Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಖೆಗೆ ಆದೇಶ ನೀಡಲು ಅಧಿಕಾರವಿದೆ: ಸಾ ರಾ ಮಹೇಶ್​ ಆಪಾದನೆಗೆ ಮುನೀಶ್​ ಮೌದ್ಗಿಲ್​ ಉತ್ತರ

ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭೂ ದಾಖಲೆಗಳ ಸರ್ವೆ ಕುರಿತು ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಭೂ ದಾಖಲೆಗಳ ಆಯುಕ್ತ ಮುನೀಶ್ ಮೌದ್ಗೀಲ್ ಸೋಮವಾರ ಉತ್ತರ ನೀಡಿದ್ದಾರೆ.

ತನಿಖೆಗೆ ಆದೇಶ ನೀಡಲು ಅಧಿಕಾರವಿದೆ: ಸಾ ರಾ ಮಹೇಶ್​ ಆಪಾದನೆಗೆ ಮುನೀಶ್​ ಮೌದ್ಗಿಲ್​ ಉತ್ತರ
ಸಾ.ರಾ.ಮಹೇಶ್ ಮತ್ತು ಮುನೀಶ್ ಮೌದ್ಗೀಲ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 06, 2021 | 4:16 PM

ಮೈಸೂರು: ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭೂ ದಾಖಲೆಗಳ ಸರ್ವೆ ಕುರಿತು ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಭೂ ದಾಖಲೆಗಳ ಆಯುಕ್ತ ಮುನೀಶ್ ಮೌದ್ಗೀಲ್ ಸೋಮವಾರ ಉತ್ತರ ನೀಡಿದ್ದಾರೆ. ಇಂಥ ತನಿಖೆಗೆ ಆದೇಶ ನೀಡಲು ತಮಗೆ ಇರುವ ಅಧಿಕಾರಿಗಳ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.

ಇದೀಗ ನಾನು ಸರ್ವೆಗೆ ಆದೇಶಿಸಿದ್ದೇನೆ. ಮರು ಸಮೀಕ್ಷೆಗೆ ಅಲ್ಲ ಎಂದು ಮೌದ್ಗೀಲ್ ಸ್ಪಷ್ಟಪಡಿಸಿದ್ದಾರೆ. ಏಕೆಂದರೆ ಈ ಹಿಂದೆ ಮಾಡಿದ್ದು ಸರ್ವೆ ಆಗಿರಲಿಲ್ಲ. ಇದೀಗ ಅರ್ಜಿ ಹಾಕಿರುವವರು ಹಲವು ಮಾಹಿತಿ ಕೋರಿದ್ದಾರೆ, ಪ್ರಶ್ನೆಗಳನ್ನು ಎತ್ತಿದ್ದಾರೆ. ಹೀಗಾಗಿಯೇ ಹೊಸದಾಗಿ ಸರ್ವೆ ನಡೆಸಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೆ ನಡೆಸಲು ಆದೇಶಿಸುವ ಅಧಿಕಾರ ತನಗೆ ಇದೆ ಎಂದು ಹಲವು ಕಾನೂನು ವಿಚಾರಗಳನ್ನು ಮುಂದಿಟ್ಟಿದ್ದಾರೆ.

1) (ಸಾ.ರಾ.ಮಹೇಶ್​ ಅವರಿಗೆ ಸಂಬಂಧಿಸಿದಂತೆ) ಹಲವು ಅಕ್ರಮಗಳ ಆರೋಪ ಕೇಳಿಬಂದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ 6ರಿಂದ 7.

2) ಈ ಹಿಂದೆಯೂ ಲಿಖಿತ ರೂಪದಲ್ಲಿ ಹಲವು ಅಕ್ರಮಗಳ ಬಗ್ಗೆ ಆರೋಪಿಸಲಾಗಿತ್ತು. ಪ್ರಾದೇಶಿಕ ಆಯುಕ್ತರು ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಮಾತ್ರ (ರಾಜಕಾಲುವೆ ಒತ್ತುವರಿ) ವಿಚಾರಣೆ ನಡೆಸಲು ಆದೇಶಿಸಲಾಗಿತ್ತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂಮಿಯ ಒತ್ತುವರಿ, ಕೆರೆಯ ಬಫರ್​ ವಲಯಗಳಲ್ಲಿ ರೆಸಾರ್ಟ್​ಗಳಿಗೆ ಅನುಮೋದನೆ ನೀಡಿರುವ ಬಗ್ಗೆ ವಿಚಾರಣೆ ನಡೆದಿರಲಿಲ್ಲ.

3) ಒಬ್ಬ ವ್ಯಕ್ತಿಯ ಬಗ್ಗೆ, ಒಂದು ವಿಚಾರವನ್ನು ಆಧರಿಸಿ ವಿಚಾರಣೆ ನಡೆಸಲು ಅರ್ಜಿದಾರರು ಕೋರಿರಲಿಲ್ಲ. ಎಲ್ಲ ವಿಚಾರಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅರ್ಜಿದಾರರು ಕೋರಿದ್ದರು.

4) ಹೀಗಾಗಿಯೇ ವಸ್ತುಸ್ಥಿತಿಯನ್ನು ಬೆಳಕಿಗೆ ತರಲು ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ಯಾವುದೇ ನಿರ್ದಿಷ್ಟ ಆರೋಪ ಅಥವಾ ಒತ್ತವರಿಗೆ ಸಂಬಂಧಿಸಿದ ತನಿಖೆ ಇದಲ್ಲ.

5) ಸರ್ವೆ ಆಯೋಕ್ತರ ನಿರ್ದೇಶನದ ಮೇಲೆ ಈ ಹಿಂದೆಯೇ ಸರ್ವೆ ನಡೆದಿತ್ತು. ಅದು ಮುಕ್ತಾಯವಾಗಿದೆ ಎಂಬ ಹೇಳಿಕೆಗಳು ಆಧಾರರಹಿತ.

(Have Authority to Order Inquiry in Sa Ra Mahesh Case says Munish Moudgil)

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಇದನ್ನೂ ಓದಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್​ಬ್ಯಾಕ್ ಅರೋಪ; ಅಮಾನತಿಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆಗ್ರಹ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ