ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ: ಪ್ರತಾಪ್ ಸಿಂಹಗೆ ಹೆಚ್​ಸಿ ಮಹದೇವಪ್ಪ ತಿರುಗೇಟು

ರೈಲ್ವೆ ಸಚಿವರ ಬಳಿ ಈ ರೀತಿ ಚರ್ಚಿಸಿರೋದು ಎಷ್ಟು ಸರಿ. ಒಡೆಯರ್ ಕೂಡಾ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಆದರೆ, ಇಂತಹ ವಿಚಾರದಲ್ಲಿ ಘರ್ಷಣೆ ಮಾಡುವುದು ಸರಿಯಲ್ಲ ಎಂದು ಸಂಸದ ಪ್ರತಾಪ್ ಸಿಂಹಗೆ ಹೆಚ್.ಸಿ. ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ: ಪ್ರತಾಪ್ ಸಿಂಹಗೆ ಹೆಚ್​ಸಿ ಮಹದೇವಪ್ಪ ತಿರುಗೇಟು
ಪ್ರತಾಪ್ ಸಿಂಹ, ಹೆಚ್​ಸಿ ಮಹದೇವಪ್ಪ
Follow us
TV9 Web
| Updated By: ganapathi bhat

Updated on:Feb 12, 2022 | 5:05 PM

ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪುಸುಲ್ತಾನ್ ಓರ್ವ ಸ್ವಾತಂತ್ರ್ಯ ಹೋರಾಟಗಾರ. ಅಂತಹವರ ಹೆಸರು ಬದಲಾವಣೆ ಮಾಡುವುದು ಸರಿಯಲ್ಲ. ಸಂಸದ ಪ್ರತಾಪ್ ಸಿಂಹ ಓರ್ವ ಅಂಕಣಕಾರನಾಗಿದ್ದವನು. ರೈಲ್ವೆ ಸಚಿವರ ಬಳಿ ಈ ರೀತಿ ಚರ್ಚಿಸಿರೋದು ಎಷ್ಟು ಸರಿ. ಒಡೆಯರ್ ಕೂಡಾ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಆದರೆ, ಇಂತಹ ವಿಚಾರದಲ್ಲಿ ಘರ್ಷಣೆ ಮಾಡುವುದು ಸರಿಯಲ್ಲ ಎಂದು ಸಂಸದ ಪ್ರತಾಪ್ ಸಿಂಹಗೆ ಹೆಚ್.ಸಿ. ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ವಿಚಾರವಾಗಿ ಮೈಸೂರಿನಲ್ಲಿ ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿದ್ದಾರೆ. ಇದು ದುರದೃಷ್ಟಕರ ಹೇಳಿಕೆ. ಒಬ್ಬ ಸಂಸದನಿಗೆ ಈ ರೀತಿಯ ಕೋಮುವಾದಿ ಚಿಂತನೆ ಇರುವುದು ದುರದೃಷ್ಟಕರ. ಇದು ಅವರ ಫ್ಯಾಸಿಸ್ಟ್ ಮನೋಭಾವವನ್ನು ತೋರಿಸುತ್ತಿದೆ. ಕೆಆರ್​ಎಸ್ ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದೇ ಟಿಪ್ಪುಸುಲ್ತಾನ್. ಟಿಪ್ಪು ದೂರದೃಷ್ಟಿಯ ರಾಜನಾಗಿದ್ದ. ಅದರ ಫಲವಾಗಿ ಅಂದಿನ ಕಾಲದಲ್ಲೇ 35 ಸಾವಿರ ಕೆರೆ ಕಟ್ಟೆ ಕಾಲುವೆಗಳು ನಿರ್ಮಾಣವಾಗಿವೆ ಎಂದು ಹೇಳಿದ್ದಾರೆ.

ಹೊಸದೊಂದು ರೈಲು ತಂದು ಅದಕ್ಕೆ ಒಡೆಯರ್ ಹೆಸರು ಇಡಿ. ಈಗ ಇರುವ ಟಿಪ್ಪು ಹೆಸರನ್ನು ಬದಲಿಸುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದಿದ್ದಾಗ ಬುಲೆಟ್ ರೈಲು ತರುತ್ತೇನೆ ಎಂದಿದ್ದರು. ಮೈಸೂರನ್ನು ಪ್ಯಾರಿಸ್ ಮಾಡುವುದಾಗಿ ಭರವಸೆ ನೀಡಿದ್ದರು‌. ಪ್ರತಾಪ್ ಸಿಂಹ ಇದನ್ನು ಮೋದಿಯವರ ಬಳಿ ಕೇಳಬೇಕು ಎಂದು ಅಬ್ದುಲ್ ಮಜೀದ್ ಮೈಸೂರಿನಲ್ಲಿ ಒತ್ತಾಯ ಮಾಡಿದ್ದಾರೆ.

ಪ್ರತಾಪ್ ಸಿಂಹ ಏನು ಹೇಳಿದ್ದರು?

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸುವಂತೆ ಪ್ರತಾಪ್ ಸಿಂಹ ಒತ್ತಾಯ ಮಾಡಿದ್ದರು. ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದು, ದೆಹಲಿಯಲ್ಲಿ ಭೇಟಿಯಾಗಿ ಸಂಸದರಿಂದ ಲಿಖಿತ ಮನವಿ ಸಲ್ಲಿಕೆ ಮಾಡಲಾಗಿದೆ. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಲು ಒತ್ತಾಯ ಮಾಡಲಾಗಿತ್ತು.

ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ

ಇದನ್ನೂ ಓದಿ: ಸಿದ್ದರಾಮಯ್ಯ ‘ಸಿದ್ದ ರಹೀಮ್ ಅಯ್ಯ’ ಅಂತಾ ಹೆಸರು ಬದಲಿಸಿಕೊಳ್ಳುತ್ತಾರೆ; ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

Published On - 3:54 pm, Sat, 12 February 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ