ನನ್ನ ಸೋಲಿನ ಬಗ್ಗೆ ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು: ಕುಮಾರಸ್ವಾಮಿ ಪ್ರಶ್ನೆ

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಕುಮಾರಸ್ವಾಮಿ, ನನ್ನ ಸೋಲಿನ ಬಗ್ಗೆ ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಕೇಳಿದ್ದಾರೆ.

ನನ್ನ ಸೋಲಿನ ಬಗ್ಗೆ ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು: ಕುಮಾರಸ್ವಾಮಿ ಪ್ರಶ್ನೆ
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on: Mar 28, 2024 | 12:27 PM

ಮೈಸೂರು, ಮಾ.28: ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಯಾವಾಗ ಜ್ಯೋತಿಷಿಯಾದರು ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದರು.

ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ನೀವು (ಸಿದ್ದರಾಮಯ್ಯ) ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಕುಮಾರಸ್ವಾಮಿ ಕೇಳಿದರು. ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದರು.

ಇದನ್ನೂ ಓದಿ: ಮಂಡ್ಯದಲ್ಲಿ ಸ್ಪರ್ಧೆ ಹಿಂದೆ ಕುಮಾರಸ್ವಾಮಿಯ ಹಲವು ರಾಜಕೀಯ ಲೆಕ್ಕಾಚಾರ!

ಕಾಂಗ್ರೆಸ್ ನೇತೃತ್ವದ ಐಎನ್​ಡಿ ಮೈತ್ರಿಕೂಟ ಗೆಲುವು ಸಾಧಿಸಿದರೆ ಮೇಕೆದಾಟು ಬಂದ್ ಆಗುತ್ತದೆ ಎಂಬ ಡಿಎಂಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದು ಡಿಎಂಕೆ ಹೇಳಿದೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್​​​​​ನವರು ಮಾತಾಡುತ್ತಾರೆ. ರಾಜ್ಯ ನೀರಾವರಿ ಯೋಜನೆಗಳಿಗೆ ದೇವೇಗೌಡರ ಕೊಡುಗೆ ಇದೆ. ದೇವೇಗೌಡರ ಬಗ್ಗೆ ಮಾತಾಡುವ ನೈತಿಕತೆ ಕಾಂಗ್ರೆಸ್​ನವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಅನಧಿಕೃತ ಜೆಡಿಎಸ್ ಬಿಜೆಪಿ ಮೈತ್ರಿ

ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ. ಹೀಗಾಗಿ ಕಾರ್ಯಕರ್ತರಲ್ಲಿ ಯಾವ ಗೊಂದಲಗಳು ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಎರಡು ಪಕ್ಷದ ಕಾರ್ಯಕರ್ತರು ಬಹಳ ಸಮನ್ವತೆಯಿಂದ ಮೊದಲನಿಂದಲೂ ಇದ್ದಾರೆ, ಈಗಲೂ ಇರುತ್ತಾರೆ ಎಂದರು. ಜೆಡಿಎಸ್ ಕೋಮುವಾದಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ ಎಂದರು.

ಸುಮಲತಾ ಏನು ನನ್ನ ಶಾಶ್ವತ ಶತ್ರುನಾ?: ಕುಮಾರಸ್ವಾಮಿ

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್​ಗೆ ಸಂಸದೆ ಸುಮಲತಾ ಬೆಂಬಲ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಸುಮಲತಾ ಏನು ನನ್ನ ಶಾಶ್ವತ ಶತ್ರುನಾ ಎಂದು ಕೇಳಿದ್ದಾರೆ. ರಾಮಾಂಜನೇಯ ಯುದ್ಧವೇ ಈ ಮಣ್ಣಿನಲ್ಲಿ ನಡೆದು ಹೋಗಿಲ್ವಾ? ರಾಜಕೀಯದಲ್ಲಿ ಹೋರಾಟ ಜಗಳ ಎಲ್ಲವೂ ಇದ್ದೇ ಇರುತ್ತದೆ. ಅವನ್ನೆಲ್ಲಾ ಒಮ್ಮೊಮ್ಮೆ ದಾಟಿ ಹೋಗಬೇಕು ಎಂದರು.

ನಮಗೇನು ಸುಮಲತಾ ಅಂಬರೀಶ್ ಬಹಳ ದೂರವರೇನು ಅಲ್ಲ. ಅಂಬರೀಶ್​ ಇದ್ದ ಕಾಲದಲ್ಲಿ ಪರಸ್ಪರ ಜೊತೆಯಲ್ಲಿದ್ದವರು. ರಾಜಕಾರಣಕ್ಕಾಗಿ ಕೆಲವು ವ್ಯತ್ಯಾಸಗಳಾಗಿತ್ತು. ಅಗತ್ಯವಿದ್ದರೆ ಸಂಸದೆ ಸುಮಲತಾರನ್ನು ಭೇಟಿ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್