ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ

ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ
ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:May 26, 2024 | 10:11 PM

ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)​ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ

ಇನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜೀವ್ ತಾರನಾಥ್ ಅವರ ಆರೋಗ್ಯದ ಕುರಿತು ವೈದ್ಯರು ಹಾಗೂ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದರು. ಮಹದೇವಪ್ಪಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಮತ್ತಿತರರು ಸಾಥ್​ ನೀಡಿದರು.

ಇದನ್ನೂ ಓದಿ:ತಾವು ಬಂದೊಡನೆ ಸುದ್ದಿಗೋಷ್ಟಿ ನಿಲ್ಲಿಸಿ ಎದ್ದುನಿಂತ ಸಚಿವ ಮಹದೇವಪ್ಪರನ್ನು ಸಿಎಂ ಸಿದ್ದರಾಮಯ್ಯ ನಯವಾಗಿ ಗದರಿದರು

ಸರೋದ್ ವಾದಕ ರಾಜೀವ್ ತಾರಾನಾಥ್ ಅವರು 1932 ಅಕ್ಟೋಬರ್ 17 ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರು ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ತಮ್ಮ ಆರಂಭಿಕ ತರಬೇತಿಯನ್ನು ಪಡೆದರು. ಒಂಬತ್ತು ವರ್ಷದವರಾಗಿದ್ದಾಗ ಅವರು ತಮ್ಮ ಮೊದಲ ಸಾರ್ವಜನಿಕ ಗಾಯನ ಪ್ರದರ್ಶನವನ್ನು ನೀಡಿದರು. ಇವರು ಸಾಹಿತ್ಯದಲ್ಲಿ ಪಿಎಚ್‌ಡಿ ಹೊಂದಿದ್ದರೂ, ಅವರು ತಮ್ಮ ವೃತ್ತಿಜೀವನವನ್ನು ತಿರುಚಿರಾಪಳ್ಳಿಯ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕ ಮತ್ತು ಇಂಗ್ಲಿಷ್ ಸಾಹಿತ್ಯದ ಮುಖ್ಯಸ್ಥರಾಗಿ ತ್ಯಜಿಸಲು ನಿರ್ಧರಿಸಿದರು. ನಂತರ ಅದನ್ನು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ತಿರುಚಿರಾಪಳ್ಳಿ ಎಂದು ಮರುನಾಮಕರಣ ಮಾಡಲಾಯಿತು. ತದನಂತರ ಕಲ್ಕತ್ತಾಗೆ ಹೋದರು, ಅಲ್ಲಿ ಅವರು ಅಲಿ ಅಕ್ಬರ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿಯನ್ನು ಪ್ರಾರಂಭಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Sun, 26 May 24

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ