ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಡ್ಯಾಮೇಜ್‌ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಇದೀಗ ಈ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ದೂರು ದಾಖಲಿಸಿದ್ದಾರೆ.

Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on:Dec 04, 2023 | 7:20 AM

ಮೈಸೂರು, (ಡಿಸೆಂಬರ್ 04): ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭವಾನಿ ರೇವಣ್ಣ (Bhavani Revanna) ಅವರ ಕಾರಿಗೆ (Car) ಬೈಕ್‌ (Bike) ಡಿಕ್ಕಿ ಹೊಡೆದಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಸುಮಾರು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಟೊಯೋಟಾ ವೆಲ್ಫೇರ್​ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದು, ಇದೀಗ ಈ ದೃಶ್ಯದ ವೀಡಿಯೋ ಫುಲ್ ವೈರಲ್‌ ಆಗಿದೆ.

ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟು ದೂರದಿಂದ ಟೈರ್ ಉಜ್ಜಿಕೊಂಡು ಕಂಟ್ರೋಲ್‌ ಮಾಡಿದ್ದೀವಿ. ಬೈಕ್ ಓಡ್ಸೋಕೆ ಇತಿಮಿತಿ ಇಲ್ವಾ? ನಿನಗೆ ರೈಟ್ ಸೈಡ್ ಬರೋಕೆ ರೂಲ್ಸ್ ಎಲ್ಲಿದೆ? ಲೆಫ್ಟ್ ಸೈಡ್ ಬರಬೇಕು ನೀನು ಎಂದು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಇನ್ನು ಈ ಸಂಬಂಧ ಭವಾನಿ ರೇವಣ್ಣ ಕಾರು ಚಾಲಕ ಮಂಜುನಾಥ್‌ ಅವರು ಅವರು ಬೈಕ್​ ಸವಾರ ಶಿವಣ್ಣ ಎನ್ನುವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲೇನಿದೆ?

01/12/2023ರಂದು 12.45ರ ಸುಮಾರಿಗೆ ಕೆಲಸ ನಿಮಿತ್ತ ಸಾಲಿಗ್ರಾಮದ ಪ್ರಕಾಶ್ ಮನೆಗೆ ಹೋಗಿದ್ದೆ. ವಾಪಸ್ಸು ಹೊಳೆನರಸೀಪುರಕ್ಕೆ ಹೊರಟಿದ್ದೆ. ಆಗ ರಾಂಪುರ ಜಂಕ್ಷನ್ ಬಳಿ ಎದರುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಅಡ್ಡ ದಿಡ್ಡಿಯಾಗಿ ಬಂದು ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಆದರೆ ಆತನಿಗೆ ಯಾವುದೇ ಗಾಯವಾಗಿಲ್ಲ. ಇನ್ನು ಕಾರಿನ ಬಂಪರ್ ಬ್ಯಾನೆಟ್, ನಂಬರ್ ಪ್ಲೇಟ್ ಮುಂಭಾಗದ ಬಿಡಿ ಭಾಗಗಳು ಜಖಂ ಆಗಿವೆ. ಹೀಗಾಗಿ ಶಿವಣ್ಣ ವಿರುದ್ದ ಕಾನೂನು ಕ್ರಮ‌ಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಭವಾನಿ ರೇವಣ್ಣ ಅವರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮನುಷ್ಯನ ಪ್ರಾಣಕ್ಕಿಂತ ತಮ್ಮ ಕಾರಿಗೆ ಆಗಿರುವ ಹಾನಿಯೇ ಹೆಚ್ಚಾಯ್ತಾ? ಅವರಿಂದಲೇ ಆಯ್ಕೆಯಾಗುವ ನಿಮ್ಮ ಈ ವರ್ತನೆ ಸರಿ ಅಲ್ಲ ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Mon, 4 December 23

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ