್ದಾರೆ. ಆದರೆ, ಕುಟುಂಬಸ್ಥರಿಗೆ ತಿಳಿಸದೇ, ಅವರ ಯಾವುದೇ ಒಪ್ಪಿಗೆಯೂ ಇಲ್ಲದೆ ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಪೀಟರ್ ಅವರ ಸಹೋದರಿ ಹಾಗೂ ವೃತ್ತಿಯಲ್ಲಿ ನರ್ಸ್ ಆಗಿರುವ ಮಾರ್ಗರೇಟ್ ಅವರು ಶವಾಗಾರದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ ಜಿಲ್ಲಾಡಳಿತದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾವು ಮರಣೋತ್ತರ ಪರೀಕ್ಷೆಗೆ ಸಮ್ಮತಿಯನ್ನೇ ನೀಡಿರಲಿಲ್ಲ. ಆದರೆ ಹನೂರಿನಿಂದ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಬಂದು ನೋಡಿದಾಗ, ಈಗಾಗಲೇ ಎರಡು ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿದಿರುವುದು ಗೊತ್ತಾಗಿದೆ. ನಾನು ನರ್ಸ್ ಆಗಿರುವುದರಿಂದ ಶವಾಗಾರದ ಒಳಗಿನ ಸ್ಥಿತಿ ನೋಡಿ ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ. ಶವಗಳ ಮುಂದೆ ನಮ್ಮನ್ನು ನಿಲ್ಲಿಸಿ ಫೋಟೋ ತೆಗೆಯಲು ಮುಂದಾದರು, ನಾನು ನಿರಾಕರಿಸಿದೆ. ಅಲ್ಲದೆ ಮೃತದೇಹಗಳನ್ನು ಐಸ್ ಬಾಕ್ಸ್‌ನಲ್ಲಿ ಇಡಬೇಕಾಗಿದ್ದರೂ ಹಾಗೆ ಮಾಡಿಲ್ಲ,” ಎಂದು ಮಾರ್ಗರೇಟ್ ದೂರಿದ್ದಾರೆ.

ಇದನ್ನೂ ಓದಿ ಹನೂರಿನಲ್ಲಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್​​. ಅಶೋಕ್​​ ಆಗ್ರಹ

ಶವಾಗಾರದ ಬಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಆಕ್ರೋಶ

ಇದಕ್ಕೂ ಮುನ್ನ ಮೃತದೇಹಗಳನ್ನು ವೈಜ್ಞಾನಿಕ ಸ್ಕ್ಯಾನಿಂಗ್‌ಗೆ ಒಯ್ಯಲು ಅಧಿಕಾರಿಗಳು ಯತ್ನಿಸಿದಾಗ ಸಂಬಂಧಿಕರು ತೀವ್ರ ವಿರೋಧ ವ್ಯಕ್ತಪಡಿಸಿ ಶವದ ವಾಹನ ತಡೆದಿದ್ದರು. ಪರಿಹಾರ ಘೋಷಣೆ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಶವಪರೀಕ್ಷೆಗೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕುಟುಂಬಸ್ಥರು, ಈಗ ಪೊಲೀಸರ ಈ ಮೋಸದ ಆಟದಿಂದ ತೀವ್ರ ಆಕ್ರೋಶಗೊಂಡಿದ್ದು, ಕೆ.ಆರ್. ಆಸ್ಪತ್ರೆ ಶವಾಗಾರದ ಬಳಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Sun, 16 August 26

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ