HD Kote: ಗಸ್ತಿನಲ್ಲಿದ್ದ ವೇಳೆ ದಿಢೀರ್ ಕಾಡಾನೆ ದಾಳಿ: ವಾಚರ್ ಸಾವು
ಕಾಡಾನೆ ದಾಳಿಗೆ ದಡದಹಳ್ಳಿ ಹಾಡಿಯ ಆದಿವಾಸಿ ವಾಚರ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯದಲ್ಲಿ ನಡೆದಿದೆ.
ಮೈಸೂರು: ಕಾಡಾನೆ ದಾಳಿಗೆ (elephant attack) ದಡದಹಳ್ಳಿ ಹಾಡಿಯ ಆದಿವಾಸಿ ವಾಚರ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯದಲ್ಲಿ ನಡೆದಿದೆ. ಬೊಮ್ಮ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ವಾಚರ್. ಮಧುಕೊಯ್ಲರ್ ಜತೆ ಗಸ್ತಿನಲ್ಲಿದ್ದ ವೇಳೆ ದಿಢೀರ್ ಆನೆ ದಾಳಿ ನಡೆಸಿತ್ತು. ಕಾಡಾನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಂದಕಕ್ಕೆ ಬಿದಿದ್ದು, ಬೊಮ್ಮನನ್ನು ಸೊಂಡಿಲಿನಿಂದ ಎತ್ತಿ ಎಸೆದಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿ ಕರೆಸಿಕೊಂಡಿದ್ದ ಬೊಮ್ಮ, ಕಾಡಾನೆ ದಾಳಿಯಿಂದ ಮೈಮೂಳೆ ಮುರಿದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುರಿಸೆಳೆದಿದ್ದಾರೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವು
ದಕ್ಷಿಣ ಕನ್ನಡ: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ(21) ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಜೊತೆಗೆ ಇದೇ ವೇಳೆ ಸ್ಥಳದಲ್ಲಿದ್ದ ರಮೇಶ್ ರೈ(60) ಎಂಬವರ ಮೇಲೂ ದಾಳಿ ನಡೆಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ರಂಜಿತಾ ನೆಲ್ಯಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಪತ್ತೆ ಹಚ್ಚಿದ್ದ ಗಾಯಗೊಂಡ ಆನೆ ಮರಿಗೆ ಸೂಕ್ತ ಚಿಕಿತ್ಸೆ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಹಸು ಮೇಯಿಸಲು ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ
ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸೊಳ್ಳೆಪುರ ದೊಡ್ಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ಅಲಗಪ್ಪ(50) ಮೃತ ದುರ್ದೈವಿ. ಮೂರು ದಿನದ ಹಿಂದೆ ದನ ಮೇಯಿಸಲು ಹೋಗಿದ್ದ ವೇಳೆ ಕಾಡಾನೆ ದಾಳಿಯಾಗಿ ಅಲಗಪ್ಪ ಮೃತಪಟ್ಟಿದ್ದರು. ಕುಟುಂಬಸ್ಥರು ಅಲಗಪ್ಪನಿಗಾಗಿ ಹುಡುಕಾಟ ನಡೆಸಿದ್ದು ಕಾಡಾನೆ ದಾಳಿ ವಿಚಾರ ಬಯಲಾಗಿದೆ. ಈ ವೇಳೆ ಒಂದು ಆಕಳು ದಾರಿ ತಪ್ಪಿಸಿಕೊಂಡಿತ್ತು. ಆಕಳು ಹುಡುಕುತ್ತಾ ಅಲಗಪ್ಪ ಕಾಡಿನ ಮಧ್ಯೆ ತೆರಳಿದ್ದರು. ಆಗ ಕಾಡಾನೆ ದಾಳಿ ಮಾಡಿದೆ. ಸ್ಥಳದಲ್ಲಿಯೇ ಅಲಗಪ್ಪ ಪ್ರಾಣಬಿಟ್ಟಿದ್ದಾರೆ.
ಇದನ್ನೂ ಓದಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ: ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು
ಅಲಗಪ್ಪ ಮನೆಗೆ ಬಾರದ ಕಾರಣ ಕುಟುಂಬಸ್ಥರು ಕಾಡಿನಲ್ಲಿ ಹುಡುಕಾಟ ನಡೆಸಿದ್ದಾರೆ. ಕಳೆದ ಎರಡು ದಿನಗಳಿಂದ ಕುಟುಂಬದವರು ಹುಡುಕಾಡಿದ್ದು ನಿನ್ನೆ(ಮಾರ್ಚ್ 01) ಸಂಜೆ ಕಾಡಿನಲ್ಲಿ ಮೃತ ದೇಹ ಪತ್ತೆಯಾಗಿದೆ. ಹಾರೋಹಳ್ಳಿ ಬೀಟ್ ಗುಲ್ಲೆಟ್ಟಿ ಕಾವಲ್ ಬಳಿ ಮೃತದೇಹ ಪತ್ತೆಯಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ಕಾಡಾನೆ ರಕ್ಷಣೆ: ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿಯಿಂದ ಮೆಚ್ಚುಗೆ
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್ ತಂತಿ ಬೇಲಿಯನ್ನು ಸ್ಪರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು ಕಾಡಾನೆಯನ್ನು(Elephant Rescue) ರಕ್ಷಿಸಿದ್ದಾರೆ. ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಟ್ವೀಟ್ ಮಾಡವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.